ಅಧ್ಯಾಪಿಕೆ ಕೆ. ಎ. ರೋಹಿಣಿಯವರಿಗೆ “ಬೈಕಾಡಿ ಜನಾರ್ದನ್ ಆಚಾರ್ ಪ್ರಶಸ್ತಿ 2025” ಪ್ರದಾನ

Tuesday, January 7th, 2025
Baikady-Janardhan-Achar

ಮಂಗಳೂರು : ‘ಬೈಕಾಡಿ ಪ್ರತಿಷ್ಠಾನ ಮಂಗಳೂರು’ ಇದರ ವತಿಯಿಂದ ಬೈಕಾಡಿ ಜನಾರ್ದನ ಆಚಾರ್ ಅವರ ಹುಟ್ಟುಹಬ್ಬದಂದು ನೀಡುವ 5ನೇ ವರ್ಷದ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ’ ಸಮಾರಂಭವು ನಗರದ ಉರ್ವಸ್ಟೋರ್ ನ ತುಳು ಭವನದ ಪ್ರೊಫೆಸರ್ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ದಿನಾಂಕ 5 ರಂದು ಸಂಪನ್ನಗೊಂಡಿದೆ. ಶ್ರೀ ಜಗದ್ಗುರು ದುರುದುಂಡೀಶ್ವರ ಸಿದ್ಧಸಂಸ್ಥಾನ ಮಠ, ಬೆಳಗಾವಿಯ ನಿಡಸೋಸಿಯ ಉತ್ತರಾಧಿಕಾರಿಗಳಾದ ಶ್ರೀ ನಿಜಲಿಂಗೇಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ಈ ಕಾರ್ಯಕ್ರಮವು ನಡೆಯಿತು. ಸ್ವಾಮಿಗಳು ಆಶೀರ್ವಚನ ನೀಡುತ್ತಾ, “ಬೈಕಾಡಿ ಜನಾರ್ದನ […]

ಎಸ್ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆ ವಿನೂತನ ಸೌಲಭ್ಯದೊಂದಿಗೆ ಲೋಕಾರ್ಪಣೆ

Tuesday, January 7th, 2025
Kalladka-SCDCC-Bank

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಖೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಏಕೈಕ ಬ್ಯಾಂಕ್ ಏನಾದರೂ ಇದ್ದರೆ ಅದು ಎಸ್ ಸಿಡಿಸಿಸಿ ಬ್ಯಾಂಕ್ ಮಾತ್ರ. ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿರುವ […]

ವಿಶ್ವಮಾನವನಾಗಬೇಕೆಂಬುದು ಕುವೆಂಪುರವರ ಕನಸಾಗಿತ್ತು : ಕುಸುಮಾ ಕೆ.ಆರ್ ಕನ್ನಡ ಶಿಕ್ಷಕಿ

Monday, January 6th, 2025
Kusuma-KR

ಮಂಗಳೂರು : ಹುಟ್ಟುವ ಪ್ರತಿ ಮಗು ವಿಶ್ವ್ವಮಾನವನೇ. ಆನಂತರ ಆ ಮಗುವನ್ನು ಜಾತಿ ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ ಹಾಗಾಗಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು. ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪುರವರಿಗಿತ್ತು ಎಂದು ಶಿಕ್ಷಕಿ ಕುಸುಮಾ ಕೆ. ಆರ್ ಹೇಳಿದರು. ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಸಾರಥ್ಯದಲ್ಲಿ ದಿನಾಂಕ 05-01-2025ರಂದು ಮಂಗಳೂರು ಪುರಭವನದ ಎದುರಿನ ರಾಜಾಜಿ ಪಾರ್ಕ್ ನಲ್ಲಿ ಕುವೆಂಪು ಜನ್ಮ ದಿನದ ಪ್ರಯುಕ್ತ ನಡೆದ “ಕನ್ನಡವೇ ಸತ್ಯ” ವಿಚಾರಗೋಷ್ಠಿ- ಕವಿಗೋಷ್ಠಿ […]

ಮೋರ್ಗನ್ಸ್ ಗೇಟ್ ಭಗವತೀ ಸಹಕಾರಿ ಬ್ಯಾಂಕಿನಲ್ಲಿ ನಡೆದ ಲಕ್ಷಾಂತರ ರೂಪಾಯಿ ಅವ್ಯವಹಾರ ಬಯಲಿಗೆಳೆದ ಅದೇ ಬ್ಯಾಂಕಿನ ಮಾಜಿ ನಿರ್ದೇಶಕ

Friday, January 3rd, 2025
Bhagavathi-Bank-Staff

ಮಂಗಳೂರು :  ತೀಯಾ ಸಮಾಜಕ್ಕೆ ಒಳಪಟ್ಟ ಭಗವತೀ ಸಹಕಾರಿ ಬ್ಯಾಂಕಿನ ಜೆಪ್ಪಿನಮೊಗರಿನ ಮೋರ್ಗನ್ಸ್ ಗೇಟ್ ಶಾಖೆಯಲ್ಲಿ ಸತ್ತವರ ಹೆಸರಲ್ಲಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಾಲ ಪಡೆದು ಬ್ಯಾಂಕಿಗೆ ವಂಚಿಸಿರುವ ಬಗ್ಗೆ ಬ್ಯಾಂಕಿನ ಮೆನೇಜರ್, ಜನರಲ್ ಮ್ಯಾನೇಜರ್ ಮತ್ತು ಬ್ಯಾಂಕಿನ ಅಧ್ಯಕ್ಷರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿನಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಮಾಜಿ ನಿರ್ದೇಶಕರೂ ಆಗಿರುವ ಹರೀಶ್ ಇರಾ ಅವರು ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲಗಾರ ವ್ಯಕ್ತಿ ಸತ್ತ ಬಳಿಕವೂ ಆತನ ಹೆಸರಲ್ಲಿ 20 […]

ಒಡ್ಡೂರುಫಾರ್ಮ್ಸ್ ಬಳಿ ಇರುವ ಸಿ‌ಎನ್.ಜಿ.ಘಟಕಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ

Thursday, January 2nd, 2025
Oddoor-Farms

ಬಂಟ್ವಾಳ : ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರುಫಾರ್ಮ್ಸ್ ಬಳಿ ಇರುವ ಸಿ‌ಎನ್.ಜಿ.ಘಟಕಕ್ಕೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದ ಅವರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಇಂತಹ ಪ್ರಯತ್ನಗಳು ಸಹಕಾರಿ ಆಗುತ್ತದೆ ಎಂದರು. ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಸಕ ರಾಜೇಶ್ ನಾಯ್ಕ್ ಹಾಗೂ ಉನ್ನತ್ ಆರ್.ನಾಯ್ಕ್ ಘಟಕದಲ್ಲಿ ಅಟೋ ಗ್ಯಾಸ್ ಪ್ರಾಯೋಗಿಕ ವಿತರಣೆಗೆ ಅನುಕೂಲ ಕಲ್ಪಿಸಲಾಗಿರುವ ಬಗ್ಗೆ ಮಾಹಿತಿ […]

ಪ್ರಿಯಾಂಕ ಖರ್ಗೆ ಕೆಳಗಿಳಿಯಲು ಹೋರಾಟವನ್ನು ಮುಂದುವರಿಸುತ್ತೇವೆ : ಪ್ರಹ್ಲಾದ ಜೋಷಿ

Thursday, January 2nd, 2025
Prahlad-Joshi

ಮಂಗಳೂರು :  ತಂದೆ ಎಐಸಿಸಿ ಅಧ್ಯಕ್ಷರಾಗಿರುವಾಗ ಮಗ ರಾಜಿನಾಮೆ ಕೊಡುತ್ತಾರೆಂಬ ನಿರೀಕ್ಷೆ ನಮಗಿಲ್ಲ. ಆದರೆ ಪ್ರಿಯಾಂಕ ಖರ್ಗೆ ಕೆಳಗಿಳಿಸಬೇಕೆಂದು ಹೋರಾಟವನ್ನು ಮಾತ್ರ ಮುಂದುವರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಹುಲ್ ಗಾಂಧಿಯವರು ಮೊಹಬ್ಬತ್ ಕೀ ದೂಕಾನ್ ಎಂದು ಹೇಳುತ್ತಿದ್ದರು. ಕಾಂಗ್ರೆಸ್ ಸರ್ಕಾರ ಇರುವಲ್ಲೆಲ್ಲ ಇದಕ್ಕೆ ತದ್ವಿರುದ್ಧವಾಗಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಹತ್ಯಾ ಔರ್ ಆತ್ಮಹತ್ಯಾ ಕಾ ದೂಕಾನ್ ಅನ್ನೋ ರೀತಿ ಮಾಡಿದ್ದಾರೆ. ಕಟಾ ಕಟಾ ಎಂದು ಬಡವರ ಹಣವನ್ನು ತಿಂದು […]

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆಎಸ್ ಆರ್ ಟಿಸಿ ಬಸ್ ನ ಡಿಸೇಲ್ ಟ್ಯಾಂಕ್

Thursday, January 2nd, 2025
KSRTC-bus diesel tank

ವಿಟ್ಲ : ಕೆಎಸ್ ಆರ್ ಟಿಸಿ ಬಸ್ ಒಂದರ ಡಿಸೇಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಗುರುವಾರ ನಡೆದಿದೆ. ಮಂಗಳೂರಿನಿಂದ ಅರಸೀಕೆರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ತಲುಪಿದಾಗ ಅದರ ಡೀಸೆಲ್ ಟ್ಯಾಂಕ್ ಏಕಾಏಕಿ ಕಳಚಿ ರಸ್ತೆಗೆ ಕಳಚಿದೆ. ಈ ವೇಳೆ ಟ್ಯಾಂಕ್ ನಿಂದ ಡೀಸೆಲ್ ರಸ್ತೆಗೆ ಚೆಲ್ಲಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಬೇರೊಂದು […]

ಮುಂದಿನ ವರ್ಷ ಅಂತರಾಷ್ಟ್ರೀಯ ಚಲನಚಿತ್ರೋತ್ಸವ – ಜಿಲ್ಲಾಧಿಕಾರಿ

Thursday, January 2nd, 2025
Karavali-Utsava

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಕರಾವಳಿ ಉತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಚಲನಚಿತ್ರೋತ್ಸವವನ್ನು ನಡೆಸಲಾಗಿದೆ. ಇದನ್ನು ಇನ್ನಷ್ಟು ವಿಸ್ತರಿಸಿ ಹೆಚ್ಚಿನ ಚಲನಚಿತ್ರಗಳನ್ನು ವೀಕ್ಷಿಸಲು ಅನುವಾಗುವಂತೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕೆಂಬ ಉದ್ದೇಶವಿದೆ ಎಂದರು. ಭಾರತದ ಸಿನಿಮಾ […]

ಮಂಜನಾಡಿ ಗ್ಯಾಸ್ ದುರಂತ : ತನ್ನ ಶಾಲೆಯ ವಿಧ್ಯಾರ್ಥಿಗಳಿಗಾಗಿ 21 ದಿನ ಕಂಬನಿ ಮಿಡಿದ ಶಿಕ್ಷಕ

Thursday, January 2nd, 2025
Santhosh-Montepadavu

ಮಂಗಳೂರು : ಶಿಕ್ಷಕರು ಎಂದರೆ ಕೇವಲ ಮಕ್ಕಳ ಭವಿಷ್ಯ ರೂಪಿಸುವವರಲ್ಲ, ಬದಲಾಗಿ ಮಾನವೀಯತೆಯ ಜೊತೆಗೆ ಅಕ್ಷರ ಜ್ಞಾನದ ಮೂಲಕ ಶಿಕ್ಷಣ ನೀಡುವ ಮಹಾನ್ ವ್ಯಕ್ತಿಗಳು ಅಂತ ಹೇಳ್ತಿವಿ. ಅಂತಹ ಮಾನವೀಯತೆಯ ಪ್ರತೀಕ, ಹೃದಯವಂತ ಶಿಕ್ಷಕ ಮೊಂಟೆಪದವು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಅವರಿಗೆ ಪ್ರಶಂಶೆಗಳು ವ್ಯಕ್ತವಾಗಿದೆ. ಮಂಜನಾಡಿ ಗ್ಯಾಸ್ ದುರಂತದಲ್ಲಿ ಮರಣ ಹೊಂದಿದ ಇಬ್ಬರು ಮಕ್ಕಳು, ಮತ್ತು ಚೇತರಿಸಿಕೊಳ್ಳುತ್ತಿರುವ ಒಂದು ಮಗು ಇವರ ಶಾಲೆಯಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದದ್ದು .ಮೂವರೂ 14, 12, 9 ವರ್ಷದ ಹೆಣ್ಣು ಮಕ್ಕಳು. […]

ಮೂಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಧರ ಡಿ.ಎಸ್

Thursday, January 2nd, 2025
Sridhar-ds

ಮಂಗಳೂರು : ಮೂಲ್ಕಿ ತಾಲೂಕು ಎರಡನೆಯ ಸಾಹಿತ್ಯ ಸಮ್ಮೇಳನ ಫೆಬ್ರವರಿ 8ರಂದು ಕಿನ್ನಿಗೋಳಿ ಐಕಳದ ಪಾಂಪೈ ಕಾಲೇಜಿನಲ್ಲಿ ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ಶ್ರೀಧರ ಡಿ.ಎಸ್. ಆಯ್ಕೆಯಾಗಿದ್ದಾರೆ. ಶ್ರೀಧರ ಡಿ.ಎಸ್. ಇವರು ಯಕ್ಷಗಾನ ಅರ್ಥಧಾರಿ, ಪ್ರಸಂಗ ಕರ್ತೃ, ಯಕ್ಷಗಾನ ವಿಮರ್ಶಕ, ಕಥೆಗಾರ, ಕವಿ, ಕಾದಂಬರಿಕಾರರಾದ ಶ್ರೀಧರ ಡಿ.ಎಸ್ ಮೂರು ದಶಕಗಳ ಕಾಲ ಕಿನ್ನಿಗೋಳಿಯ ಪಾಂಪೈ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದರು. 2020ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ‘ಪಾರ್ತಿ ಸುಬ್ಬ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಿನ್ನಿಗೋಳಿಯಲ್ಲಿ ಸಮಾನ ಆಸಕ್ತ ಗೆಳೆಯರೊಂದಿಗೆ […]