ರಿಯಲ್ ಸ್ಟಾರ್ ಉಪೇಂದ್ರ ‘ಯುಐ’ ಸಿನಿಮಾ ರಿಲೀಸ್‌ : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

Tuesday, December 3rd, 2024
Upendra-UI

ಮಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ. ‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ […]

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Monday, December 2nd, 2024
Samavasarana

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥಸ್ವಾಮಿ ಬಸದಿಯಲ್ಲಿ ಭಾನುವಾರ ರಾತ್ರಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಮವಸರಣ ಪೂಜೆ ನಡೆಯಿತು. ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಭಗವಾನ್ ಚಂದ್ರನಾಥಸ್ವಾಮಿಯ ಅಷ್ಟವಿಧಾರ್ಚನೆ ಪೂಜೆ, ಸಿದ್ಧಪರಮೇಷ್ಠಿಗಳ ಪೂಜೆ, ಜಯಮಾಲಾ ಅರ್ಘ್ಯ, ಬಾಹುಬಲಿಸ್ವಾಮಿಯ ಪೂಜೆ, ಶ್ರುತದೇವಿ ಪೂಜೆ, ಗಣಧರಪರಮೇಷ್ಠಿ ಪೂಜೆ ಬಳಿಕ ದೀಪಾರಾಧನೆ, ಶಾಂತಿಧಾರಾ ಮತ್ತು ಪುಷ್ಪಾಂಜಲಿಯೊAದಿಗೆ ಪೂಜಾ ಕಾರ್ಯಕ್ರಮ ಸಮಾಪನಗೊಂಡಿತು. ಶಿಶಿರ್ ಇಂದ್ರರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸೌಮ್ಯಶುಭಚಂದ್ರ, ಸಾವಿತ್ರಿಪುಷ್ಪದಂತ, ಮಂಜುಳಾಮಲ್ಲಿನಾಥ್ ಮತ್ತು ಭಾರತಿ ಅವರು […]

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ

Monday, December 2nd, 2024
Devaraj-uras

ಕಾರ್ಕಳ : ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02 ರಂದು ವಿಕಾಸ ಕಚೇರಿಯಲ್ಲಿ ನಡೆಯಿತು. ಶಾಸಕ ವಿ. ಸುನಿಲ್ ಕುಮಾ‌ರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕು ಮತ್ತು ಸ್ವಾವಲಂಬಿಗಳಾಗಿ ದುಡಿಯಬೇಕು ಎನ್ನುವ ನಿಟ್ಟಿನಲ್ಲಿ ಸರಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡುತ್ತಿದೆ. ಅರ್ಜಿ ಸಲ್ಲಿಸಿದ 35 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಗಿದೆ ಎಂದರು. ಜೊತೆಗೆ ಶಾಸಕರ ಸ್ಥಳೀಯ […]

ಕಮ್ಯೂನಿಷ್ಟ್ ಚಳುವಳಿಯ ಕಾಂ. ಲಿಂಗಪ್ಪ ಚೌಟ ಇನ್ನಿಲ್ಲ

Monday, December 2nd, 2024
lingappa-chowta

ಮಂಗಳೂರು : ಸಿಪಿಐಎಮ್ ಹಿರಿಯ ಸದಸ್ಯರೂ, ತನ್ನ ಕೊನೆಯ ಕಾಲಾವಧಿವರೆಗೂ ಕಮ್ಯೂನಿಷ್ಟ್ ಚಳುವಳಿಯಲ್ಲಿ ಸಕ್ರಿಯರಾಗಿ ಭಾಗವಹಿಸಿರುವ ಕಾಂ. ಲಿಂಗಪ್ಪ ಚೌಟ ಬಜಾಲ್ ( 85 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನಮ್ಮನ್ನಗಲಿರುತ್ತಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಜಲ್ಲಿಗುಡ್ಡೆಯಲ್ಲಿ ಹುಟ್ಟಿ ಬೆಳೆದಿರುವ ಲಿಂಗಪ್ಪ ಚೌಟ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು, ಬೀಡಿ ಮತ್ತು ರೈತ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ಹಂಚು […]

ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Monday, December 2nd, 2024
Rishika-Kundeshwar

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿದರು ರಿಷಿಕಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಸಿಎಂ ಹಾರೈಸಿದರು. ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಜಿತೇಂದ್ರ ಕುಂದೇಶ್ವರ ಇದ್ದರು. ಪ್ರೆಸ್ ಕ್ಲಬ್ ಗೌರವಬೆಂಗಳೂರು […]

ಫೆಂಗಲ್ ಚಂಡಮಾರುತ : ಮಳೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Monday, December 2nd, 2024
Mullai-Muhilan-Fengal

ಮಂಗಳೂರು : ಫೆಂಗಲ್ ಚಂಡಮಾರುತದಿಂದ ಉಂಟಾದ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಸೂಚಿಸಿದ್ದಾರೆ ಮಳೆಗಾಲದಲ್ಲಿ ಅನುಸರಿಸುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಕ್ಷಣದಿಂದಲೇ ಸಿದ್ದರಾಗಬೇಕು. ಆಯಾ ತಹಶೀಲ್ದಾರರು ಈ ಬಗ್ಗೆ ಮೇಲ್ವಿಚಾರಣೆ ವಹಿಸಬೇಕು. […]

ಉಪಲೋಕಾಯುಕ್ತರಿಂದ ಮಂಗಳೂರಿನ ವಿವಿದೆಡೆ ಭೇಟಿ ನೀಡಿ , ಪರಿಶೀಲನೆ

Sunday, December 1st, 2024
lokayukta

ಮಂಗಳೂರು : ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭಾನುವಾರ ಜಿಲ್ಲೆಯ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ವಿಲೇವಾರಿ ಘಟಕ ಪಚ್ಚನಾಡಿಗೆ ಭೇಟಿ ನೀಡಿದ ಅವರು ಘಟಕದ ಒಳಪ್ರದೇಶಗಳಿಗೆ ಭೇಟಿ ನೀಡಿ ಸಮಗ್ರ ತಪಾಸಣೆ ನಡೆಸಿದರು. ತ್ಯಾಜ್ಯ ನಿರ್ವಹಣೆ, ಪ್ರತ್ಯೇಕಿಸುವಿಕೆಯ ಘಟಕಗಳಿಗೂ ಖುದ್ದು ಹೋಗಿ ವೀಕ್ಷಿಸಿದರು. ತ್ಯಾಜ್ಯ ವಿಲೇವಾರಿಯ ಪ್ರತೀ ಹಂತದ ಮಾಹಿತಿ ಕೇಳಿದ ಅವರು ಘಟಕದ ಕಾರ್ಮಿಕ ರಲ್ಲಿಯೂ ಅಹವಾಲು ಆಲಿಸಿದರು. ತ್ಯಾಜ್ಯವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ಘಟಕಕ್ಕೂ ಹೋಗಿ […]

ವ್ಯಾಟಿಕನ್ ಸಿಟಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ಯು.ಟಿ.ಖಾದರ್

Sunday, December 1st, 2024
UT-Khader-Vatican City

ಮಂಗಳೂರು : ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ನವಂಬರ್ 30 ರಂದು ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ನಡದ ಅಂತರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡಿ ಧರ್ಮದ ಕುರಿತು ತಮ್ಮ ನಿಲುವನ್ನು ಮಂಡಿಸಿದರು. ಅದಕ್ಕೂ ಮುಂಚಿತವಾಗಿ ವಿಶ್ವ ಕ್ಯಾಥಲಿಕ್ ಸಮುದಾಯದ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರನ್ನು ವ್ಯಾಟಿಕನ್ ಸಿಟಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಶ್ರೀ ನಾರಾಯಣ ಗುರುಗಳು ಮೊದಲ ಅಂತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನವನ್ನು ಆಯೋಜಿಸಿ ಶತಮಾನೋತ್ಸವ ಸಂದ ಸ್ಮರಣಾರ್ಥ ಈ ಸಮ್ಮೇಳನವನ್ನು […]

ಬರಹವು ಕಬ್ಬಿನ ಜಲ್ಲೆ ಯಂತೆ ಜಗಿದಷ್ಟು ಸಿಹಿಯಾಗಿರಬೇಕು : ರೇಖಾ ಸುದೇಶ್ ರಾವ್

Sunday, December 1st, 2024
Rekha-Sudesh

ಮೈಸೂರು : ಮೈಸೂರಿನ ಲೇಖಕ , ಸಾಮಾಜಿಕ ಚಿಂತಕ ಎನ್.ವಿ. ರಮೇಶ್ ಅವರ 74 ರ ಜನ್ಮ ದಿನಾಚರಣೆ ಅಂಗವಾಗಿ ಮೈಸೂರಿನ ನಮನ ಕಲಾ ಮಂಟಪದಲ್ಲಿ ರಾಜ್ಯದ ಲೇಖಕರಿಗೆ ನಡೆಸಲಾದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಹಾಗು ಲೇಖಕರಿಗೆ “ನಾನೇಕೆ ಬರೆಯುತ್ತೇನೆ ” ಎಂಬ ವಿಷಯದ ಕುರಿತಾದ ವಿಚಾರ ಸಂಕಿರಣ 1/12/2024 ರ ಅದಿತ್ಯವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರಿನ ಲೇಖಕಿ , ಕವಯತ್ರಿ, ಶಿಕ್ಷಕಿ ರೇಖಾ ಸುದೇಶ್ ರಾವ್ ಮಾತನಾಡಿ ಬರಹವು ಕಬ್ಬಿನ ಜಲ್ಲೆ ಯಂತೆ ಜಗಿದಷ್ಟು […]

ಮಂಗಳಾ ಈಜು ಕ್ಲಬ್ ನ ಚಿಂತನ್ ಎಸ್. ಶೆಟ್ಟಿಗೆ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ 5 ಚಿನ್ನದ ಪದಕ

Sunday, December 1st, 2024
ಮಂಗಳಾ ಈಜು ಕ್ಲಬ್ ನ ಚಿಂತನ್ ಎಸ್. ಶೆಟ್ಟಿಗೆ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ 5 ಚಿನ್ನದ ಪದಕ

ಮಂಗಳೂರು: ಗುಜರಾತ್ ನ ರಾಜ್ ಕೋಟ್ ನಲ್ಲಿ ನವೆಂಬರ್ ೩೦ ರಂದು ಮುಕ್ತಾಯಗೊಂಡ 68ನೇ ಎಸ್ ಜಿ ಎಫ್ಐ (ಸ್ಕೂಲ್ ಗೇಮ್ಸ್) ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಅಂಡರ್ 19 ಬಾಲಕರ ವಿಭಾಗದ 50 ಮತ್ತು 100 ಮೀಟರ್ ಬಟರ್ ಫ್ಲೈ, 50 ಮೀಟರ್ ಫ್ರಿಸ್ಟೈಲ್, 4 x 100 ಫ್ರಿಸ್ಟೈಲ್ ರಿಲೇ, 4 x 100 ಮಿಡ್ಲೆ ರಿಲೇ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ ನ ಸದಸ್ಯ ಚಿಂತನ್ ಎಸ್. ಶೆಟ್ಟಿ ಇವರು 5 […]