ಉಡುಪಿ ಜಿಲ್ಲೆಯಲ್ಲಿ ಮತ್ತೆ ಎರಡು ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆ
Sunday, March 29th, 2020ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾದ ನಾಲ್ಕು ದಿನಗಳ ಬಳಿಕ ಇಂದು ಮತ್ತೆ ಎರಡು ಮಂದಿಯಲ್ಲಿ ಈ ಸೋಂಕು ಪಾಸಿಟಿವ್ ವರದಿ ಬಂದಿದೆ. ದಕ್ಷಿಣ ಕನ್ನಡದಲ್ಲಿ ಕೋವಿಡ್ 19 ಸೋಂಕು ಪೀಡಿತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಉಡುಪಿಯಲ್ಲಿ ಮಾತ್ರ ಈ ಮಾಹಾಮಾರಿ ನಿಯಂತ್ರಣದಲ್ಲಿತ್ತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಪತ್ತೆಯಾಗಿರುವುದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕವನ್ನು ಹೆಚ್ಚು ಮಾಡಿದೆ. ಒಟ್ಟು ತಪಾಸಣೆ 1,992 ಮಂದಿ. 14+28 ದಿನಗಳ ಮನೆ ನಿಗಾ ಪೂರೈಸಿದವರು 1,055. […]