ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ಚೇತನ ಕುವೆಂಪು : ಮುಂಡಾಜೆ

Friday, December 29th, 2023
ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ಚೇತನ ಕುವೆಂಪು : ಮುಂಡಾಜೆ

ಮಂಗಳೂರು : ವಿಶ್ವ ಮಾನವ ರಾಗಲು ವಿದ್ಯೆಯ ಕೇಂದ್ರೀಕರಣ ಮಾತ್ರವಲ್ಲ ಸಮಗ್ರವಾದ ಜ್ಞಾನವನ್ನು ಗ್ರಹಿಸುವುದು ಮುಖ್ಯ ಎಂದು ಕಾಸರಗೋಡು ಪೆರಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಪ್ರೋ.ಚೇತನ್ ಮುಂಡಾಜೆ ಹೇಳಿದರು. ಅವರು ಶುಕ್ರವಾರ ನಗರದ ರಥಬೀದಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಮಾನವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕವಿತೆ, ವೈಚಾರಿಕ ಕಾದಂಬರಿ, ಮಹಾಕಾವ್ಯದಲ್ಲಿ ಸ್ಥಾಪಿತವಾದ ಚಿಂತನೆಗೆ ಹೊಸ ರೂಪವನ್ನು ನೀಡಿದರು. ಕೃಷಿ ಸದೃಶವಾದ ಬರವಣಿಗೆಯಲ್ಲಿ ಕುವೆಂಪು ಅನ್ನು ರಸ ಋಷಿ ಕವಿ […]

ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿ.30ಕ್ಕೆ “ಮಂಗಳೂರು ಕಂಬಳ”

Friday, December 29th, 2023
ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿ.30ಕ್ಕೆ "ಮಂಗಳೂರು ಕಂಬಳ"

ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು “ಮಂಗಳೂರು ಕಂಬಳ” ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಡಿ.30ರಂದು ಬೆಳಗ್ಗೆ 8:30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಕಂಬಳ ಉದ್ಘಾಟನೆಗೊಳ್ಳಲಿದೆ. ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಉದ್ಘಾಟನೆ ನೆರವೇರಿಸಲಿದ್ದು ರಾಣಿ […]

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮುಸ್ಲಿಂ ಮಹಿಳೆಯರಿಂದ ಪೊಲೀಸರಿಗೆ ದೂರು

Tuesday, December 26th, 2023
Kalladaka-Prabhakar-bhat

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರ ಸಮಿತಿಯ ವತಿಯಿಂದ ಸುರತ್ಕಲ್ ಪೊಲೀಸ್ ಠಾಣೆಗೆ ಆರ್‌ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ನೀಡಿದೆ. ಮಹಿಳೆಯರನ್ನು ಅವಮಾನಿಸಿ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ದೂರಿನಲ್ಲಿ ಮಹಿಳೆಯರು ಹೇಳಿದ್ದಾರೆ. ಕೋಮುಗಲಭೆಗೆ ಪ್ರಭಾಕರ ಭಟ್‌ ಪ್ರಚೋದನೆ ನೀಡಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ನೀಡಿರುವ ದೂರಿನಲ್ಲಿ […]

ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ

Tuesday, December 26th, 2023
Mugajja

ಮಂಗಳೂರು : ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ ಮೂಗಜ್ಜನ ಪಾತ್ರವನ್ನು ನವೀನ್ ಡಿ ಪಡೀಲ್ ಇವರು ನಿರ್ವಹಿಸಿದ್ದಾರೆ. ಇಡೀ ಸಿನಿಮಾದಲ್ಲಿ ಒಂದೇ ಒಂದು ಮಾತಿಲ್ಲದ, ಕೋಳಿಗಳನ್ನು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Wednesday, December 20th, 2023
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು. ಅವರನ್ನು ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಕುತ್ತಿಗೆಗೆ ಮರ ಕಡಿಯುವ ಯಂತ್ರ ತಗುಲಿ, ವ್ಯಕ್ತಿ ಸಾವು

Wednesday, December 20th, 2023
ಕುತ್ತಿಗೆಗೆ ಮರ ಕಡಿಯುವ ಯಂತ್ರ ತಗುಲಿ, ವ್ಯಕ್ತಿ ಸಾವು

ಬೆಳ್ತಂಗಡಿ : ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ. ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಅವರು ಕಟ್ಟಿಂಗ್ ಮೇಷಿನ್ ಹಿಡಿದು ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿದ್ದ […]

ಆಳ್ವಾಸ್ ವಿರಾಸತ್ ನಲ್ಲಿ ಗಾನ ವೈಭವ, ಬಿದಿರೆ ನಾಡಲ್ಲಿ ‘ಬಿನ್ನಿ’ ಬಕ್ತಮೀಸ್ ದಿಲ್ ಜೋಶ್

Friday, December 15th, 2023
Alvas Virasath

ಮೂಡಬಿದಿರೆ : ಪಡುವಣದಲ್ಲಿ ನೇಸರ ಹೊಂಗಿರಣ ಬೀರಿ ಬೈ ಬೈ ಹೇಳುತ್ತಿದ್ದರೆ, ಇತ್ತ ಮೂಡಣ ದಿಕ್ಕಿನ ಬಿದಿರೆಯ ನಾಡಲ್ಲಿ, ಶಿಕ್ಷಣ- ಸಾಂಸ್ಕೃತಿಕ ಕಾಶಿಯ ಬೀಡಲ್ಲಿ ನಾದ ನಿನಾದ ‘ಗಾನ ವೈಭವ’ ಮೊಳಗಿತು. ಹಿಂದಿ, ತಮಿಳು, ತೆಲುಗು, ಮಲಯಾಳಂ, ಕನ್ನಡ, ಬೆಂಗಾಲಿ, ಗುಜರಾತಿ ಮತ್ತು ಮರಾಠಿ ಸೇರಿದಂತೆ 19ಕ್ಕೂ ಅಧಿಕ ಭಾಷೆಗಳಲ್ಲಿ 3500 ಹಾಡುಗಳನ್ನು ಹಾಡಿದ ಖ್ಯಾತ ಹಿನ್ನೆಲೆ ಗಾಯಕ ಬಿನ್ನಿ ದಯಾಲ್ ಅವರ ಬಾಲಿವುಡ್, ಪಂಜಾಬ್, ತಮಿಳು ಸೇರಿದಂತೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದ ಸ್ವರ ಮಾಧುರ್ಯಕ್ಕೆ […]

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು

Thursday, December 14th, 2023
ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ 29ನೇ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಚಾಲನೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವಿರಾಸತ್ ಅನ್ನು ಗುರುವಾರ ಸಂಜೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. […]

ʼ ಆಸಕ್ತಿ, ಕನಸು, ದೂರದೃಷ್ಟಿ, ಹಾಸ್ಯಪ್ರಜ್ಞೆಯ ಸಂಗಮ ಯಶೋವರ್ಮ ʼ

Tuesday, December 5th, 2023
ʼ ಆಸಕ್ತಿ, ಕನಸು, ದೂರದೃಷ್ಟಿ, ಹಾಸ್ಯಪ್ರಜ್ಞೆಯ ಸಂಗಮ ಯಶೋವರ್ಮ ʼ

ಮಂಗಳೂರು: ಹೊಗಳಿಕೆಗೆ ಹಿಗ್ಗದೆ ಟೀಕೆಗೆ ಜಗ್ಗದೆ ಮೌಲ್ಯಾಧಾರಿತ ಶಿಸ್ತಿನ ಜೀವನ ನಡೆಸಿದ ಸಹೋದರನಂತಿದ್ದ ಡಾ. ಬಿ ಯಶೋವರ್ಮ ಅವರು ನಮಗೆ ಶ್ರೇಷ್ಠ ಜೀವನ ಮಾದರಿಯನ್ನು ಬಿಟ್ಟು ಹೋಗಿದ್ದಾರೆ, ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿಪ್ರಾಯಪಟ್ಟರು. ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಸಂಘ ಇವರ ಜಂಟಿ […]

ಕೂಲಿ ಕಾರ್ಮಿಕನ ಮೃತ ದೇಹ ತಳಂಗರೆಯ ಬಾವಿಯಲ್ಲಿ ಪತ್ತೆ

Tuesday, December 5th, 2023
ಕೂಲಿ ಕಾರ್ಮಿಕನ ಮೃತ ದೇಹ ತಳಂಗರೆಯ ಬಾವಿಯಲ್ಲಿ ಪತ್ತೆ

ಕಾಸರಗೋಡು : ತಮಿಳುನಾಡು ಮೂಲದ ಕೂಲಿ ಕಾರ್ಮಿಕನ ಮೃತ ದೇಹ ಮಂಗಳವಾರ ನಗರದ ತಳಂಗರೆಯ ಬಾವಿಯೊಂದರಲ್ಲಿ ಪತ್ತೆಯಾಗಿದೆ. ತಮಿಳುನಾಡು ತಿರುವಣ್ಣ ಮಲೈ ನ ಭೂಮಿನಾಥ್ (27) ಮೃತ ಪಟ್ಟ ಕಾರ್ಮಿಕ. ಭೂಮಿನಾಥ್ ಕಾಸರಗೋಡು ಪರಿಸರದಲ್ಲಿ ಕೂಲಿ ಕೆಲಸ ನಿರ್ವ ಹಿಸುತ್ತಿದ್ದರು. ಇವರು ವಾಸವಿದ್ದ ವಸತಿ ಗೃಹ ಸಮೀಪದ ಬಾವಿಯಲ್ಲಿ ಮಂಗಳವಾರ ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬಂದಿ ಗಳು ಮೃತ ದೇಹವನ್ನು ಮೇಲಕ್ಕೆ ತ್ತಿದ್ದು, ಬಳಿಕ ಮೃತ ದೇಹವನ್ನು ಮಹಜರು ನಡೆಸಿ, ಕಾಸರಗೋಡು […]