ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ

Wednesday, March 13th, 2024
Brijesh chow

ಮಂಗಳೂರು : ಬಹಳ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಬಿಜೆಪಿ ಟಿಕೆಟ್ ಹಂಚಿಕೆ ಕೊನೆಗೆ ಬ್ರಿಜೇಶ್ ಚೌಟ ಅವರಿಗೆ ದಕ್ಕಿದೆ. ಕಳೆದ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ವಿಜಯ ಗಳಿಸಿದ ನಳಿನ್ ಕುಮಾರ್ ಕಟೀಲ್ ಈ ಬಾರಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಬ್ರಿಜೇಶ್ ಚೌಟ ಆಯ್ಕೆಯ ಈ ವಿಷಯವನ್ನು ಸ್ವತಃ ನಳಿನ್ ಕುಮಾರ್ ಕಟೀಲ್ ಅವರೇ ಹಂಚಿಕೊಂಡಿದ್ದಾರೆ. ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೇ […]

40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಕೋರ್ಟ್ ಪಾರ್ಕ್ ಉದ್ಘಾಟನೆ

Wednesday, March 13th, 2024
Bharath-Shetty

ಮಂಗಳೂರು : ಬಂಗ್ರಕೂಳೂರು ವಾರ್ಡ್‍ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‍ನ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದಿನ ನನ್ನ ಶಾಸಕ ಅವ„ಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್‍ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ ಕಾಮಗಾರಿಗಳು ನಡೆದಿವೆ ಎಂದರು. ಕೊಟ್ಟಾರಚೌಕಿಯಲ್ಲಿ ಪಾರ್ಕ್ ನಿರ್ಮಾಣ ಸಹಿತ […]

ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟನೆ

Wednesday, March 13th, 2024
Udupi-CM

ಉಡುಪಿ : ದೇಶದ ಸಂವಿಧಾನವನ್ನು ಬದಲಿಸುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದ್ದು, ದೇಶದ ಜನ ಇದನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬುಧವಾರ ಮಹಾತ್ಮ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ್ […]

ಕೆಪಿಸಿಸಿ ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ನೇಮಕ

Wednesday, March 13th, 2024
MG-Hegde

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಮಾರ್ಚ್ 13ರಂದು ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಹೆಗ್ಗಡೆಯವರು ತಮ್ಮ ತೀಕ್ಷ್ಣವಾದ ಬುದ್ಧಿ ಮತ್ತು ನಿರರ್ಗಳ ಮಾತುಗಾರಿಕೆಗೆ ಹೆಸರಾದವರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ವಕ್ತಾರರಾಗಿ […]

ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಮೋದಿಯಿಂದ ನಕಲು

Wednesday, March 13th, 2024
Harish-Kumar

ಸುರತ್ಕಲ್: “ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ಮೋದಿ ನಕಲು ಮಾಡಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿಯಾಗುವುದಿಲ್ಲ, ಹಾಗೇನಾದರೂ ಆಗುವುದಿದ್ದರೆ ಅದು ಮೋದಿ ಗ್ಯಾರಂಟಿಯಿಂದ ಮಾತ್ರ” ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಪುಲ್ವಾಮ ಘಟನೆ ನಡೆದು 5 ವರ್ಷ ಕಳೆಯಿತು. ಅಲ್ಲಿನ ಸತ್ಯ ಘಟನೆ ಏನೆನ್ನುವುದನ್ನು ಅಲ್ಲಿನ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ಹೇಳಿದ್ದಾರೆ. ಆದರೆ ಯಾರನ್ನೂ ಈ ಕುರಿತು ಬಂಧಿಸಲಾಗಿಲ್ಲ, ತನಿಖೆ ಕೂಡ ನಡೆದಿಲ್ಲ. ಮೋದಿಯವರು ತನಿಖೆಯನ್ನು ನಡೆಯದಂತೆ […]

ಮಾಜಿ ಸಿಎಂ ಡಿವಿ ಸದಾನಂದ ಗೌಡ ಕಾಂಗ್ರೆಸ್​ ಸೇರ್ಪಡೆ ಮುನ್ಸೂಚನೆ

Wednesday, March 13th, 2024
DVS congress

ಬೆಂಗಳೂರು : ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ 15 ಕ್ಕೆ ಬಿಡುಗಡೆಗೆ ಮುನ್ನವೇ ಬಿಜೆಪಿಯ ಹಲವಾರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ಸೂಚನೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳೂ ಇವೆ ಎಂಬ ವದಂತಿಯೂ ಇದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸದಾನಂದ ಗೌಡ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ […]

ಮಹಿಳೆಗೆ ಹಲ್ಲೆ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಪ್ರಕರಣ ದಾಖಲು

Tuesday, March 12th, 2024
H.N. Balakrishna

ಮಂಗಳೂರು : ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಅಧೀನದ ಜಾಗಕ್ಕೆ ಬೇಲಿ ಹಾಕುವ ಸಂದರ್ಭ ಟ್ರಸ್ಟ್ ನ ಮಹಿಳಾ ಕಾರ್ಯದರ್ಶಿಗೆ ತಡೆಯೊಡ್ಡಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡದ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ, ಸರ್ವೆ ನಂ. 149 ರಲ್ಲಿ ಎರಡು ಎಕರೆ ಜಮೀನು ಮಂಜೂರಾಗಿರುತ್ತದೆ. ಜ.26 ರಂದು ಬೆಳಗ್ಗೆ 8 ಗಂಟೆ […]

ಸುಕುಮಾರ್ ಶೆಟ್ಟಿ, ಕೆ. ಜಯಪ್ರಕಾಶ್ ಹೆಗ್ಡೆ ಸಹಿತ ಮೂವರು ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Tuesday, March 12th, 2024
Jayaprakash-Hegde

ಬೆಂಗಳೂರು : ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಕುಮಾರಸ್ವಾಮಿ ಅವರೊಂದಿಗೆ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಡಿಕೆಶಿ ಅವರು ಜೆಪಿ ಹೆಗ್ಡೆ, ಸುಕುಮಾರ್ ಶೆಟ್ಟಿ ಹಾಗೂ ಕುಮಾರಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಬಳಿಕ […]

ಮಾಂಸದ ಕೋಳಿ ಗಳ ಸಾಕಾಣಿಕೆಯಲ್ಲಿ ಮುನ್ನೆಚ್ಚರಿಕೆ ಕ್ರಮ

Tuesday, March 12th, 2024
poultry-farm

ಮಂಗಳೂರು : ಕೋಳಿ ಮನೆಗಳಲ್ಲಿ ದಿನದ 24 ಗಂಟೆಗಳ ಕಾಲ ತಂಪಾದ ಮತ್ತು ಶುಚಿಯಾದ ನೀರನ್ನು ಒದಗಿಸಬೇಕು. ಒಂದು ಗಂಟೆ ನೀರು ಇಲ್ಲದಿದ್ದರೆ ಕೋಳಿಗಳು ಸಾವನ್ನಪ್ಪಬಹುದು. ಚೆನ್ನಾಗಿ ಗಾಳಿಯಾಡಲು ಅನುಕೂಲವಾಗುವಂತೆ ಎಲ್ಲಾ ತಡೆಗಳನ್ನು ತೆಗೆಯಬೇಕು. ಕೋಳಿ ಮನೆ ಮಾಡಿನ ಮೇಲ್ಭಾಗಕ್ಕೆ ಸುಣ್ಣ ಬಳಿಯಬೇಕು ಆಥವಾ ಹುಲ್ಲು ಅಡಿಕೆಗರಿ, ತೆಂಗಿನ ಗರಿಗಳಿಂದ ಹೊದಿಸಬೇಕು. ಅನುಕೂಲವಿದ್ದರೆ ಕೋಳಿ ಮನೆಯ ಮಾಡಿನ ಮೇಲೆ ಸ್ಪ್ರಿಂಕ್ಲರ್‍ನಿಂದ ನೀರು ಸಿಂಪಡಿಸಬೇಕು. ಕೋಳಿ ಮನೆಯ ಒಳಗೆ ಫ್ಯಾನ್ ಅಥವಾ ಫಾಗರ್ಸ್‍ಗಳನ್ನು ಅಳವಡಿಸಬೇಕು. ವಿಟಮಿನ್ ಸಿ ಮತ್ತು […]

ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯ ಮಾತು

Tuesday, March 12th, 2024
Nalin-Kateel

ಮಂಗಳೂರು : ದಕ್ಷಿಣಕನ್ನಡ ಲೋಕಸಭಾ ಚುನಾವಣಾ ಅಭ್ಯರ್ಥಿ ಆಯ್ಕೆಯಲ್ಲಿ ಬದಲಾವಣೆಯ ಮಾತು ಕೇಳಿ ಬಂದಿದೆ. ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಸತತ ಮೂರು ಬಾರಿ ಸ್ಪರ್ಧಿಸಿರುವುದರಿಂದ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಇಆ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿಯ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಇದನ್ನು ನಾನು […]