ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಆಯ್ಕೆ

Thursday, October 5th, 2023
praveenchandra-Alva

ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಅವರು ಗುರುವಾರ ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜಾ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು. ಮಾಜಿ ಶಾಸಕ ಜೆಆರ್ ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು. ಬಿಜೆಪಿಯ ತಪ್ಪುಗಳನ್ನು ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ […]

ವ್ಯಕ್ತಿಯನ್ನು ಕೊಲೆಗೈದು ಪೊದೆಗೆ ಎಸೆದ ಓರ್ವನ ಬಂಧನ

Wednesday, October 4th, 2023
Habeeb

ಕಾಸರಗೋಡು : ಕೊಲೆ ಪ್ರಕರಣದ ಆರೋಪಿಯೋರ್ವನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತ ದೇಹವನ್ನು ಪೊದೆಗೆ ಎಸೆದ ಘಟನೆಗೆ ಸಂಬಂಧಪಟ್ಟಂತೆ ಓರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಂಬಳೆ ಶಾಂತಿಪಳ್ಳದ ಅಬ್ದುಲ್ ರಶೀದ್ (42) ಎಂಬಾತನನ್ನು ಕೊಲೆ ಮಾಡಿದ ಆರೋಪಿ, ಅಭಿಲಾಷ್ ಯಾನೆ ಹಬೀಬ್ (34 ) ಬಂಧಿತ ಆರೋಪಿ. 2019 ರ ಅಕ್ಟೋಬರ್ 18 ರಂದು ಉಳಿಯತ್ತಡ್ಕದ ಶಾನ್ ವಾಸ್ ನನ್ನು ಕೊಲೆಗೈದು ಬಾವಿಗೆಸದ ಪ್ರಕರಣದ ಆರೋಪಿಯಾಗಿದ್ದ ರಶೀದ್ ನ ಮೃತದೇಹ ಸೋಮವಾರ ಬೆಳಿಗ್ಗೆ […]

ಗ್ರಾನೈಟ್ ತುಂಬಿದ ಲಾರಿ ಪಲ್ಟಿಯಾಗಿ, ಐವರು ಗಂಭೀರ

Wednesday, October 4th, 2023
granite-truck

ವಿಟ್ಲ : ಗ್ರಾನೈಟ್ ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು ಐವರು ಗಂಭೀರ ಗಾಯಗೊಂಡ ಘಟನೆ ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ನಡೆದಿದೆ. ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಐವರು ಕಾರ್ಮಿಕರ ಕೈಕಾಲು ಛಿದ್ರಗೊಂಡಿದೆ. ಇನ್ನು ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

Monday, October 2nd, 2023
ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೆರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . ಡಿ ಕೆ ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ […]

ಬಾರ್‌ನಲ್ಲಿ ಪಾರ್ಟಿ ಮಾಡಿದ ವಿದ್ಯಾರ್ಥಿಗಳು, ಇನ್‌ಸ್ಟಾಗ್ರಾಂ ನೋಡಿ ಪೊಲೀಸರೇನು ಮಾಡಿದ್ದು ಗೊತ್ತಾ?

Sunday, October 1st, 2023
ಬಾರ್‌ನಲ್ಲಿ ಪಾರ್ಟಿ ಮಾಡಿದ ವಿದ್ಯಾರ್ಥಿಗಳು, ಇನ್‌ಸ್ಟಾಗ್ರಾಂ ನೋಡಿ ಪೊಲೀಸರೇನು ಮಾಡಿದ್ದು ಗೊತ್ತಾ?

ಉಡುಪಿ: ವಿದ್ಯಾರ್ಥಿಗಳು ಬಾರ್‌ನಲ್ಲಿ ಪಾರ್ಟಿ ಮಾಡಿದ ಚಿತ್ರಗಳು ಮತ್ತು ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ನಂತರ, ಪೊಲೀಸರು ಬಾರ್ ಮೇಲೆ ದಾಳಿ ನಡೆಸಿದ್ದು, ಗುಂಪೊಂದನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್‌ನಲ್ಲಿ ಅನುಮತಿಯಿಲ್ಲದೆ ವಿದ್ಯಾರ್ಥಿಗಳು ಹುಕ್ಕಾ ಸೇದಿ, ಮದ್ಯ ಸೇವಿಸಿ ಪಾರ್ಟಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ತಡರಾತ್ರಿ ಪಾರ್ಟಿಯ ಚಿತ್ರಗಳನ್ನು […]

ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ

Friday, September 29th, 2023
ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು : ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಮಳೆ ಮುಂದುವರಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ. ಬೆಳಗ್ಗೆ ಎಡೆಬಿಡದೆ ಮಳೆ ಸುರಿದಿತ್ತು. ಮಧ್ಯಾಹ್ನದ ಬಳಿಕ ಆಗಾಗ ಮಳೆ ಕಾಣಿಸಿಕೊಳ್ಳುತ್ತಾ ಇತ್ತು. ದಿನವಿಡೀ ಮೋಡ ಮುಸುಕಿದ ವಾತಾವರಣ ಹಾಗೆಯೇ ಮುಂದುವರಿದಿದೆ. ಶುಕ್ರವಾರ ಬೆಳಗ್ಗಿನ ವರೆಗೆ ಜಿಲ್ಲೆಯ ಸುಳ್ಯದಲ್ಲಿ ಗರಿಷ್ಠ 44.3 ಮಿಲಿ ಮೀಟರ್ ಮಳೆ ದಾಖಲಾಗಿದೆ. […]

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಆಶಯ

Thursday, September 28th, 2023
ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಆಶಯ

ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅವರು ತನ್ನ ರಂಗಭೂಮಿ ಹಾಗೂ […]

ನೆರೆಮನೆಗೆ ಕಲ್ಲೆಸೆದು ಅದೇ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ಬೆಂಕಿ ಹಚ್ಚಿದ ಗಾಂಜಾ ವ್ಯಸನಿ

Tuesday, September 26th, 2023
Auto-fire

ಉಡುಪಿ : ನೆರೆಮನೆಗೆ ಕಲ್ಲೆಸೆದು ಅದೇ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ಉಡುಪಿಯ ನಿಟ್ಟೂರು ಹನುಮಂತ ನಗರದಲ್ಲಿ ನಡೆದಿದೆ. ಕೃತ್ಯವೆಸಗಿದೆ ವ್ಯಕ್ತಿಯನ್ನು ಖಲೀಮ್ ಎಂದು ಗುರುತಿಸಲಾಗಿದೆ. ದಿವಾಕರ ಬೆಲ್ಚಡ ಎಂಬವರಿಗೆ ಸೇರಿದ ಪ್ಯಾಸೆಂಜರ್ ರಿಕ್ಷಕ್ಕೆ ಖಲೀಮ್ ಬೆಂಕಿ ಹಚ್ಚಿದ್ದು, ಅವರ ಮನೆಯ ಮೇಲೆ ಕಲ್ಲು ಎಸೆದು ದಾಂಧಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಕಲ್ಲೆಸೆದ ಘಟನೆ ನಡೆದಾಗ ಸ್ಥಳಕ್ಕೆ ಉಡುಪಿ ಪೊಲೀಸ್ ರ ಬಂದು ವಾರ್ನಿಂಗ್ ನೀಡಿ ತೆರಳಿದ್ದರು. ಪೊಲೀಸರು ವಾಪಾಸ್ ತೆರಳಿದ ಬಳಿಕ […]

ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್ ರದ್ದುಗೊಳಿಸಿದ ಮೇಯರ್

Tuesday, September 26th, 2023
ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್ ರದ್ದುಗೊಳಿಸಿದ ಮೇಯರ್

ಮಂಗಳೂರು: ಆ್ಯಂಟನಿ ವೇಸ್ಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಹೊಸ ಟೆಂಡರ್ ರದ್ದುಗೊಳಿಸಲು ಮನಪಾ ಸಾಮಾನ್ಯ ಸಭೆ ನಿರ್ಣಯಿಸಿದೆ. ಮಾತ್ರವಲ್ಲದೆ, ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ಹೊಸ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ವಿಶೇಷ ಸಭೆಯಲ್ಲಿ ಅದನ್ನು ಮಂಡಿಸಿ ಮಂಜೂ ರಾತಿ ಪಡೆಯಲು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ತಮ್ಮ ಪ್ರಥಮ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ನಡೆಸುತ್ತಿದ್ದ […]

ಸುಳ್ಯ: ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿಡಿಪ್, ಹಿಂದೂ ಸಂಘಟನೆಯ ಆಕ್ರೋಶ

Saturday, September 23rd, 2023
ಸುಳ್ಯ: ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿಡಿಪ್, ಹಿಂದೂ ಸಂಘಟನೆಯ ಆಕ್ರೋಶ

ಸುಳ್ಯ: ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಳೆಗೇಟು ಗಣೇಶ ಚತುರ್ಥಿ ಸಂದರ್ಭ ಗಣೇಶ ಹಬ್ಬದ ಹೆಸರಿನಲ್ಲಿ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿತ್ತು. ಈ ಲಕ್ಕಿ ಕೂಪನ್ ಗೆ ಸುಳ್ಯ ಪರಿಸರದಲ್ಲಿ ವಿರೋಧ ವ್ಯಕ್ತವಾಗಿತ್ತು. ಹಿಂದೂ ಧರ್ಮದ ಹಬ್ಬದಲ್ಲಿ ಇಂತಹ ಲಕ್ಕಿ ಕೂಪನ್ ಮಾಡಿದವನ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿತ್ತು. ಇದೀಗ […]