ಜನವರಿ 11ರಂದು ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ

Thursday, January 9th, 2025
Naringana-Kambala

ಮಂಗಳೂರು : ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಸಹಕಾರದಲ್ಲಿ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.11ರಂದು ಬೆಳಗ್ಗೆ 8.30ರಿಂದ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರಾದ ವಿಧಾನಸಭೆ ಸ್ಪೀಕರ್, ಶಾಸಕ ಯು.ಟಿ.ಖಾದರ್ ಹೇಳಿದರು. ಜ.11ರಂದು ಸಂಜೆ 4.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಪಜೀರಿನಲ್ಲಿ 25 ವರ್ಷ ಕಂಬಳ ನಡೆಸಿದ, ಕೋಣದ […]

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ

Wednesday, January 8th, 2025
ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ” ಇ-ಪೇಪರ್ ನ 4ನೇ ಸಂಚಿಕೆಯನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಬಿಡುಗಡೆಗೊಳಿಸಿದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಸುಖಪಾಲ್ […]

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ

Wednesday, January 8th, 2025
Srinivas-indaje

ಮಂಗಳೂರು:ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ‌ ಸರಕಾರ ಆದೇಶ ಮಾಡಿದೆ. ಗ್ರಾಮೀಣ‌ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಬಸ್‌ನಲ್ಲಿ ಓಡಾಟ ನಡೆಸಲು ಉಚಿತ ಬಸ್ ಪಾಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆ ಬಳಿಕ ಆದೇಶ ಕೂಡ ಮಾಡಲಾಗಿತ್ತು. ಇದೀಗ […]

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿ, ವಾರ್ಷಿಕ ಸ್ನೇಹ ಮಿಲನ

Wednesday, January 8th, 2025
Kulala-sangha-Mumbai

ಮುಂಬಯಿ : ಕುಲಾಲ ಸಮಾಜದ ಯುವ ಸದಸ್ಯರು ಸಮಾಜದ ಹಿರಿಯರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಕಾರ್ಯನಿರತರಾಗಿದ್ದಾರೆ. ಇದೇ ರೀತಿ ನಮ್ಮ ಯುವ ಸದಸ್ಯರು ಸಂಘದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸುವಂತಾಗಲಿ. ಇದರಿಂದ ಸಂಘವು ಇನ್ನಷ್ಟು ಬಲಿಷ್ಥ ವಾಗುವುದು ಎಂದು ಕುಲಾಲ ಸಂಘ ಮುಂಬಯಿ ಯ ಅಧಕ್ಷರಾದ ರಘು ಎ. ಮೂಲ್ಯ ಪಾದೆಬೆಟ್ಟು ನುಡಿದರು. ಜ. 5ರಂದು ಗೋರೆಗಾಂವ್ ಪೂರ್ವದ ಜಯಪ್ರಕಾಶ್ ನಗರದ ನಂದಾದೀಪ ವಿದ್ಯಾಲಯದ ಸಭಾಗೃಹದಲ್ಲಿ ಚರ್ಚ್ ಗೇಟ್ – ದಹಿಸರ್ ಸಮಿತಿ ಕಾರ್ಯಾಧ್ಯಕ್ಷ ಆನಂದ […]

ಹೊಸಬೆಟ್ಟು ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವು

Wednesday, January 8th, 2025
Hosabettu death

ಮಂಗಳೂರು: ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ಮೂವರು ಪ್ರವಾಸಿಗರು ಸಮುದ್ರಪಾಲಾಗಿದ್ದಾರೆ. ಮೃತರು ಬೆಂಗಳೂರಿನ‌ ಸತ್ಯವೇಲು, ಚಿತ್ರದುರ್ಗದ ಮಂಜುನಾಥ್ ಮತ್ತು ಶಿವಮೊಗ್ಗದ ಶಿವಕುಮಾರ್ ಎಂದು ತಿಳಿದುಬಂದಿದೆ. ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿದ್ದನ್ನು ಕಂಡ ಸ್ಥಳೀಯರು ಮೀನುಗಾರರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಸಮುದ್ರಪಾಲಾಗಿದ್ದು ಬೀದರ್‌ ಮೂಲದ ಪರಮೇಶ್ವರ್‌ ಎಂಬಾತನನ್ನು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶಿವಕುಮಾರ್ ಮತ್ತು ಸತ್ಯವೇಲು ಎಂಬವರ ಮೃತದೇಹ ಸಿಕ್ಕಿದ್ದು ಮಂಜುನಾಥ್ ಮೃತದೇಹಕ್ಕೆ ಹುಡುಕಾಟ […]

ನಿಜವಾದ ರಿವಾಲ್ವರ್ ನ್ನು ಆಟದ ವಸ್ತು ಎಂದು ಟ್ರಿಗರ್ ಒತ್ತಿದ ವ್ಯಕ್ತಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲು

Tuesday, January 7th, 2025
Rizwan

ಮಂಗಳೂರು : ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಫ್ವಾನ್ ಎಂದು ಗುರುತಿಸಲಾಗಿದೆ. ವಾಮಂಜೂರಿನ ಸೆಕೆಂಡ್ ಹ್ಯಾಂಡ್ ಅಂಗಡಿಯೊಂದರಲ್ಲಿ ಭಾಸ್ಕರ್ ಎಂಬವರು ಗನ್ ಅನ್ನು ಟೇಬಲ್ ಮೇಲಿರಿಸಿ ವಾಶ್ ರೂಂ ಗೆಂದು ತೆರಳಿದ್ದರು. ಈ ವೇಳೆ ಸೆಕೆಂಡ್ ಹ್ಯಾಂಡ್ ಬಜಾರ್ ಗೆ ಖರೀದಿಗೆ ಬಂದಿದ್ದ ಸಫ್ವಾನ್ ಎಂಬವರು ಆಟದ ವಸ್ತುವೆಂದು ಭಾವಿಸಿ ಹೊಟ್ಟೆಯ […]

ಕೇರಳ ಪುಸ್ತಕ ಮೇಳ- 3ನೇ ಆವೃತ್ತಿ : ಸ್ಪೀಕರ್ ಯು.ಟಿ. ಖಾದರ್ ಭಾಗಿ

Tuesday, January 7th, 2025
Kerala-book-fair

ಮಂಗಳೂರು : ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರು ಜ.7 ರಂದು ಮಂಗಳವಾರ ಕೇರಳ ವಿಧಾನ ಸಭೆ ಸಚಿವಾಲಯ, ತಿರುವನಂತಪುರ ದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಪುಸ್ತಕ ಮೇಳ- 3ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪುಸ್ತಕ ಮೇಳವನ್ನು ಉದ್ಘಾಟಿಸಿದರು. ಕೇರಳ ವಿಧಾನಸಭೆ ಸ್ಪೀಕರ್ ಎ.ಎನ್. ಶಮೀರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಮಾರಂಭದಲ್ಲಿ ಕೇರಳ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ವಿ.ಡಿ. ಸತೀಶನ್, ಕೇರಳ ರಾಜ್ಯದ […]

ಸಾವ೯ಜನಿಕ ಸ್ಥಳದಲ್ಲಿ ಸಿಗರೇಟ್ ಸೇದುತ್ತಿದ್ದವರಿಗೆ ದಂಡ

Tuesday, January 7th, 2025
cigarate smocking

ಮಂಗಳೂರು : ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಂಡವು ಬರ್ಕೆ ಪೊಲೀಸ್ ಠಾಣೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಗಳ ತಂಡದೊಂದಿಗೆ ನಗರದ ಲಾಲ್‍ಬಾಗ್‍ನ ಸಾಯಿಬಿನ್ ಸಂಕೀರ್ಣ, ಬಲ್ಲಾಲ್‍ಬಾಗ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಹಾಗೂ ಕೋಟ್ಪ – 2003 ಕಾಯ್ದೆ ಉಲ್ಲಂಘನೆ ಮಾಡಿರುವ ಅಂಗಡಿ ಮಾಲಕರಿಗೆ ಕಾನೂನಿನ ಅನ್ವಯ ದಂಡವಿಧಿಸಿ ಎಚ್ಚರಿಕೆ ನೀಡಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್. ಇವರ ಆದೇಶದಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. […]

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್‌ ಉದ್ಘಾಟನೆ

Tuesday, January 7th, 2025
Sanidhya-que Complex

ಧರ್ಮಸ್ಥಳ : ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಧಾರ್ಮಿಕ ಸಂಸ್ಥೆಗಳು ತಮ್ಮದೇ ಕೊಡುಗೆ ನೀಡುತ್ತಿವೆ ಎಂದು ಭಾರತದ ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಹೇಳಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ಸುಸಜ್ಜಿತ ಸೌಕರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ‘ಶ್ರೀಸಾನ್ನಿಧ್ಯ’ ಮತ್ತು 2024-25ರ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ ನೆರವೇರಿಸಿ ಅವರು ಮಂಗಳವಾರ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿಯಾದರೆ, ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ […]

ವಿಟ್ಲ ಉದ್ಯಮಿ ಮನೆಯಿಂದ 30 ಲಕ್ಷ ಹಣ ದರೋಡೆ, ಪತ್ತೆಗೆ ನಾಲ್ಕು ಪೊಲೀಸ್ ತಂಡ ರಚನೆ

Tuesday, January 7th, 2025
Vitla-Robbery

ಮಂಗಳೂರು : ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 30 ಲಕ್ಷ ಹಣ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌.ತಿಳಿಸಿದ್ದಾರೆ . ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ತಂಡಗಳು ವಿವಿಧ ಆಯಾಮದಲ್ಲಿ ತನಿಖೆ ಆರಂಭಿಸಿವೆ. ಕೃತ್ಯದಲ್ಲಿ ಹೊರ ಜಿಲ್ಲೆಯವರು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು ಆ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ. ಇನ್ನುಳಿದಂತೆ ತಾಂತ್ರಿಕ ತಂಡ, ಜಿಲ್ಲೆಯ ನಾನಾ ಕಡೆ ನಡೆದ ದರೋಡೆ ಪ್ರಕರಣಗಳ […]