ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Thursday, January 2nd, 2025
Samruddi j Shetty

ಮಂಗಳೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ಜಾರ್ಖಂಡ್‌ನ ರಾಂಚಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಶನ್‌ ಆಫ್‌ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ ಹಾಗೂ ಹರಿಣಾಕ್ಷಿ ಜೆ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು, ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

ಧರ್ಮಸ್ಥಳದಲ್ಲಿ ಭಕ್ತರ ಗಡಣ, ಅಲಂಕಾರ ಸೇವೆ

Thursday, January 2nd, 2025
Flower-decoration

ಉಜಿರೆ: ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ), ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿ ಎಲ್ಲರ […]

ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿಡೀರ್ ಭೇಟಿ

Thursday, January 2nd, 2025
ESI Hospital

ಮಂಗಳೂರು: ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆ ಯ ಹಿರಿಯ ಅಧಿಕಾರಿಗಳ ಅನುಪ ಸ್ಥಿತಿ ಕಂಡು ಬಂದಿದ್ದು ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ರೋಗಿಗಳ ಸಮಸ್ಯೆಗೆ ಕಾರಣವಾದ ಸರ್ವರ್ ದೋಷವನ್ನು ಸರಿಪಡಿಸಲು ಅಧಿಕಾರಿಗಳು ನೀಡಲಾಗಿರುವ ದೂರುಗಳ ಪತ್ರಗಳನ್ನು ಹಾಜರು ಪಡಿಸುವಂತೆ ತಿಳಿಸಿದರು. ಇದೆ […]

ಬಸ್ ನಲ್ಲಿ ತಿಗಣೆ ಕಾಟ : ಖಾಸಗಿ ಬಸ್ ಹಾಗೂ ರೆಡ್ ಬಸ್ ಗೆ ದಂಡ ವಿಧಿಸಿದ ನ್ಯಾಯಾಲಯ

Tuesday, December 31st, 2024
mosquito

ಮಂಗಳೂರು : ಬಸ್ ನಲ್ಲಿ ತಿಗಣೆ ಕಾಟಕ್ಕೆ ಹೈರಾಣಾಗಿದ್ದ ಪ್ರಯಾಣಿಕರು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಿದಾಗ ಘಟನೆ ಸೀ ಬರ್ಡ್ ಬಸ್ ನಲ್ಲಿ ತಿಗಣೆ ಕಾಟದಿಂದ ಹಿಂಸೆ ರೆಡ್ ಬಸ್ ಅ್ಯಪ್ ಮೂಲಕ ಟಿಕೇಟ್ ಬುಕ್ ಮಾಡಲಾಗಿತ್ತು ದೀಪಿಕಾ ಸುವರ್ಣ ಎಂಬವರು ಬಸ್ ಬುಕ್ ಮಾಡಿದ್ದರು. ದೀಪಿಕಾ ಸುವರ್ಣ ರಿಯಾಲಿಟಿ ಶೋದಲ್ಲಿ ಭಾಗವಹಿಸುತ್ತಿದ್ದರು. ಪತಿ ಶೋಭರಾಜ್ ಪಾವೂರು ಜೊತೆಯಲ್ಲಿ ರಿಯಾಲಿಟಿ ಶೋ ಕಿರುತೆರಯಲ್ಲಿ ಪ್ರಸಿದ್ಧಿ ಪಡೆದಿದ್ದ ರಾಜಾರಾಣಿ ರಿಯಾಲಿಟಿ ಶೋ ರಿಯಾಲಿಟಿ ಶೋಗೆ ತೆರಳುವಾಗ ಬಸ್ ನಲ್ಲಿ ತಿಗಣೆ […]

ಚೆಕ್ ಬೌನ್ಸ್ ಪ್ರಕರಣ: ಭೀಮ ಲಕ್ಷ್ಮೀ ಚಿಟ್ಸ್ ಗೆ ಎರಡು ಪ್ರಕರಣಗಳಲ್ಲೂ ಸೋಲು- ಆರೋಪಿಗಳಿಬ್ಬರ ಖುಲಾಸೆ

Tuesday, December 31st, 2024
cheque-bounce

ಮಂಗಳೂರು: ಭೀಮ ಲಕ್ಷ್ಮೀ ಚಿಟ್ಸ್ ಪ್ರೈ.ಲಿ. ದಾಖಲಿಸಿದ ಎರಡು ಚೆಕ್ ಬೌನ್ಸ್ ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳಿಬ್ಬರನ್ನೂ ಖುಲಾಸೆಗೊಳಿಸಿ ಮಂಗಳೂರಿನ ನಾಲ್ಕನೇ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ(ಜೆಎಂಎಫ್.ಸಿ) ನ್ಯಾಯಾಲಯ ತೀರ್ಪು ನೀಡಿದೆ. 2019ರಲ್ಲಿ ಚೆಕ್ ಅಮಾನ್ಯಗೊಂಡ ಹಿನ್ನೆಲೆಯಲ್ಲಿ ಭೀಮ ಲಕ್ಷ್ಮಿ ಚಿಟ್ಸ್ ಸಂಸ್ಥೆ ಮಂಗಳೂರಿನ ಜೆಎಂಎಫ್.ಸಿ ನ್ಯಾಯಾಲಯದಲ್ಲಿ ಆರೋಪಿಗಳಾದ ಇಳಂಗೋವನ್ ಮತ್ತಿವಣ್ಣನ್ ಮತ್ತು ರಾಜೇಶ್ವರಿ ಇಳಂಗೋವನ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಚಿಟ್ಸ್ ಸಂಸ್ಥೆಯಲ್ಲಿ ಪಡೆದ ಸಾಲಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ನೀಡಲಾಗಿದ್ದ ಚೆಕ್ ಅಮಾನ್ಯಗೊಂಡಿರುವುದಾಗಿ ವಾದಿಸಿದ್ದ ಫಿರ್ಯಾದಿ ಸಂಸ್ಥೆ, ತನ್ನ […]

ಉಜಿರೆ: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Saturday, December 28th, 2024
Ujire-sdm

ಉಜಿರೆ: 25 ವರ್ಷಗಳ ಹಿಂದೆ ಅಂದರೆ, 1996-1999ರ ಅವಧಿಯಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಸೆಕೆಂಡರಿ ಶಾಲೆ ಮತ್ತು ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಎಂಟನೆ ತರಗತಿಯಿಂದ ಎಸ್.ಎಸ್.ಎಲ್.ಸಿ. ವರೆಗೆ ಶಿಕ್ಷಣ ಪೂರೈಸಿದ ಹಿರಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರ ಸಮಾವೇಶ ಹಾಗೂ “ಗುರುವಂದನ” ಕಾರ್ಯಕ್ರಮ ಶನಿವಾರ ಶಾಲೆಯ ಸಭಾಭವನದಲ್ಲಿ ನಡೆಯಿತು. ಸಮಾರಂಭದ ಎಲ್ಲಾ ವ್ಯವಸ್ಥೆಗಳನ್ನು ಹಿರಿಯ ವಿದ್ಯಾರ್ಥಿಗಳೆ ಸ್ವಯಂ ಪ್ರೇರಿತರಾಗಿ ಆಯೋಜಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸುರೇಶ್, ಕೆ. ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿಗಳಾದ ಮಂಜನಾಯ್ಕ, ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ […]

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ – ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ

Saturday, December 28th, 2024
Delampady

ಮಂಗಳೂರು : ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ನಡೆಯುವ ಎರಡು ವಾರಗಳ ಕಾಲ ಜರುಗಿದ ಯೋಗ ಶಿಬಿರ ಸಮರೋಪಗೊಂಡಿತು. ದೇಲಂಪಾಡಿ ಯೋಗ ಪ್ರತಿಷ್ಠಾನದ ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಶಿಬಿರಾರ್ಥಿಗಳಿಗೆ ಯೋಗದ ಮಹತ್ವದ ಪ್ರಯೋಜನಗಳನ್ನು ತಿಳಿಸಿದರು. ಯೋಗವು ನಿಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ.ಅವುಗಳೆಂದರೆ ದೈಹಿಕ ಆರೋಗ್ಯ : ಯೋಗವು ಶಕ್ತಿ ಸಮತೋಲನ ಮತ್ತು ನಮ್ಯತೆಯನ್ನು ಸುಧಾರಿಸುತ್ತದೆ. ಇದು ಬೆನ್ನು ನೋವು, ಸಂಧಿವಾತ ಮತ್ತು ಇತರ ದೀರ್ಘಕಾಲದ ನೋವುಗಳಿಗೆ ಸಹ ಸಹಾಯ ಮಾಡುತ್ತದೆ. […]

ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಮಂಗಳೂರು ಕಂಬಳ ಉದ್ಘಾಟನೆ

Saturday, December 28th, 2024
Mangaluru-Kambala

ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅದ್ಯಕ್ಷತೆಯಲ್ಲಿ ನಡೆಯುವ 8ನೇ ವರ್ಷದ ‘ಮಂಗಳೂರು ಕಂಬಳಕ್ಕೆ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿಸೆಂಬರ್ 28 ರ ಬೆಳಿಗ್ಗೆ 8.30 ಕ್ಕೆ ಚಾಲನೆ ನೀಡಲಾಯಿತು. ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್‌ ಅವರು ಕಂಬಳಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾ. ಗಣೇಶ್‌ ಕಾರ್ಣಿಕ್ ವಹಿಸದ್ದರು. […]

ಪುತ್ತೂರು ಪರ್ಲಡ್ಕದಲ್ಲಿ ಭೀಕರ ಅಪಘಾತ ತಂದೆ ಮಗ ಸೇರಿ ಮೂವರ ದುರ್ಮರಣ

Saturday, December 28th, 2024
puttur-accident

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ ಮಗ ಅಣ್ಣು ನಾಯ್ಕ್, ಚಿದಾನಂದ, ಹಾಗೂ ರಮೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ನಸುಕಿನ ಜಾವ 4:15ರ ಸುಮಾರಿಗೆ ನಿದ್ದೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ […]

ಮನಮೋಹನ್ ಸಿಂಗ್ – ಭಾರತ ಕಂಡ ಪ್ರಾಮಾಣಿಕ ಪ್ರಧಾನಿ

Friday, December 27th, 2024
Manmohan singh

ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. […]