ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

Friday, January 17th, 2025
CM-Mangalore

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ […]

ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

Friday, January 17th, 2025
cm-mangalore

ಮಂಗಳೂರು : ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ವರದಿ: ವಿರೋಧ ಏಕೆ? ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ […]

ಅದ್ಧೂರಿ ಮತ್ತು ಸಂಭ್ರಮಕ್ಕೆ ಸಾಕ್ಷಿಯಾದ ಮಂಗಳೂರು ಕ್ರೀಡಾಂಗಣ

Friday, January 17th, 2025
Karnataka-Sports-meet

ಮಂಗಳೂರು : ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ […]

ಕೋಟೆಕಾರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ

Friday, January 17th, 2025
Kotekarbank-robery

ಮಂಗಳೂರು : ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, […]

ನಾನು ತುಳುನಾಡಿನವ “ತುಳುವ“ ಎನ್ನುವುದೇ ಹೆಮ್ಮೆ -ಸುನಿಲ್ ಶೆಟ್ಟಿ

Friday, January 17th, 2025
jai-film

ಮಂಗಳೂರು: ”ನಾನು ತುಳುನಾಡಿನವ, ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ. ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸೆ ಹಿಂದಿನಿಂದಲೂ ಇತ್ತು. ಆದರೆ ಕಾಲ ಕೂಡಿ ಬಂದಿರಲಿಲ್ಲ. ಈಗ ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಬರುತ್ತಿರುವ ಜೈ ಸಿನಿಮಾ ಕಥೆ ಕೇಳಿ ಇಷ್ಟಪಟ್ಟು ನಟಿಸುತ್ತಿದ್ದೇನೆ“ ಎಂದು ಬಾಲಿವುಡ್ ಸ್ಟಾರ್ ನಟ ಸುನಿಲ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ”ಕಾಮಿಡಿ ಸಿನಿಮಾಗಳಲ್ಲಿ ಅಭಿನಯ ಮಾಡಬೇಕು ಅನ್ನುವ […]

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣ ಸಾವು

Sunday, January 12th, 2025
Anas Uppala

ಕಾಸರಗೋಡು : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಳದ ಬಾಯಾರಿನ ಲ್ಲಿ ಶನಿವಾರ ಸಂಜೆ ನಡೆದಿದೆ. ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಶನಿವಾರ ಸಂಜೆ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದೆ. ಬಳಿಕ ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದು, ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ […]

ಹಿಂದೂಗಳ ನೂರಾರು ಸಮಸ್ಯೆಗೆ ಹಿಂದೂ ರಾಷ್ಟ್ರ ಒಂದೇ ಉಪಾಯ : ಶ್ರೀ ಪ್ರಣವ ಮಲ್ಯ

Sunday, January 12th, 2025
Hindu-Jana-Jagruti

ವಿಟ್ಲ (ಬಂಟ್ವಾಳ) : ದೇಶವನ್ನು ಆಳಿದ ಮುಘಲರು, ಬ್ರಿಟಿಷರು , ಪೋರ್ಚುಗೀಸರು, ಪ್ರತಿಯೊಬ್ಬರೂ ಧರ್ಮವನ್ನು ಗುರಿಯಾಗಿಸಿ ಹಿಂದೂ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸಿದರು. ಸದ್ಯದ ಸ್ಥಿತಿಯಲ್ಲಿಯೂ ಕೂಡ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ ನಡೆಯುತ್ತಿದೆ. ವಕ್ಫ್ ಕಾಯ್ದೆ, ಲವ್ ಜಿಹಾದ್ ನಂತಹ ಸಮಸ್ಯೆ ಹಿಂದೂಗಳು ಎದುರಿಸಬೇಕಾಗಿದೆ. ಧರ್ಮ ಉಳಿದರೆ ರಾಷ್ಟ್ರ ಉಳಿಯುವುದು, ರಾಷ್ಟ್ರ ಉಳಿದರೆ ನಾವು ಬದುಕಿರಲು ಸಾಧ್ಯ ಇದನ್ನು ಅರಿತುಕೊಳ್ಳುವ ಅವಶ್ಯಕತೆ ಇದೆ. ಹಿಂದೂ ರಾಷ್ಟ್ರ ಸಧ್ಯದ ಕಾಲದ ಅವಶ್ಯಕತೆಯಾಗಿದೆ. ಹಿಂದೂ ರಾಷ್ಟ್ರ ನಮಗೆ […]

ಕರಾವಳಿ ಉತ್ಸವದ ಬೀಚ್ ಉತ್ಸವ ಸಮಾರೋಪ

Sunday, January 12th, 2025
Raghu-Dixith

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ರೋಹನ್ ಕಾಪೋ೯ರೇಶನ್ ನಡೆಸಿದ ಎರಡು ದಿನಗಳ ಬೀಚ್ ಉತ್ಸವ ಭಾನುವಾರ ಸಮಾರೋಪಗೊಂಡಿತು. ಮಂಗಳೂರು ಉತ್ತರ. ಶಾಸಕ ಭರತ್ ಶೆಟ್ಟಿ ಅವರು ಸಮಾರೋಪದಲ್ಲಿ ಮಾತನಾಡಿ, ಬೀಚ್ ಉತ್ಸವದಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ದೊರಕಲಿದೆ. ಕರಾವಳಿಯ ಸೊಬಗನ್ನು ಹೆಚ್ಚಿಸಲು ಇಂತಹ ಕಾಯ೯ಕ್ರಮಗಳು ಇನ್ನಷ್ಟು ನಡೆಯಲಿ ಎಂದು ಹೇಳಿದರು. ಸಮಾರಂಭದಲ್ಲಿ ಮೇಯರ್ ಮನೋಜ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಅಪರ ಜಿಲ್ಲಾಧಿಕಾರಿ ಡಾ. […]

ಕನಾ೯ಟಕ ಕ್ರೀಡಾಕೂಟ ಯಶಸ್ಸಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ಕರೆ

Sunday, January 12th, 2025
Karnataka-Sports

ಮಂಗಳೂರು : ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು […]

ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ: ಸಿ.ಎಂ.ಬಣ್ಣನೆ

Saturday, January 11th, 2025
ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ: ಸಿ.ಎಂ.ಬಣ್ಣನೆ

ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ […]