ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದವರನ್ನು ಬಂಧಿಸಿದ ಪೊಲೀಸರು

Friday, February 10th, 2017
netravati protest

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿಸಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿಯ ನೇತೃತ್ವದಲ್ಲಿ  ಜಿಲ್ಲಾಧಿಕಾರಿ ಕಚೇರಿ ಎದುರು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ವಬೆಳಗ್ಗೆ ಆರಂಭವಾಗಿ ಮಧ್ಯಾಹ್ನ ಮುಗಿಯಿತು. ಸರ್ವಧರ್ಮದ ಧರ್ಮಗುರುಗಳ ನೇತೃತ್ವದಲ್ಲಿ ಪುರಭವನದ ಮುಂಭಾಗದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು, ಮೆರವಣಿಗೆ ಮೂಲಕ ಬಂದು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡರು. ಮಧ್ಯಾಹ್ನವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಳಿತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, […]

ವಾರ್ತಾ ಮತ್ತು ಪ್ರಚಾರ ಇಲಾಖೆಯ ವತಿಯಿಂದ ‘ಭಾಗ್ಯ ವಿಧಾತ’ ಧ್ವನಿ ಬೆಳಕಿನ ಕಾರ್ಯಕ್ರಮ’

Friday, February 10th, 2017
Sound Light programme

ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ಅಂಬೇಡ್ಕರ್ ನೆನಪಿನ ಅಂಗವಾಗಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ವತಿಯಿಂದ ರಾಜ್ಯದ ಕಲಾವಿದರ ತಂಡದಿಂದ ಭಾರತ ಭಾಗ್ಯ ವಿಧಾತ ಧ್ವನಿ ಬೆಳಕಿನ ಕಾರ್ಯಕ್ರಮ ನಡೆಯಿತು. ಅಂಬೇಡ್ಕರ ಬದುಕು ಭಾರತದ ಜನತೆಯ ಬದುಕಿಗೆ ಹೇಗೆ ಬೆಳಕಾಗಿದೆ ಎನ್ನವುದನ್ನು ಕಲಾವಿದರು ಹಾಡು ರೂಪಕ ದೃಶ್ಯ ಮಾಧ್ಯಮದ ಮೂಲಕ ಜನರ ಮುಂದಿಟ್ಟರು. ಮನಪಾ ಮೇಯರ್ ಹರಿನಾಥ್ ಡೋಲು ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ […]

ಮೋಜು – ಮಾಂಸಕ್ಕಾಗಿ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳ ಹತ್ಯೆ : ರೈ

Thursday, February 9th, 2017
Rai

ಬೆಂಗಳೂರು: ಮೋಜು ಹಾಗೂ ಮಾಂಸಕ್ಕಾಗಿ ಕಳೆದ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲಾಗಿದೆ ಎಂದು ಅರಣ್ಯ ಸಚಿವ ರಮಾಮಾಥ ರೈ ಹೇಳಿದ್ದಾರೆ. ಬಿಜೆಪಿ ಎಂಎಲ್ ಸಿ ಸುನೀಲ್ ಸುಬ್ರಮಣ್ಯ ಅವರ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಉತ್ತರಿಸಿದ ಸಚಿವ ರಮಾನಾಥ ರೈ ರಾಜ್ಯದ 11 ಅರಣ್ಯ ವಿಭಾಗಗಳಲ್ಲಿ ಪ್ರಾಣಿಗಳನ್ನು ಕೊಲ್ಲಲಾಗಿದೆ, ಚಾಮರಾಜನಗರದಲ್ಲಿ ಅತಿ ಹೆಚ್ಚಿನ ಅಂದರೆ 90 ಪ್ರಾಣಿಗಳನ್ನು […]

ಡಾ| ಪದ್ಮಾ ಮತ್ತು ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಸನ್ಮಾನ

Thursday, February 9th, 2017
tejodiya

ಮಂಗಳೂರು: ಕರಾವಳಿಯ ಈ ಪ್ರದೇಶ ಭರತನಾಟ್ಯ ಸಹಿತ ಲಲಿತಕಲೆಗಳಿಗೆ ವಿಶೇಷ ಪ್ರೋತ್ಸಾಹದ ಪರಂಪರೆ ಹೊಂದಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಭರತನಾಟ್ಯ ಕಲಾವಿದೆ ಗುರು ಡಾ| ಪದ್ಮಾ ಸುಬ್ರಹ್ಮಣ್ಯಂ ಶ್ಲಾಘಿಸಿದರು. ಜಿಟಿ ಪ್ರತಿಷ್ಠಾನದ ವತಿಯಿಂದ ಮ್ಯಾನೇಜಿಂಗ್‌ ಟ್ರಸ್ಟಿ ಡಾ| ವಿ. ರವಿಚಂದ್ರನ್‌ ನೇತೃತ್ವದಲ್ಲಿ ಪುರಭವನದಲ್ಲಿ ಫೆ. 8ರಂದು ಜರಗಿದ “ತೇಜೋದಿಯಾ’ ಸಮಾರಂಭದಲ್ಲಿ ಡಾ| ಪದ್ಮಾ ಮತ್ತು ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸಮ್ಮಾನಿಸಲಾಯಿತು. ಜಿಟಿ ಸಂಸ್ಥೆ ಪ್ರತೀ ವರ್ಷ ಈ ರೀತಿಯ ಕಲಾ ರಾಧನೆ ಏರ್ಪಡಿಸುತ್ತಿರುವುದು ಆದರ್ಶಯುತವಾಗಿದೆ […]

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಟ್ಯಾಕ್ಸಿ ಅಪರೇಟರ್‌ಗಳ ಮುಷ್ಕರ

Thursday, February 9th, 2017
taxi

ಮಂಗಳೂರು : ದ.ಕ. ಜಿಲ್ಲಾ ಆನ್‌ಲೈನ್ ಟ್ಯಾಕ್ಸಿ ಡ್ರೈವರ್ಸ್‌ ಆ್ಯಂಡ್ ಓನರ್ಸ್‌ ಅಸೋಸಿಯೇಶನ್ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಆರಂಭಿಸಿದೆ. ಅಲ್ಲದೆ ಬೇಡಿಕೆಗಳ ಈಡೇರಿಕೆಗೆ 2 ದಿನಗಳ ಗಡುವು ವಿಧಿಸಿದೆ. ಉಬರ್ ಸಂಸ್ಥೆಯವರ ಸದ್ರಿ ದರ ನಿಗದಿಯಿಂದ ಟ್ಯಾಕ್ಸಿ ಅಪರೇಟರ್‌ಗಳಿಗೆ ಭಾರೀ ನಷ್ಟವಾಗುತ್ತಿದೆ. ಈಗ ನೀಡುತ್ತಿರುವ ದರಗಳಿಂದ ಕಾರು ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ದೂರದಿಂದ ಟ್ರಿಪ್ ಬರುತ್ತಿದ್ದು, ಇದರಿಂದ ನಷ್ಟ ಅನುಭವಿಸುತ್ತಿದ್ದೇವೆ ಎಂದು ಅಸೋಸಿಯೇಶನ್‌ನ ಪದಾಕಾರಿಗಳು ಉಬರ್‌ನ ವ್ಯವಸ್ಥಾಪಕರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. ಸದ್ಯದ ರೇಟ್‌ಪ್ಲಾನನ್ನು […]

ತಲಪಾಡಿಯಲ್ಲಿ ಸುಂಕ ವಸೂಲಿ: ಸ್ಥಳೀಯರಿಂದ ಪ್ರತಿಭಟನೆ

Wednesday, February 8th, 2017
Talapady Protest

ಮಂಜೇಶ್ವರ: ತಲಪಾಡಿ ಚತುಷ್ಪಥ ಹೆದ್ದಾರಿಯಲ್ಲಿ ಬುಧವಾರದಿಂದ ಸುಂಕ ವಸೂಲಿ ಆರಂಭಿಸಿದ್ದು,ಇದನ್ನು ವಿರೋಧಿಸಿ ಬೆಳಿಗ್ಗೆ ಪ್ರತಿಭಟನೆ ನಡೆಸಲಾಯಿತು. ಗಡಿನಾಡ ರಕ್ಷಣಾ ವೇದಿಕೆ, ತಲಪಾಡಿ ನಾಗರಿಕರ ಒಕ್ಕೂಟದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಹೆದ್ದಾರಿಯ ಕಾಮಗಾರಿ ಪೂರ್ತಿಗೊಳಿಸದೆ ಅವ್ಯವಸ್ಥೆಯಲ್ಲಿದ್ದು ಈ ಹಿನ್ನೆಲೆಯಲ್ಲಿ ಸುಂಕವಸೂಲಿ ಮಾಡಬಾರದೆಂದು ಪ್ರತಿಭಟನೆಕಾರರು ಆಗ್ರಹಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ತಲುಪಿದ ಉಳ್ಳಾಲ ಪೊಲೀಸರು ಪ್ರತಿಭಟನಾ ನಿರತರಾದವರನ್ನು ಬಂಧಿಸಿ ಠಾಣೆಗೊಯ್ದರು. ಪ್ರತಿಭಟನೆಯನ್ನು ಕಾಸರಗೋಡು ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಉದ್ಘಾಟಿಸಿದರು. ಗಡಿನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಸಿದ್ದಿಕ್ […]

ತಾಲೂಕು ಕಚೇರಿಯ ಕಂದಾಯ ಇಲಾಖೆಯ ಕೆಲಸಗಳಲ್ಲಿ ವಿಳಂಬ, ಸೂಕ್ತ ಕ್ರಮಕ್ಕೆ ಆಗ್ರಹ

Wednesday, February 8th, 2017
tp meeting

ಮಂಗಳೂರು : ಮಂಗಳೂರು ತಾಲೂಕು ಕಚೇರಿಯ ಕಂದಾಯ ಇಲಾಖೆಯ ಕೆಲಸಗಳಲ್ಲಿ ವಿಳಂಬವಾಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ಬಗ್ಗೆ ತಾಲೂಕು ಪಂಚಾಯತ್ ಸಭೆಯಲ್ಲಿ ಸದಸ್ಯರು ಅತೃಪ್ತಿ ಮತ್ತು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ತಹಶೀಲ್ದಾರರ ನೇತೃತ್ವದಲ್ಲಿ ವಿಶೇಷ ಸಭೆ ಕರೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅಧ್ಯಕ್ಷರು ಸಭೆಗೆ ತಿಳಿಸಿದರು. ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರಂಭಗೊಂಡ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಅವರು ಮಾತನಾಡುತ್ತಿದ್ದರು. ಈ ಹಿಂದಿನ […]

ಪಾಂಡೇಶ್ವರ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ

Wednesday, February 8th, 2017
rosario road

ಮಂಗಳೂರು: ಮಂಗಳೂರು ನಗರದ ಹಳೆಯದಾದ ಪಾಂಡೇಶ್ವರದಿಂದ ರೊಜಾರಿಯೋ ಚರ್ಚ್ ರಸ್ತೆಯು ತೀರ ಹಗೆಟ್ಟಿರುವುದರಿಂದ ಇದರ ಅಭಿವೃದ್ಧಿ ಅಗತ್ಯವಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ರಾಜ್ಯ ಸರ್ಕಾರದ ಮೂರನೆ ನಗರೋತ್ತನ ಯೋಜನೆಯಲ್ಲಿ ಈ ರಸ್ತೆಗೆ 1 ಕೋಟಿ ಅನುದಾನ ಮಂಜೂರು ಮಾಡಿಸಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಈ ರಸ್ತೆಯನ್ನು ಮುಂದಿನ ಒಂದು ತಿಂಗಳ ಒಳಗೆ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು. ನಗರದ ರಸ್ತೆಗಳ ಬದಿಗೆ ಫುಟ್ ಪಾತ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಮಂಗಳೂರು ನಗರವನ್ನು […]

ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಒಬ್ಬನ ಬಂಧನ

Wednesday, February 8th, 2017
arrested

ಮಂಗಳೂರು: ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೊಣಾಜೆ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಬಂಧಿತನ್ನು ಬೊಳಿಯಾರ್ ನಿವಾಸಿ ಮಹಮ್ಮದ್ ಮುಸ್ತಾಫ (23) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ಆಶ್ರಫ್ ತಲೆಮರೆಸಿಕೊಂಡಿದ್ದಾನೆ. ಕೆಲ ತಿಂಗಳ ಹಿಂದೆ ಇಬ್ಬರು ಆರೋಪಿಗಳು ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ತ ಯುವತಿ ಕೊಣಾಜೆ ಠಾಣೆಗೆ ದೂರು ನೀಡಿದ್ದಳು. ಬಂಧಿತ ಮುಸ್ತಾಫನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಕಂಬಳ ಕ್ರೀಡೆ ನಡೆಸಲು ಕೇಂದ್ರ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು: ನಳಿನ್ ಕುಮಾರ್

Wednesday, February 8th, 2017
Nalin-kumar

ಮಂಗಳೂರು: ಕಂಬಳ ಕ್ರೀಡೆ ನಡೆಸಲು ಕೇಂದ್ರ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಮನವಿ ಮಾಡಿದ್ದಾರೆ. ಲೋಕಸಭಾ ಚಳಿಗಾಲದ ಅಧಿವೇಶನದಲ್ಲಿ ನಿಯಮ 377ರ ಅಡಿಯಲ್ಲಿ ಮಾತನಾಡಿ ವಿಷಯ ಮಂಡಿಸಿದ ಅವರು, ಕಂಬಳವು ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಸಾಂಪ್ರದಾಯಿಕ ಕ್ರೀಡೆಯಾಗಿದೆ. ಕಂಬಳದ ಇತಿಹಾಸದಲ್ಲಿ ಕೋಣಗಳನ್ನು ಯಾವುದೇ ರೀತಿಯಾಗಿ ಹಿಂಸಿಸುವ ಹಾಗೂ ಈ ಕ್ರೀಡೆಯ ಸಂದರ್ಭದಲ್ಲಿ ಕೋಣಗಳು ಮೃತಪಟ್ಟ ನಿದರ್ಶನಗಳಿಲ್ಲ. ಈ ಕ್ರೀಡೆಯು […]