ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ

Wednesday, February 14th, 2018
shivrathri

ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ ಶ್ರದ್ಧಾ-ಭಕ್ತಿಯಿಂದ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಜಾತ್ರೆ, ರುದ್ರಾಭಿಷೇಕ, ವಿಶೇಷ ಪೂಜೆಯ ಸಂಭ್ರಮ ನಡೆಯುತ್ತಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವ, ಬೆಳ್ಳಿ ರಥೋತ್ಸವ, ಮಹಾರುದ್ರಾಭಿಷೇಕ, ವಿಷ್ಣು ಬಲಿ ಉತ್ಸವ, ರಥೋತ್ಸವ, ಶಿವಬಲಿ, ಜಾಗರಣೆ ಬಲಿ, ಕಟ್ಟೆಪೂಜೆ, ಕೆರೆದೀಪ, ಮಂಟಪ ಪೂಜೆ ನೆರವೇರಿದೆ. ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ರಂಗಪೂಜೆ, ಬಂಡಿ ಉತ್ಸವ, ಬೆಳ್ಳಿ ರಥೋತ್ಸವ, ಇದೇ […]

ಫೆ.18ರಿಂದ ಫೆ. 25ರವರೆಗೆ ಕುಡುಪು ದೇವಳದಲ್ಲಿ ಬ್ರಹ್ಮಕಲಶೋತ್ಸವ

Saturday, February 3rd, 2018
Kudupu Temple

ಮಂಗಳೂರು: ಸುಮಾರು ನೂರು ವರ್ಷಗಳ ನಂತರ  ಇತಿಹಾಸ ಪ್ರಸಿದ್ಧ ಕ್ಷೇತ್ರ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಿದ್ಧತೆ ನಡೆಯುತ್ತಿದೆ. ಫೆ.18ರಿಂದ ಫೆ. 25ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದು  ಶತಮಾನದ ವೈಭವದ ಬ್ರಹ್ಮಕಲಶಾಭಿಷೇಕ ಎಂದು ವಾಸ್ತು ತಜ್ಞ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಕೆ.ಕೃಷ್ಣರಾಜ ತಂತ್ರಿ ತಿಳಿಸಿದರು. ಕ್ಷೇತ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆ. 25ರಂದು ಅನಂತ ಪದ್ಮನಾಭ ದೇವರಿಗೆ  ಬೆಳಗ್ಗೆ 6:45ರಿಂದ 7:45ರವರೆಗೆ ಬ್ರಹ್ಮಕಲಶಾಭಿಷೇಕ  ನಡೆಯಲಿದೆ ಎಂದು ತಿಳಿಸಿದರು. ಧಾರ್ಮಿಕ ದತ್ತಿ ಇಲಾಖೆಯಿಂದ ಅನುಮೋದಿಸಲ್ಪಟ್ಟ 21 […]

ಸಹ್ಯಾದ್ರಿ ಸಂಚಯದಿಂದ ‘ಪಶ್ಚಿಮ ಘಟ್ಟ ಉಳಿಸಿ’ ಅಭಿಯಾನ

Friday, January 26th, 2018
sanchaya

ಮಂಗಳೂರು: ಸಹ್ಯಾದ್ರಿ ಸಂಚಯದಿಂದ ‘ಪಶ್ಚಿಮ ಘಟ್ಟ ಉಳಿಸಿ’ ಅಭಿಯಾನವು ಗುರುವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ವಿಶಿಷ್ಟ ರೀತಿಯಲ್ಲಿ ನಡೆಯಿತು. ಕಾರ್ಯಕ್ರಮದ ರೂವಾರಿ ದಿನೇಶ್ ಹೊಳ್ಳ ಕಪ್ಪು ಬಟ್ಟೆ ಧರಿಸಿದರೆ ಇತರರು ಮುಖವಾಡ ಧರಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸರ ಪ್ರೇಮಿಗಳ ವಿರೋಧದ ಮಧ್ಯೆ ಪಡೀಲ್ ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಿಸಲು ಮುಂದಾದ ಕ್ರಮವನ್ನು ಖಂಡಿಸಿ ಮುರಿದು ಬಿದ್ದ ಮರದ ಕೊಂಬೆ, ಮೊಟ್ಟೆ ಒಡೆದು ಹೊರಗೆ ಬಂದ ಹಕ್ಕಿ ಮರಿಗಳ ಸಾವಿನ ದೃಶ್ಯವನ್ನು ಪ್ರದರ್ಶಿಸಿ ಅಣಕಿಸಲಾಯಿತು. […]

ಆಳ ಸಮುದ್ರದಲ್ಲಿ ಅಪಾಯದಲ್ಲಿದ್ದ 10 ಮೀನುಗಾರರ ರಕ್ಷಣೆ

Tuesday, January 23rd, 2018
mangaluru

ಮಂಗಳೂರು: ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಕೇರಳದ ಕಣ್ಣೂರಿನ 10 ಮಂದಿ ಮೀನುಗಾರರನ್ನು ಕರಾವಳಿ ತಟ ರಕ್ಷಣಾ ಪಡೆ ಭಾನುವಾರ ತಡರಾತ್ರಿ ರಕ್ಷಿಸಿದೆ. ಅರಬ್ಬಿ ಸಮುದ್ರದಲ್ಲಿ ಮಲ್ಪೆಯ ಪಶ್ಚಿಮಕ್ಕೆ 100 ನಾಟಿಕಲ್ ಮೈಲ್ಸ್ ದೂರದಲ್ಲಿ ಈ ಘಟನೆ ನಡೆದಿದೆ. ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಯಾಂತ್ರಿಕ ತೊಂದರೆ ಕಾಣಿಸಿಕೊಂಡು ದೋಣಿಯೊಳಕ್ಕೆ ನೀರು ನುಗ್ಗಲಾರಂಭಿಸಿತ್ತು. ಈ ಹಿನ್ನೆಲೆಯಲ್ಲಿ ದೋಣಿಯಲ್ಲಿದ್ದ 10 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಈ ಕುರಿತು ಭಾರತೀಯ ತಟ ರಕ್ಷಣಾ ಪಡೆಯ ಮಂಗಳೂರು ಕೇಂದ್ರಕ್ಕೆ […]

ರಸ್ತೆ ಇದ್ದಲ್ಲಿ ಸೇತುವೆಯಿಲ್ಲ; ಸೇತುವೆ ಇದ್ದಲ್ಲಿ ರಸ್ತೆಯಿಲ್ಲ

Monday, January 22nd, 2018
bridge

ಬಜಪೆ: ರಸ್ತೆ ಇದ್ದಲ್ಲಿ ಸೇತುವೆಯಿಲ್ಲ; ಸೇತುವೆ ಇದ್ದಲ್ಲಿ ರಸ್ತೆಯಿಲ್ಲ ಇದು ಪಡುಪೆರಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುರುಮದ ಕಟ್ಟೆ ಸೇತುವೆ, ಈಶ್ವರಕಟ್ಟೆ- ಪರಕಟ್ಟ ಬನ- ಮುಚ್ಚಾ ರಸ್ತೆಯ ದುರವಸ್ಥೆ. ಪಡುಪೆರಾರ ಬಲವಾಂಡಿ ದೈವಸ್ಥಾನದ ಬಳಿ ಕುರುಮದ ಕಟ್ಟೆಯಲ್ಲಿ ಸೇತುವೆ ನಿರ್ಮಾಣವಾಗಿದೆ. ಆದರೆ ಅದಕ್ಕೆ ಸಂಪರ್ಕ ರಸ್ತೆಯೇ ಇಲ್ಲ. ಅದೇ ರೀತಿ ಮೂಡು ಪೆರಾರದ ಈಶ್ವರ ಕಟ್ಟೆ- ಪರಕಟ್ಟ ಬನ- ಮುಚ್ಚಾರು ರಸ್ತೆ ಇದ್ದರೂ ಇಲ್ಲಿ ಅಗತ್ಯವಾಗಿ ಬೇಕಾದ ಸೇತುವೆಯೇ ಇಲ್ಲವಾಗಿದೆ. ಇದರಿಂದ ಪಡುಪೆರಾರ ಗ್ರಾಮಸ್ಥರು ನಿತ್ಯವೂ ಸಂಕಟ […]

ಸಾಧನೆ ಜನರಿಗೆ ತಿಳಿಸಿ ಕಾಂಗ್ರೆಸ್‌ ಗೆಲ್ಲಿಸಿ: ಶಾಸಕಿ ಶಕುಂತಳಾ ಶೆಟ್ಟಿ

Friday, January 19th, 2018
shankuntala-shetty

ಪುತ್ತೂರು: ವಿಧಾನಸಭಾ ಕ್ಷೇತ್ರವೊಂದರ ಅಭಿವೃದ್ಧಿಗೆ 800 ಕೋಟಿ ರೂ. ಅನುದಾನ ತರಿಸುವ ಸಾಧನೆ ಮಾಡಿದ್ದು, ಪಕ್ಷದ ನರ-ನಾಡಿಗಳನ್ನು ಅರಿತಿರುವ ಕಾರ್ಯಕರ್ತರು ಮುಂದಿನ ಬಾರಿಯೂ ಕಾಂಗ್ರೆಸ್‌ ಗೆಲುವಿಗೆ ತಮ್ಮ ಶ್ರಮವನ್ನು ತೋರ್ಪಡಿಸಬೇಕು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ವಿನಂತಿಸಿದರು. ಸುಭದ್ರಾ ಸಭಾಂಗಣದಲ್ಲಿ ಗುರುವಾರ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್‌ ವ್ಯಾಪ್ತಿಯ ಬೂತ್‌ ಪ್ರತಿನಿಧಿಗಳ ತರಬೇತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು. ರಾಜ್ಯ ಸರಕಾರದ ಸಾಧನಾ ಸಮಾವೇಶಕ್ಕೆ ಪುತ್ತೂರಿನಲ್ಲಿ ದಾಖಲೆಯ […]

ಕಾಂಗ್ರೆಸ್‌ v/s ಬಿಜೆಪಿ ನೇರ ಹಣಾಹಣಿ

Wednesday, January 17th, 2018
j-r-lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಕೆರೆಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇಲ್ಲಿ ನೇರಾನೇರ ಸ್ಪರ್ಧೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಜೆ.ಆರ್.ಲೋಬೋ. ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಕ್ಷೇತ್ರದ ಟಿಕೆಟ್‌ಗೆ ಪ್ರಯತ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು ಅವರಾದರೂ ಜೆ.ಆರ್.ಲೋಬೋಗೆ ಟಿಕೆಟ್ ನಿರಾಕರಿಸಲು ಕಾರಣಗಳು ಇಲ್ಲ. ಬಿಜೆಪಿ ಕ್ಷೇತ್ರದಿಂದ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂಬುದು ಸದ್ಯದ ಸುದ್ದಿ. ಉದ್ಯಮಿಗಳಾದ […]

ಪಡೀಲಿನ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ?

Monday, January 15th, 2018
puttur

  ಪುತ್ತೂರು: ಇಲ್ಲಿನ ಪಡೀಲಿನಲ್ಲಿ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಪತ್ತೆಯಾಗಿದ್ದು, ಜನರ ಮನಸ್ಥಿತಿ ಎಲ್ಲಿಗೆ ತಲುಪಿದೆ ಎನ್ನುವುದು ಬಹಿರಂಗವಾದಂತಾಗಿದೆ. ಪುತ್ತೂರು- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಸ್ವಚ್ಛ ಭಾರತ್‌ ತಂಡ ಶುಚಿಗೊಳಿಸುವ ವೇಳೆ ಕೃಷ್ಣಾ ಎಂಬವರಿಗೆ ರಾಷ್ಟ್ರಧ್ವಜ ಸಿಕ್ಕಿದೆ. ಇದನ್ನು ಜೋಪಾನವಾಗಿ ಮನೆಗೆ ತೆಗೆದುಕೊಂಡು ಹೋಗಿ, ತೆಗೆದಿರಿಸಿದ್ದಾರೆ. ರಾಮಕೃಷ್ಣ ಮಿಶನ್‌ ನೇತೃತ್ವದಲ್ಲಿ ನಡೆಯುತ್ತಿರುವ ಸ್ವಚ್ಛ ಭಾರತ್‌ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗೆ ಸ್ವಚ್ಛತ ಕಾರ್ಯಕ್ರಮ ನಡೆಯುತ್ತಿದೆ. ಕೃಷ್ಣಾ ಅವರ ತಂಡ ತ್ಯಾಜ್ಯ ಹೆಕ್ಕುವುದು ಮಾತ್ರವಲ್ಲ, ಇದರ ಜತೆಗೆ ಅರಿವು ಮೂಡಿಸುವ […]

ಮೋದಿ ಅಶ್ವಮೇಧಕ್ಕೆ ರೈತರು, ಕಾರ್ಮಿಕರಿಂದ ಬ್ರೇಕ್ : ಸೀತಾರಾಮ್ ಯೆಚೂರಿ

Wednesday, January 3rd, 2018
ashwameda

ಮಂಗಳೂರು: “ಹಮೇ ನೇತಾ ನಹಿ ನೀತಿ ಚಾಹಿಯೇ” ಎಂದು ‘ಸಿಪಿಐಎಂ’ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೂಡುಬಿದಿರೆಯಲ್ಲಿ ಆಯೋಜಿಸಲಾಗಿದ್ದ ‘ಸಿಪಿಐಎಂ ರಾಜ್ಯ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು. ತಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಪ್ರಧಾನಿ ಹೇಳುತ್ತಾರೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಡೆದ ಅನೇಕ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಈವರೆಗೆ ನಡೆದಿಲ್ಲ ಎಂದು ಅವರು ಆರೋಪಿಸಿದರು. ‘ಪನಾಮಾ ಪೇಪರ್ಸ್’ ಅವ್ಯವಹಾರ ಪ್ರಕರಣದ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ […]

’ದಂತಗಳ ಆರೋಗ್ಯದ ಕಾಳಜಿ ಮಾನವನಿಗೆ ಅವಶ್ಯಕ’

Friday, December 22nd, 2017
dental-checkup

ಮಂಗಳೂರು: ಮನುಷ್ಯ ತನ್ನ ಹಲ್ಲುಗಳ ಬಗ್ಗೆ ತೀವ್ರ ಕಾಳಜಿ ವಹಿಸಬೇಕು. ದೇಹದ ಆರೋಗ್ಯದ ಬಗ್ಗೆ ಎಷ್ಟು ಗಮನ ನೀಡತ್ತೇವೆಯೋ ಅಷ್ಟೇ ಗಮನವನ್ನು ಹಲ್ಲುಗಳ ಆರೋಗ್ಯದ ಕಡೆಗೂ ನೀಡಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜಶೇಖರ್ ಹೆಬ್ಬಾರ್ ಸಿ. ಹೇಳಿದರು. ರಥಬೀದಿಯ ಡಾ.ಪಿ.ದಯಾನಂದ ಪೈ.ಪಿ.ಸತೀಶ್ ಪೈ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಯುವ ರೆಡ್‌ಕ್ರಾಸ್ ಘಟಕ, ರೋವರ್ಸ್-ರೇಂಜರ‍್ಸ್ ಘಟಕ ಮತ್ತು ಲಯನ್ಸ್ ಕ್ಲಬ್ ಬೆಂದೂರ್‌ವೆಲ್ ಇದರ ಆಶ್ರಯದಲ್ಲಿ ನಡೆದ ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾವು ಹಲ್ಲುಗಳ […]