ಸರಕಾರಿ ಸಾಲಮನ್ನಾದ ಹೆಚ್ಚಿನ ಲಾಭ ಪಡೆದವರು ದಕ್ಷಿಣ ಕನ್ನಡ, ಉಡುಪಿ ಮೀನುಗಾರರು
Sunday, May 31st, 2020ಭಟ್ಕಳ : ರಾಜ್ಯ ಸರಕಾರ ಘೋಷಣೆ ಮಾಡಿದ್ದ ಮೀನುಗಾರರ ಸಾಲಮನ್ನಾದ ಲಾಭವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯ ಮೀನುಗಾರರೇ ಹೆಚ್ಚಿನ ಪ್ರಮಾಣದಲ್ಲಿ ಪಡೆದಿದ್ದಾರೆ ಎಂದು ಇಲ್ಲಿಯ ಮೀನುಗಾರರ ಮುಖಂಡ ವಸಂತ ಖಾರ್ವಿ ಹೇಳಿದ್ದಾರೆ. ಅವರು ನಗರದ ಮಾವಿನಕುರ್ವೆ ಬಂದರಿನ ಬೋಟ್ ಯೂನಿಯನ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಎಲ್ಲ ಸಮುದಾಯದವರಿಗೂ ನೆರವು ನೀಡುತ್ತಿದೆ. ಆದರೆ ಮೀನುಗಾರರನ್ನು ಕಡೆಗಣಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ. ಮೀನು ಕ್ಷಾಮ ಕಳೆದೆರಡು ವರ್ಷಗಳಿಂದ ಮೀನುಗಾರರನ್ನು […]