ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Wednesday, December 13th, 2017
railway

ಬಂಟ್ವಾಳ: ಬಿ.ಸಿ.ರೊಡಿನ ರೈಲು ನಿಲ್ದಾಣದ ಬಳಿ ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಸಾಮನ್ನಪ್ಪಿದ ಘಟನೆ ಇಂದು ಬೆಳಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನಿಗೆ ಸುಮಾರು ೨೫ ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ. ಈತ ರಾತ್ರಿ ವೇಳೆಯಲ್ಲಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿರಬೇಕು ಎಂದು ಶಂಕಿಸಲಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ಮೃತದೇಹವನ್ನು ಗಮನಿಸಿ ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದು, ಮಂಗಳೂರು ವಿಭಾಗದ ರೈಲ್ವೆ ಪೊಲೀಸ್ ಇನ್ ಸ್ಪೆಕ್ಟರ್ ಜಯಾನಂದ ಕೆ. ಸ್ಥಳಕ್ಕೆ ಭೇಟಿ ನೀಡಿ, […]

ದೆಹಲಿ ಕರ್ನಾಟಕ ಸಂಘದಿಂದ ವಿಶಿಷ್ಟ ಕನ್ನಡಿಗ ಪ್ರಶಸ್ತಿ ಪ್ರದಾನ

Tuesday, December 5th, 2017
delhi

ದೆಹಲಿ : ದೆಹಲಿ  ಕರ್ನಾಟಕ ಸಂಘ ಈ ವರ್ಷದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿಶಿಷ್ಟ ಕನ್ನಡಿಗ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಭಾಷಾ ಬಾಂಧವ್ಯ ಸ್ಥಳೀಯ ಕಲಾವಿದರಿಂದ ವಿವಿಧ ಭಾಷೆಗಳ ನೃತ್ಯಕಾರ್ಯಕ್ರಮವನ್ನುಇದೇ ಡಿಸೆಂಬರ್  3ರಂದು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆಮಂಗಳೂರಿನ ಎಸ್.ಡಿ.ಎಂ.ಲಾ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಶ್ರೀ ರಾಜೇಂದ್ರ ಶೆಟ್ಟಿಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ದೆಹಲಿಯಲ್ಲಿ ಕನ್ನಡಕ್ಕಾಗಿ ಸೇವೆ ಮಾಡಿದರಂಗಕರ್ಮಿ, ಖ್ಯಾತಚಿತ್ರಕಲಾವಿದ ಶ್ರೀ ಚೆನ್ನುಎಸ್. ಮಠದ, ಖ್ಯಾತ ಹೋಟೆಲುಉದ್ಯಮಿ ಮತ್ತು ಸಮಾಜ ಸೇವಕರಾದಶ್ರೀ ಶೇಖರ್‌ಎನ್. ಬಂಗೇರ, […]

ಹಲವು ಸಂಸ್ಸೃತಿಗಳೊಂದಿಗಿನ ಸಹಬಾಳ್ವೆಯೇ ಬಹುತ್ವ; ಡಾ ಸಿ ಎನ್ ರಾಮಚಂದ್ರನ್

Friday, December 1st, 2017
Nudisiri17

ಮೂಡುಬಿದಿರೆ : ಆಳ್ವಾಸ್ ನುಡಿಸಿರಿ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಕನ್ನಡದ ಖ್ಯಾತ ವಿಮರ್ಶಕ, ವಿದ್ವಾಂಸ ಸಿ.ಎನ್. ರಾಮಚಂದ್ರನ್ ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟಿಸಿದರು. ‘ಕರ್ನಾಟಕ:ಬಹುತ್ವದ ನೆಲೆಗಳು’ಪರಿಕಲ್ಪನೆಯಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಉದ್ಘಾಟಿಸಿದ ಸಿ.ಎನ್. ರಾಮಚಂದ್ರನ್, “ಪ್ಲೂರಲಿಜ಼ಮ್ ಅಥವಾ ಬಹುತ್ವ” ದ ಕಲ್ಪನೆಯು ಇಂದಿಗೆ ಪ್ರಸ್ತುತವಾದುದು; ಇದು ಅಸ್ಮಿತತೆಯ ರಾಜಕಾರಣ/ ಐಡೆಂಟಿಟಿ ಪಾಲಿಟಿಕ್ಸ್ ಆಗಿ ಬದಲಾಗುತ್ತಿದೆ. ಹಲವು ಸಂಸ್ಕೃತಿಗಳ ಸಹಬಾಳ್ವೆ ಹಾಗು ಬೆಳವಣಿಗೆಯಿಂದ ಬಹುತ್ವ ಸಾಧಿಸಬೇಕಾಗಿದೆ. ಭಾರತದಂತಹ ರಾಷ್ಟ್ರದಲ್ಲಿ ಪ್ರತಿಯೊಂದರಲ್ಲೂ ಬಹುತ್ವವನ್ನು ಕಾಣಬಹುದು. ಬಹುತ್ವದ ಜೊತೆಗೆ ಬರುವ […]

ಡಾ. ಸಾಂಬಯ್ಯ ಅವರಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ

Friday, November 17th, 2017
Alvas danvantari

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ವಿದ್ಯಾಗಿರಿಯಲ್ಲಿ ಗುರುವಾರ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ ಸಮಾರಂಭ ನಡೆಯಿತು. ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ , ಆಯುರ್ವೇದ ಚಿಕಿತ್ಸಕ ಡಾ. ಸಾಂಬಯ್ಯ ಅವರಿಗೆ `ಆಳ್ವಾಸ್ ಧನ್ವಂತರಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‍ನ ಟ್ರಸ್ಟಿ ವಿವೇಕ ಆಳ್ವ ಅಧ್ಯಕ್ಷತೆವಹಿಸಿದ್ದರು. ಮಂಗಳೂರು ಆಯುಷ್ ಫೌಂಡೇಶನ್ ಅಧ್ಯಕ್ಷೆ […]

ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು : ವೀರೇಂದ್ರ ಹೆಗ್ಗಡೆ

Wednesday, November 15th, 2017
deepotsava

ಉಜಿರೆ: ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಆಚಾರ-ವಿಚಾರ, ಸಾತ್ವಿಕತೆ, ಪ್ರೀತಿ-ವಿಶ್ವಾಸ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆದು ಸಜ್ಜನರಾಗಿ ಸಾರ್ಥಕ ಬದುಕನ್ನು ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪ್ರಾರಂಭದ ದಿನವಾದ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾಭವನದಲ್ಲಿ ಅವರು ಮಾತನಾಡಿದರು. ಸುಂದರ ಪ್ರಕೃತಿ-ಪರಿಸರ ಮತ್ತು ಭೂಮಿಯನ್ನು ರಕ್ಷಣೆ ಮಾಡಿ ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ […]

ಚಾರಿತ್ರಿಕ ಮಹತ್ವಕ್ಕಾಗಿ ಉಪವಾಸ ಕಾರ್ಯಕ್ರಮ

Thursday, October 26th, 2017
pv mohan

ಮಂಗಳೂರು: ಇಂದು ದೇಶದಲ್ಲಿ ಉದ್ದಗಲಗಳಲ್ಲಿ, ರಾಜ್ಯದಲ್ಲಿ ವಿಶೇಷವಾಗಿ ಕರಾವಳಿ ಕರ್ನಾಟಕವೆನ್ನುವ ನಮ್ಮ ಪ್ರದೇಶದಲ್ಲಿ ಉದ್ವಿಗ್ನತೆಯ, ಸಂವಿಧಾನಿಕ ವ್ಯವಸ್ಥೆ ಬಗ್ಗೆ, ಧಿಕ್ಕಾರವನ್ನು ನಾವು ಕಾಣುತ್ತಿದ್ದೇವೆ. ಕಾನೂನು ಕಟ್ಟಳೆಗಳನ್ನು ಅಣಕ ಮಾಡುವ ರೀತಿಯಲ್ಲಿ ಘಟನೆಗಳು ನಡೆಯುತ್ತಿವೆ. ಜನರ ವೈಯಕ್ತಿಕ ಬದುಕಿನ ಮೇಲೆ ಹಿಂಸಾತ್ಮಕ ದಾಳಿ ಮಾಡುವ ಅನಾಗರಿಕ ಆಚಾರವು ಅಲ್ಲಲ್ಲಿ ನೋಡುತ್ತಿದ್ದೇವೆ. ಜಾತೀಯವಾದಿ ಸಂಕುಚಿತತೆ, ಧಾರ್ಮಿಕ ಅಸಹಿಷ್ಣುತೆ ಮತ್ತು ರಾಜಕಾರಣದಲ್ಲಿ ಸೈದ್ಧಾಂತಿಕತೆಯ ರಾಜಕೀಯ ಸಂಪೂರ್ಣ ಗೈರು ಹಾಜರಿ ನಮ್ಮೆಲ್ಲರನ್ನು ಕಂಗೆಡಿಸಿದೆ. ವಿಭಿನ್ನ ಬಗೆಯ ಕೋಮುವಾದಿ ಮನೋಭಾವಗಳು, ವಿಭಜನೆಯ ಚಿಂತನೆಗಳು ನಮ್ಮೆಲ್ಲರ […]

ಕಾಪು: ಅಶಕ್ತ, ಅನಾಥ ಮಕ್ಕಳೊಂದಿಗೆ ಕಾಂಗ್ರೆಸ್ ದೀಪಾವಳಿ ಆಚರಣೆ

Thursday, October 19th, 2017
Diwali celebration

ಮಂಗಳೂರು:  ಕಾಪು ಕಾಂಗ್ರೆಸ್ ಹಿಂದುಳಿದ ವರ್ಗ ಕಟಪಾಡಿ ಬಳಿಯ ಶಂಕರ ಪುರ ವಿಶ್ವಾಸದ ಮನೆಯಲ್ಲಿ ಅಶಕ್ತ, ಅನಾಥ ಮಕ್ಕಳೊಂದಿಗೆ ಹಾಗೂ ವಯೋ ವೃದ್ಧರೊಂದಿಗೆ ದೀಪಾವಳಿ ಸಂಭ್ರವನ್ನು ಆಚರಿಸಿತು. ಇಲ್ಲಿಯ ಮಕ್ಕಳಿಗೆ ವಯೋವೃದ್ಧರಿಗೆ ಸಿಹಿ ತಿಂಡಿ ಹಾಗೂ ಬಟ್ಟೆ ಬರೆಗಳನ್ನು ಈ ಸಂದರ್ಭ ವಿತರಿಸಲಾಯಿತು. ಕಾಪು ಶಾಸಕ ವಿನಂ ಕುಮಾರ್ ಸೊರಕೆ ಮಾತನಾಡಿ, ದೀಪಾವಳಿ ಹಬ್ಬದ ಪ್ರಥಮ ದಿನವನ್ನು ಶಂಕರಪುರದ ಅನಾಥರ ವಿಶ್ವಾಸದ ಮನೆಯಲ್ಲಿ ಕಾಪು ಕಾಂಗ್ರೆಸ್ ಆಚರಿಸುತ್ತಿರುವುದು ಅತ್ಯಂತ ಸಂತಸ ತಂದಿದೆ. ವಿಶ್ವಾಸದ ಮನೆಗೆ ನಮ್ಮ ರಾಜ್ಯಕ್ಕೆ […]

ನಕಲಿ ಗೋರಕ್ಷಕರು ಎಂಬ ಹೇಳಿಕೆ ಸುಳ್ಳು :ಜಗದೀಶ್ ಶೇಣವ

Wednesday, October 18th, 2017
vishva hindu parishath

ಮಂಗಳೂರು: ಗೋವುಗಳ ರಕ್ಷಣೆಗೆ ಮುಂದಾಗುವವರೆಲ್ಲ ಪ್ರಧಾನಿ ನರೇಂದ್ರ ಮೋದಿಯವರ ನಕಲಿ ಗೋರಕ್ಷಕರು ಎಂಬ ಹೇಳಿಕೆಯನ್ನು ವಿರೋಧಿಸುವುದಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ನಮ್ಮ ಅನಿಸಿಕೆ ಪ್ರಕಾರ ದೇಶದಲ್ಲಿ ಯಾರೂ ನಕಲಿ ಗೋರಕ್ಷಕರಿಲ್ಲ. ಇರುವವರೆಲ್ಲ ಗೋವುಗಳನ್ನು ಪ್ರೀತಿಸುವವರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಕಲಿ ಗೋ ರಕ್ಷಕರು ಎಂಬ ಹೇಳಿಕೆಯನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಅಕ್ರಮ ಕಸಾಯಿಖಾನೆ ಕುರಿತು ಮಾಹಿತಿ ನೀಡಿದ ಸಾಫ್ಟ್‌‌ವೇರ್ […]

`ಐ ಆ್ಯಮ್ ಮೋದಿ’ ಅಭಿಯಾನ :ಸೂಲಿಬೆಲೆ

Saturday, October 14th, 2017
Chakravarthi sulibele

ಮಂಗಳೂರು: ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಷನ್ ಬೇಗ್ ತೀರ ಕೆಳಮಟ್ಟದ ಭಾಷೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡಿರುವುದು ಸಹಿಸಲಸಾಧ್ಯ. ಇದರ ವಿರುದ್ಧ ಸಾಮೂಹಿಕವಾಗಿ ಜನಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಾದ್ಯಂತ `ಐ ಆ್ಯಮ್ ಮೋದಿ’ ಎಂಬ ಅಭಿಯಾನ ನಡೆಸಲಾಗುವುದು ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟೀಕಿಸಲು ಹಕ್ಕಿದೆ. ಹಾಗಂತ ಕೀಳು ಭಾಷೆ ಬಳಸುವುದಲ್ಲ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕೂಡ ನನ್ನ […]

ಸೆ.29ರಂದು ಮಂಗಳೂರಿನಲ್ಲಿ 4ನೆ ಆವೃತ್ತಿಯ ‘ಪಿಲಿನಲಿಕೆ’ .

Thursday, September 28th, 2017
ಸೆ.29ರಂದು ಮಂಗಳೂರಿನಲ್ಲಿ 4ನೆ ಆವೃತ್ತಿಯ ‘ಪಿಲಿನಲಿಕೆ’ .

ಮಂಗಳೂರು :  4ನೆ ಆವೃತ್ತಿಯ ‘ಪಿಲಿನಲಿಕೆ’ ಸ್ಪರ್ಧೆ ಸೆ.29ರಂದು ಆಯೋಜಿಸಲಾಗಿದೆ ಎಂದು ಸ್ಪರ್ಧೆಯ ಪ್ರಮುಖ ಆಯೋಜಕ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ  ಮಿಥುನ್ ರೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ತುಳುನಾಡಿನ ಪ್ರಮುಖ ಕಲೆಗಳಲ್ಲಿ ಒಂದಾಗಿರುವ ಹುಲಿವೇಷದ ಸಾಂಪ್ರದಾಯಿಕತೆಗೆ ಒತ್ತು ನೀಡಿ ಅದನ್ನು ಪರಿಚಯಿಸುವುದು ಹಾಗೂ ಮುಂದಿನ ಪೀಳಿಗೆಗೆ ಅದನ್ನು ಉಳಿಸುವ ಉದ್ದೇಶದಿಂದ ನಗರದ ಮಂಗಳಾ ಕ್ರೀಡಾಂಗಣದ ಸಮೀಪದ ವಾಲಿಬಾಲ್ ಮೈದಾನದಲ್ಲಿ ನಮ್ಮ ಟಿವಿ ಸಹಭಾಗಿತ್ವದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದರು. ವಿಜೇತ ತಂಡಕ್ಕೆ […]