ಲಾಕ್ಡೌನ್ ಕಟ್ಟು ನಿಟ್ಟಾಗಿ ಜಾರಿಗೆ ಪೊಲೀಸರಿಗೆ ಸೂಚನೆ

Saturday, May 22nd, 2021
Bommai

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆ ಯಾಗಿರುವ ಲಾಕ್‍ಡೌನ್‍ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೋಲಿಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ 3- 4 ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ […]

ಎರಡನೇ ಹಂತದ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಿಸಿದ ಸರಕಾರ

Friday, May 21st, 2021
BS Yedyurappa

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯ ಎರಡನೇ ಹಂತದ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ದಿನಗಳ ಕಾಲ ವಿಸ್ತರಿಸಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಹಿಂದೆ ಜಾರಿಗೊಳಿಸಿರುವ ಮಾರ್ಗಸೂಚಿಯೇ ಅನ್ವಯವಾಗಲಿದೆ ಎಂದು ಸಿಎಂ ಬಿ.ಎಸ್. […]

ಚಿತ್ರರಂಗದ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಲು ಸಿಎಂಗೆ ಮನವಿ

Friday, May 21st, 2021
KFCC

ಬೆಂಗಳೂರು : ಕೋವಿಡ್ ನಿಂದಾಗಿ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು, ಸಹ ಹಾಗೂ ಸಹಾಯಕ ನಿರ್ದೇಶಕರಿಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ನಟಿ […]

ನಾಳೆ ಭಾರತ ತಲುಪಲಿರುವ 40,000 ಸೀಸೆ ಕಪ್ಪುಶಿಲೀಂಧ್ರ ಔಷಧ

Friday, May 21st, 2021
medicine

ಬೆಂಗಳೂರು : ಕೇಂದ್ರವು ವಿವಿಧ ರಾಜ್ಯಗಳಿಗೆ ಬರುವ ವಾರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದು ಸಕ್ರಿಯ ಪ್ರಕರಣಗಳನ್ನು ಆಧರಿಸಿ ರಾಜ್ಯಕ್ಕೆ ಸಿಂಹಪಾಲು ದೊರೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ. ಇಂದು ಇಲ್ಲಿ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು ಈ ವಾರದ ಬಳಕೆಗಾಗಿ ರಾಜ್ಯಕ್ಕೆ ಅತಿಹೆಚ್ಚು 4.25 ಲಕ್ಷ ವಯಲ್ಸ್ […]

ಸ್ಟಿರಾಯ್ಡ್ ಬಳಕೆಗೆ ಕೆಲ ನಿರ್ಬಂಧನೆಗಳು ಅಗತ್ಯ: ಆರ್ ಅಶೋಕ

Friday, May 21st, 2021
R Ashok

ಬೆಂಗಳೂರು : ಕೋವಿಡ್ ಸೋಂಕಿತರು ಅತೀಯಾದ ಸ್ಟಿರಾಯ್ಡ್ ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಬ್ಲಾಕ್ ಫಂಗಸ್ ಗೆ ತುತ್ತಾಗುವುದಕ್ಕೆ ಇದು ಒಂದು ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಇದರ ಬಳಕೆಗೆ ಸೂಕ್ತ ಕಡಿವಾಣ ಹಾಕಬೇಕಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡ್ರಗ್ಸ್ ಲಾಜಿಸ್ಟಿಕ್ಸ್ ಸೊಸೈಟಿಯಧಿಕಾರಿಗಳ ಜೊತೆಗೆ ಸಚಿವ ಆರ್ ಅಶೋಕ ಅವರು ಕೋವಿಡ್ ಔಷಧಿ ಲಭ್ಯತೆ ಕುರಿತಂತೆ ಪರಾಮರ್ಶೆ ಸಭೆ […]

ಧಾರವಾಡ: ಸಂಪೂರ್ಣ ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ- ಡಿಸಿ

Friday, May 21st, 2021
Nithish Pateel

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಾಳೆ (ಮೇ 22ರ) ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಿ, ಕೋವಿಡ್ ತಡೆಗಟ್ಟುವುದಕ್ಕಾಗಿ ಲಾಕ್‌ಡೌನ್ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿನಂತಿಸಿದರು. ಅವರು ಇಂದು ಸಂಜೆ ಧಾರವಾಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ವರ್ಚವಲ್ ಆನ್‍ಲೈನ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಲಾಕ್‌ಡೌನ್ ಅವಧಿಯ ಎರಡು ದಿನ ಬೆಳಿಗ್ಗೆ 6ರಿಂದ 8 ಗಂಟೆಯವರೆಗೆ ನಾಗರಿಕರು ತಮ್ಮ […]

ವ್ಯಾಕ್ಸಿನ್ ಕಳ್ಳ ದಂಧೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಮತ್ತು ಸಿಬ್ಬಂದಿ ಪೊಲೀಸ್ ಬಲೆಗೆ

Friday, May 21st, 2021
Pushpika

ಬೆಂಗಳೂರು:   ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆಯಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆ ಡಾ.ಪುಷ್ಪಿತಾ(25) ಮತ್ತು ಸಿಬ್ಬಂದಿ ಪ್ರೇಮಾ (34) ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಳು. ಆಸ್ಪತ್ರೆಗೆ ಬರುತ್ತಿದ್ದ ಲಸಿಕೆಗಳನ್ನು ಪ್ರೇಮಾ ಅನ್ನಪೂರ್ಣೇಶ್ವರಿ ನಗರದಲ್ಲಿರುವ ತನ್ನ ಮನೆಯಲ್ಲಿ ದಾಸ್ತಾನು ಮಾಡಿಸುತ್ತಿದ್ದಳು. ಬಳಿಕ ಮನೆಯಲ್ಲಿಯೇ ಅಕ್ರಮವಾಗಿ ಲಸಿಕೆ ನೀಡುವ ದಂಧೆ ಆರಂಭಿಸಿದ್ದಳು ಎನ್ನಲಾಗಿದೆ. ಏ.23 ರಿಂದಲೂ ತಲಾ 500 ರೂ. ಪಡೆದು ಇವರು ಲಸಿಕೆಯನ್ನು ವಿತರಿಸುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಖಚಿತ […]

ಅಟ್ಟಿಕಾ ಗೋಲ್ಡ್ ನಿಂದ ರೂ.25 ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ

Friday, May 21st, 2021
Attica

ಬೆಂಗಳೂರು  :  ಆಕ್ಸಿಜನ್ ಅಭಾವ ನೀಗಿಸುವ ನಿಟ್ಟಿನಲ್ಲಿ ಅಟ್ಟಿಕಾ ಗೋಲ್ಡ್ ಕಂಪನಿ ಮಹತ್ತರ ಕಾರ್ಯ ಕೈಗೊಂಡಿದ್ದು, ಇಂದು 30 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಅಗತ್ಯವಿರವವರಿಗೆ ಒದಗಿಸಬೇಕು ಎಂಬ ಸದಾಶಯದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಹಸ್ತಾಂತರಿಸಿತು. ರಾಜ್ಯದಲ್ಲಿ ಯಾವುದೇ ವಿಪತ್ತು ಸಂಭವಿಸಿದರೆ, ಸಂಕಷ್ಟದ ಸಮಯ ಎದುರಾದರೆ ಆಗ ನೆರವಿಗೆ ನಿಲ್ಲುವ ಅಟ್ಟಿಕಾ ಗೋಲ್ಡ್ ಕಂಪನಿಯ ಬಾಬು ಅವರು ಸುಮಾರು ರೂ.25ಲಕ್ಷ ಮೌಲ್ಯದ 7.5 ಲೀಟರ್ ಸಾಮಥ್ರ್ಯದ ಒಟ್ಟು 30 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಕರ್ನಾಟಕದಲ್ಲಿ 16.29 ಲಕ್ಷ ಟನ್ ರಸಗೊಬ್ಬರ ದಾಸ್ತಾನು, ಸಬ್ಸಿಡಿ ದರ ಹೆಚ್ಚಳ

Friday, May 21st, 2021
DV Sadananda Gowda

ಬೆಂಗಳೂರು: ಮುಂಗಾರು ಹಂಗಾಮಿಗಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1211 ರೂಪಾಯಿಗೆ (ಶೇಕಡಾ 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಇಂದು ಅಧಿಕೃತ ಆದೇಶ ಹೊರಡಿಸಿದೆ. ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ ಗುರುವಾರ ಹೊರಡಿಸಿದ ಪರಿಷ್ಕೃತ ಆದೇಶದ ಪ್ರಕಾರ ರಸಗೊಬ್ಬರದಲ್ಲಿ ಬಳಕೆಯಾಗುವ ಪ್ರತಿ ಟನ್ ನೈಟ್ರೋಜನ್ (Nitrogen – N)ಗೆ 18,789 ರೂ, ಫೊಸ್ಫೇಟ್ (Phosphate – P)ಗೆ 45,323 ರೂ, ಪೊಟಾಷ್ […]

ರಾಜ್ಯದ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ ಮತ್ತು ದಿನಸಿ ಕಿಟ್‌ಗಳ ಘೋಷಣೆ

Thursday, May 20th, 2021
purohith

ಬೆಂಗಳೂರು:  ರಾಜ್ಯ ಸರ್ಕಾರ  ರಾಜ್ಯದಲ್ಲಿನ  27000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ (ತಸ್ತಿಕ್) ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ ‘ಸಿ’ ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್‌ಗಳ ನೀಡುವಂತೆ ಆದೇಶ ಹೋರಡಿಸಲಾಗಿದೆ. ಅದರಂತೆ ರಾಜ್ಯದಲ್ಲಿನ 50 ಸಾವಿರ ಅರ್ಚಕರಿಗೆ ಫುಡ್ ಕಿಟ್ ವಿತರಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದ್ದು ಸರ್ಕಾರದಿಂದ ಒಟ್ಟು ನಾಲ್ಕೂವರೆ  ಕೋಟಿ ಹಣ ಬಿಡುಗಡೆಯಾಗದೆ ಎಂದು  ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ […]