ಉಳ್ಳಾಲದಲ್ಲಿ ಸುಮಾರು 41 ಮನೆಗಳು ಹಾನಿ.. ಪರ್ಯಾಯ ನಿವೇಶನ ಗುರುತಿಸಿ ನೀಡಲು ಖಾದರ್ ಆದೇಶ
Tuesday, July 17th, 2018ಮಂಗಳೂರು: ಉಳ್ಳಾಲ, ಸೋಮೇಶ್ವರ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಲ್ಲಿ ಕಡಲಕೊರೆತ ತೀವ್ರಗೊಂಡು ಸುಮಾರು 41 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇವರಿಗೆ ಪರ್ಯಾಯ ನಿವೇಶನ ಗುರುತಿಸಿ ನೀಡಲು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಆದೇಶಿಸಿದ್ದಾರೆ. ಅವರು ಈ ಬಗ್ಗೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ, ಕಡಲ್ಕೊರೆತದಿಂದ ಹೆಚ್ಚು ಅಪಾಯದಲ್ಲಿರುವ ಇಲ್ಲಿನ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಂದಿನ 15 ದಿನದಲ್ಲಿ ಸೂಕ್ತವಾದ ನಿವೇಶನ ಗುರುತಿಸಿ, ಮಂಜೂರುಗೊಳಿಸಬೇಕು ಎಂದು ಮಂಗಳೂರು ತಹಸೀಲ್ದಾರ್ಗೆ ತಿಳಿಸಿದರು. ಉಳ್ಳಾಲ, ಸೋಮೇಶ್ವರ, ಸಸಿಹಿತ್ಲು […]