‘ಮಂಗಳೂರು ದಕ್ಷಿಣ’ದಲ್ಲಿ ಬಿಜೆಪಿ ಜಯಭೇರಿಗೆ ಹಾಗೂ ಕಾಂಗ್ರೆಸ್ ಸೋಲಿಗೆ ಕಾರಣ ಏನು ?

Thursday, May 17th, 2018
Vedavyas

ಮಂಗಳೂರು:  ಮಂಗಳೂರು ದಕ್ಷಿಣ ಕ್ಷೇತ್ರವನ್ನು ಮತ್ತೆ ಬಿಜೆಪಿ ವಶಪಡಿಸಿಕೊಂಡಿದೆ. ಈ ಹಿಂದೆ 2013ರ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ದ ತನ್ನ ಅಸಮಾಧಾನ ಹೊರಹಾಕಿ ಕಾಂಗ್ರೆಸ್ ಅಭ್ಯರ್ಥಿಯನ್ನುಗೆಲ್ಲಿಸಿದ್ದ ಮತದಾರ ಪ್ರಭು ಈ ಬಾರಿ ಮತ್ತೆ ಬಿಜೆಪಿಗೆ ಜೈ ಎಂದಿದ್ದಾನೆ. ಅಭಿವೃದ್ಧಿಯ ಜಪದೊಂದಿಗೆ ಮತ್ತೆ ಜನರ ಮುಂದೆ ಹೋಗಿದ್ದ ಕಾಂಗ್ರೆಸ್ ನ ಕೈ ಹಿಡಿಯಲು ಮತದಾರ ನಿರಾಕರಿಸಿದ್ದಾನೆ. ಇಲ್ಲಿ ಅತಿಯಾದ ಆತ್ಮ ವಿಶ್ವಾಸವೇ ಕಾಂಗ್ರೆಸಿಗೆ ಮುಳುವಾಯಿತೇ ಎಂದು ವಿಶ್ಲೇಷಿಸಲಾಗುತ್ತಿದೆ. ಅದಲ್ಲದೇ ನಮ್ಮ ಕಾರ್ಪೊರೇಟರ್ ಗಳೇ ಸೋಲಿಗೆ ಕಾರಣರಾದರು ಎನ್ನುವ ಅನುಮಾನಗಳು […]

ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತ..!

Wednesday, May 16th, 2018
governor

ಬೆಂಗಳೂರು: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿದರೆ ನಾಳೆ ರಾಜಭವನದಲ್ಲಿ ಯಡಿಯೂರಪ್ಪ ಒಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಬಹುಮತ ಸಾಬೀತಿನ ನಂತರ ಸಂಪುಟ ರಚನೆ ಮಾಡಲಿದ್ದಾರೆ ಎನ್ನಲಾಗಿದೆ. ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತವಾಗಿದ್ದು, ಇಂದು ಸಂಜೆ 6 ಗಂಟೆ ಬಳಿಕ ರಾಜ್ಯಪಾಲ ವಜುಭಾಯ್ ವಾಲಾ ತಮ್ಮ ನಿರ್ಧಾರ ಪ್ರಕಟ ಮಾಡಲಿದ್ದಾರೆ. ರಾಜ್ಯಪಾಲರು ಅನುಮತಿ ಕೊಟ್ಟರೆ ಮಾತ್ರ ನಾಳೆ ಯಡಿಯೂರಪ್ಪ ಒಬ್ಬರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ರಾಜಭವನದಲ್ಲಿ ನಾಳೆ ಮಧ್ಯಾಹ್ನ […]

ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದ ನಟ ದರ್ಶನ್..!

Saturday, May 5th, 2018
Darshan

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಏರತೊಡಗಿದ್ದು , ಸಿನೆಮಾ ಲೋಕದ ಕೆಲವರು ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಶನಿವಾರ ನಟ ದರ್ಶನ್ ‌ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ ನಾಗನಹಳ್ಳಿಯಲ್ಲಿ ಜೆಡಿಎಸ್ ‌ ಕಾಯಕರ್ತರು ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿದರು. ದರ್ಶನ್ ಹಿರಿಯ ರಾಜಕಾರಣಿ ಅಂಬರೀಷ್ ‌ಅವರ ಸಚಿವ ಸ್ಥಾನ ಕಸಿದುಕೊಂಡಾಗ ಮಾತನಾಡಿರಲಿಲ್ಲ. ಕಾವೇರಿ […]

ಮಂಗಳೂರಿನಲ್ಲಿ ಎಂಇಪಿಯ ಪ್ರಣಾಳಿಕೆ ಬಿಡುಗಡೆ

Thursday, April 26th, 2018
mangaluru

ಮಂಗಳೂರು: ಆಲ್ ಇಂಡಿಯಾ ಮಹಿಳಾ ಎಂಪವರ್‌ಮೆಂಟ್ ಪಾರ್ಟಿಯ ಪ್ರಣಾಳಿಕೆಯನ್ನು ಎಂಇಪಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಪಿ.ಎಂ. ಅಹಮ್ಮದ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೀನ ದಲಿತರ ಬಡವರ ವಿರುದ್ಧ ನಡೆಯುವ ಶೋಷಣೆ ಹಾಗೂ ಮಹಿಳೆಯರ ಶೋಷಣೆ ವಿರುದ್ಧ ಸಮಾಜದಲ್ಲಿ ಕೈಜೋಡಿಸಲು ಎಂಇಪಿ ಪಕ್ಷಕ್ಕೆ ಮತ ನೀಡಬೇಕು. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸುಮಾರು 125 ಹಾಸಿಗೆಗಳ ವ್ಯವಸ್ಥಿತ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಣ ಉತ್ತಮ ರೀತಿಯಲ್ಲಿ ನಡೆಯಲು ಶಿಕ್ಷಕರ ನೇಮಕಾತಿಯಾಗಬೇಕು. ಉತ್ತರ […]

ಬಿಜೆಪಿಯ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನಕ್ಕೆ ಕಾಂಗ್ರೆಸ್ ವಿರೋಧ

Wednesday, April 25th, 2018
ivan-douza

ಮಂಗಳೂರು: ಬಿಜೆಪಿಯು ಎ.25ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನವು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಚುನಾವಣಾಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮನೆಯ ಮೇಲಿನ ಬಿಜೆಪಿ ಧ್ವಜವನ್ನು ಚುನಾವಣಾ ಆಯೋಗ ತೆರವುಗೊಳಿಸಿದ್ದರಿಂದ ಅಸಮಾಧಾನಗೊಂಡ ಬಿಜೆಪಿಯು ಎ.25ರಂದು ರಾಜ್ಯಾದ್ಯಂತ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನ ಹಮ್ಮಿಕೊಂಡಿದೆ. ಅಂದು ಮನೆಯ ಮೇಲೆ […]

ಮಂಗಳೂರು ನೂತನ ಪೊಲೀಸ್‌‌ ಕಮೀಷನರ್‌ ಆಗಿ ವಿಪುಲ್‌ ಕುಮಾರ್‌ ಅಧಿಕಾರ ಸ್ವೀಕಾರ

Thursday, April 19th, 2018
vipul-kumar

ಮಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ವಿಪುಲ್ ಕುಮಾರ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದರು. ವಿಪುಲ್ ಕುಮಾರ್ ಅವರಿಗೆ ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಬೇರೆ ವರ್ಗಾವಣೆಗೊಂಡಿರುವ ಮಂಗಳೂರು ಪೊಲೀಸ್ ಕಮೀಷನರ್‌ ಟಿ.ಆರ್.ಸುರೇಶ್ ಅಧಿಕಾರ ಹಸ್ತಾಂತರಿಸಿದರು. 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ವಿಪುಲ್ ಕುಮಾರ್ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಇದರ ನಿರ್ದೇಶಕ ಮತ್ತು ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ದ.ಕನ್ನಡದಲ್ಲಿ 2013ರಲ್ಲಿ ನೆಲ ಕಚ್ಚಿದ್ದ ಬಿಜೆಪಿ… ಈ ಬಾರಿ ಮತ್ತೆ ಅರಳಲು ಹರಸಾಹಸ!

Monday, April 16th, 2018
BJP

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೋಮು ದ್ವೇಷದ ರಾಜಕಾರಣದೊಂದಿಗೆ ಈಗಾಗಲೇ ಚುನಾವಣಾ ಪ್ರಚಾರ ಆರಂಭವಾಗಿದ್ದು, ಮತ ಸೆಳೆಯುವ ಪ್ರಯತ್ನವನ್ನು ನಾಯಕರು ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷದ ರಾಜಕಾರಣ ಇಲ್ಲದೇ ರಾಜಕಾರಣ ನಡೆಯುವುದಿಲ್ಲವೇನೋ ಎಂಬ ಪರಿಸ್ಥಿತಿ ಇದೆ. ಇದು ಪ್ರತಿ ಚುನಾವಣೆಯಲ್ಲೂ ಸಾಮಾನ್ಯವಾಗಿದ್ದು, ಆದ್ದರಿಂದ ಈ ಚುನಾವಣೆಯಲ್ಲೂ ಅದು ಮುಂದುವರಿದಿದೆ. ಬಿಜೆಪಿಯ ಪ್ರಬಲ ಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ […]

ಸೌದಿ ಅರೇಬಿಯಾದಲ್ಲಿ ಕಾಂಗ್ರೆಸ್ ಸಭೆ

Thursday, April 12th, 2018
saudi-arabia

ಮಂಗಳೂರು: ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಸಭೆಯು ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ ನೇತೃತ್ವದಲ್ಲಿ ಜರಗಿತು. ಜೀವನೋಪಾಯಕ್ಕಾಗಿ ದೇಶ ಬಿಟ್ಟು ವಿದೇಶದಲ್ಲಿ ನಾವು ದುಡಿಯುತ್ತಿದ್ದರೂ ದೇಶದ ಹಿತ ಚಿಂತನೆಯಿಂದ ದೇಶಕ್ಕೆ ತೆರಳಿ ಮತದಾನ ಮಾಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಚುನಾವಣೆಯಲ್ಲಿ ಮತದಾನ ಮಾಡುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಯೋಗ್ಯ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಹಿತದೃಷ್ಟಿಯಿಂದ ಮತ್ತು ಎನ್‌ಆರ್‌ಐಗಳ ಭವಿಷ್ಯದ ದೃಷ್ಟಿಯಿಂದ ಮುಂದಿನ ಕರ್ನಾಟಕ ವಿಧಾನಸಭಾ […]

ಕಾಂಗ್ರೆಸ್‌ ಉಪವಾಸ ಸತ್ಯಾಗ್ರಹ…ನಾಯಕರ ಉಪಹಾರ ಸೇವನೆ ಫೋಟೋ ಹರಿಬಿಟ್ಟ ಬಿಜೆಪಿ!

Monday, April 9th, 2018
delhi-congress-2

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಉಪವಾಸ ನಿರಶನ ಕೈಗೊಂಡಿದೆ. ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದ ರಾಜ್‌ಘಾಟ್‌ನಲ್ಲಿ ಕೈ ನಾಯಕರು ಸತ್ಯಾಗ್ರಹ ನಡೆಸಿದರು. ದಲಿತರ ಮೇಲಿನ ದೌರ್ಜನ್ಯ ತಡೆ ಹಾಗೂ ಸಂಸತ್ತಿನ ಕಲಾಪ ಸರಿಯಾಗಿ ನಿರ್ವಹಣೆ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ. ದೆಹಲಿಯಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗಿತು. ಈ ವೇಳೆ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ […]

ಕರ್ನಾಟಕ ಸೇವಾ ವೃಂದ ದರ ನೂತನ ವೇದಿಕೆ ಶಿಲಾನ್ಯಾಸ

Saturday, March 31st, 2018
mohiuddin-bava

ಮಂಗಳೂರು: ಕರ್ನಾಟಕ ಸೇವಾ ವೃಂದ ದರ ನೂತನ ವೇದಿಕೆಗೆ ಶಾಸಕ ಮೊದಿನ್ ಬಾವಾ ಮಾ.26 ರಂದು ಶಿಲಾನ್ಯಾಸ ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಪೀಟರ್ ಡಿಸೋಜ, ಜೀವನ್ ನಾಥ್, ರಾಘವೇಂದ್ರ ರಾವ್,ಪದ್ಮನಾಭ್, ಹರೀಶ್ ,ಸುಧಾಮ ಶೆಟ್ಟಿ, ಜಗದೀಶ್ ಹೊಸಬೆಟ್ಟು ಉಪಸ್ಥಿತರಿದ್ದರು.