ಕ್ರೀಡೆಯಲ್ಲಿ ಪ್ರತಿಭಾವಂತರಿಗೆ ತರಬೇತಿ ಅಗತ್ಯ: ಅಜಿತ್‌ಕುಮಾರ್ ರೈ ಮಾಲಾಡಿ
Monday, August 29th, 2016ಮಂಗಳೂರು: ಕ್ರೀಡೆಯಲ್ಲಿ ಎಳೆಯ ಪ್ರತಿಭಾವಂತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ತರಬೇತುಗೊಳಿಸುವ ಕಾರ್ಯನಡೆಯಬೇಕಾಗಿದೆ. ಎಳವೆಯಲ್ಲೇ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಸಮಾಜವೂ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದು ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್‌ಕುಮಾರ್ ರೈ ಮಾಲಾಡಿ ತಿಳಿಸಿದರು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್‌ಹಾಸ್ಟೆಲ್‌ನ ಶ್ರೀರಾಮಕೃಷ್ಣ ಕಾಲೇಜ್ ಮೈದಾನದಲ್ಲಿ ಜರಗಿದ ಬಂಟರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೇದಿಕೆಯಲ್ಲಿ ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಕೃಷ್ಣಪ್ರಸಾದ್ ರೈ […]