ಧರ್ಮಸ್ಥಳದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯ ಲೋಕಾರ್ಪಣೆ, ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ
Thursday, October 25th, 2018ಉಜಿರೆ: ಕೇಂದ್ರ ಸರ್ಕಾರದ ನೂರು ಕೋಟಿ ರೂ. ಅನುದಾನದೊಂದಿಗೆ ಬಿ.ಸಿ.ರೋಡ್-ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಗೊಳಿಸಲಾಗು ವುದು. 2019 ರ ಫೆಬ್ರವರಿಯಲ್ಲಿ ಧರ್ಮಸ್ಥಳದಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಧರ್ಮಸ್ಥಳವನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 23.5 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಬುಧವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಆಚರಣೆ ಸಂದರ್ಭ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ […]