ರಾಘವೇಂದ್ರ ಅವರಿಗೆ ಪಿಎಚ್‌ಡಿ ಪ್ರಶಸ್ತಿ ಪ್ರದಾನ

Saturday, October 12th, 2024
Raghavendra

ಮಂಗಳೂರುಃ ‘ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರಃ ಒಂದು ಅಧ್ಯಯನ “ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಯಶಸ್ವಿಯಾಗಿ ಮಾರ್ಗದರ್ಶನ ನೀಡಿದ್ದಾರೆ

ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಿ: ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು ಸೂಚನೆ

Wednesday, August 7th, 2024
bosuraju

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು . ಇಂದು ವಿಕಾಸಸೌಧದಲ್ಲಿ ಪಿಎಂಕೆಎಸ್‌ವೈ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಚರ್ಚಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ನಡೆಸಲಾಯಿತು. ಪಿಎಂಕೆಎಸ್‌ವೈ ಕಾಮಗಾರಿಗಳ ಪ್ರಗತಿ […]

ಧರ್ಮಸ್ಥಳದಲ್ಲಿ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಬಿಡುಗಡೆ

Tuesday, July 9th, 2024
siri-dhanya-siri-sari

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಡುಗಡೆಗೊಳಿಸಿ ಶುಭ ಹಾರೈಸಿದರು. ಹಿರಿಯ ಪತ್ರಕರ್ತ ಅನಂತ ಹುದಂಗಜೆ ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಯೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ […]

ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ-ಡಾ.ಶಾಂತಾರಾಮಶೆಟ್ಟಿ

Friday, June 28th, 2024
ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ-ಡಾ.ಶಾಂತಾರಾಮಶೆಟ್ಟಿ

ಮಂಗಳೂರು ;ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕಳೆದ 50 ವರ್ಷಗಳಲ್ಲಿ ಒಟ್ಟು 84 ಸಾವಿರ ಕೃತಕ ಕಾಲು ಸೇರಿದಂತೆ ಕೃತಕ ಅಂಗಾಂಗ ವಿತರಿಸಲಾಗಿದೆ. ಇದರಲ್ಲಿ ಶೇ.80 ಜನರಿಗೆ ವಿವಿಧ ಸಂಘಸಂಸ್ಥೆಗಳು, ದಾನಿಗಳ ನೆರವಿನಿಂದ ಪೂರ್ತಿ ಉಚಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂದು ಸೆಂಟರ್‌ನ ನಿರ್ದೇಶಕ, ಖ್ಯಾತ ಮೂಳೆ ತಜ್ಞ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.ದೈಹಿಕ ಊನತೆ […]

“ವಿದ್ಯಾರ್ಥಿಗಳು ಆಂತರಿಕವಾಗಿ ಅರಳುವಂತಾಗಲಿ”-ಡಾ. ವಿಜಯ ಸರಸ್ವತಿ

Wednesday, June 26th, 2024
vivekananda-college

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆಯ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಚಟುವಟಿಕೆಗಳಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಡಾ. ವಿಜಯ ಸರಸ್ವತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು “ಆಧುನಿಕ ಯುಗದಲ್ಲಿ ಸಾಕಷ್ಟು ಸಾಮಾಜಿಕ ಸ್ಥಿತ್ಯಂತರಗಳು ಆಗುತ್ತಿರುವುದನ್ನು ಕಾಣುತ್ತಿದ್ದೇವೆ. ಇದರ ಪರಿಣಾಮ ಬದಲಾದ ಭಾರತ. ವಾಣಿಜ್ಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳು […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ

Monday, June 24th, 2024
BS-Yedyurappa

ಸುಬ್ರಹ್ಮಣ್ಯ: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು. ಬೆಳ್ಳಿಗ್ಗೆ ದೇವಾಲಯಕ್ಕೆ ಬಂದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು. ಮಧ್ಯಾಹ್ನ ಸುಳ್ಯಕ್ಕೆ ತೆರಳುವ ಯಡಿಯೂರಪ್ಪ, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ

Saturday, March 16th, 2024
chakravarti-sulibale

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಬಿಜೆಪಿಯಿಂದ ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ […]

ಕೆ.ಎಸ್‌.ಈಶ್ವರಪ್ಪ ಭೇಟಿ, ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ ಸತ್ಯಜಿತ್ ಸುರತ್ಕಲ್‌

Saturday, March 16th, 2024
Satyajith

ಮಂಗಳೂರು : ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಫಲರಾದ ಸತ್ಯಜಿತ್ ಸುರತ್ಕಲ್‌ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ್ದಾರೆ. ಅದಕ್ಕಾಗಿ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಗೆ ಸಿದ್ಧತೆ ಮಾಡಿಕೊಂಡಿರುವ ಕೆ.ಎಸ್‌.ಈಶ್ವರಪ್ಪಅವರನ್ನು ಭೇಟಿಮಾಡಿದ್ದಾರೆ. ಕೆ.ಎಸ್‌. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ […]

ಪುತ್ತೂರು ಬಿಜೆಪಿ ನಾಯಕರ ಪ್ರಬಲ ವಿರೋಧದಿಂದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ತಡೆ

Saturday, March 16th, 2024
Arun-Kumar-Puttila

ಪುತ್ತೂರು: ಬಿಜೆಪಿಗೆ ಬಂಡಾಯವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಲು ಪುತ್ತೂರು ಬಿಜೆಪಿ ಮುಖಂಡರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸೇರ್ಪಡೆ ತಡೆಹಿಡಿಯಲಾಗಿದೆ. ಪುತ್ತಿಲ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧೆ ನಡೆಸಿದ ಬಳಿಕ ಪುತ್ತಿಲ ಪರಿವಾರವನ್ನು ಸ್ಥಾಪಿಸಿಕೊಂಡು ತನ್ನ ಅಸ್ತಿತ್ವವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಇದಕ್ಕೆ ಕಡಿವಾಣ ಹಾಕಲು ಅವರನ್ನು ಮತ್ತೊಮ್ಮೆ ಬಿಜೆಪಿಗೆ ಸೇರ್ಪಡೆಗೊಳಿಸಲು […]

ಕರ್ನಾಟಕ ತುಳು, ಕೊಂಕಣಿ, ಬ್ಯಾರಿ ಸಾಹಿತ್ಯ ಅಕಾಡೆಮಿಗಳಿಗೆ ಅಧ್ಯಕ್ಷರುಗಳ ನೇಮಕ

Saturday, March 16th, 2024
Karnataka-Academy

ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ 19ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿ ಕರ್ನಾಟಕ ಸರಕಾರದ ಸಚಿವಾಲಯ ಅಧೀನ ಕಾರ್ಯದರ್ಶಿ ಮುಂದಿನ ಮೂರು ವರ್ಷಗಳ ಅವಧಿಗೆ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರನ್ನಾಗಿ ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರನ್ನಾಗಿ ಪೃಥ್ವಿರಾಜ್, ಕುಂಬ್ರ ದುರ್ಗಾಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್ ಶೆಟ್ಟಿ, ಶೈಲೇಶ್ ಬಿನ್ […]