ಮದುವೆ ಮಂಟಪ ದಲ್ಲಿ ವಧು ಮದುವೆ ನಿರಾಕರಿಸಿದರೆ, ಪೊಲೀಸ್‌ ಠಾಣೆಯಲ್ಲಿ ವರ ಇವಳು ಬೇಡ ಎಂದ

Saturday, April 27th, 2024
ಮದುವೆ ಮಂಟಪ ದಲ್ಲಿ ವಧು ಮದುವೆ ನಿರಾಕರಿಸಿದರೆ, ಪೊಲೀಸ್‌ ಠಾಣೆಯಲ್ಲಿ ವರ ಇವಳು ಬೇಡ ಎಂದ

ಕಡಬ : ಮದುವೆ ಮಂಟಪ ದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಎ. 26ರಂದು ನಡೆದಿದೆ. ಕೊಣಾಲು ಗ್ರಾಮದ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು ಕುಳದ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ. 26ರ ಬೆಳಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಿಗದಿಯಾಗಿದ್ದು. ವರ ಹಾಗೂ ವಧುವಿನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು. ದಾರೆ ಸೀರೆ […]

ಕುದುರೆ ಏರಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ಯುವಕ

Friday, April 26th, 2024
ಕುದುರೆ ಏರಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ಯುವಕ

ಕಾರ್ಕಳ : ಮತ ಚಲಾಯಿಸಲು ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.  ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಅವರ ಮೊದಲ ಪುತ್ರ ಏಕಲವ್ಯ ಆರ್. ಕಟೀಲ್ ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ‌. 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುವುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ […]

ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 11ಗಂಟೆಗೆ ಶೇ 30.98 ರಷ್ಟು ಮತದಾನ

Friday, April 26th, 2024
Brijesh chowta

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 11ಗಂಟೆಗೆ ಶೇ 30.98 ರಷ್ಟು ಮತದಾನವಾಗಿದೆ . ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು. ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನ

Friday, April 26th, 2024
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನ

ಮಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನವಾಗಿದೆ. ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು. ರಾಜ್ಯ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉಳ್ಳಾಲ ತಾಲೂಕಿನ […]

ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಏ.26ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು

Thursday, April 25th, 2024
ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಏ.26ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು

ಮಂಗಳೂರು : ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ 17-ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು. 200- ಬೆಳ್ತಂಗಡಿ ವಿಧಾನಸಭಾಕ್ಷೇತ್ರದ ಮಸ್ಟರಿಂಗ್ ಕಾರ್ಯ ಬೆಳ್ತಂಗಡಿಯ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು ಕಾಲೇಜಿನಲ್ಲಿ ನಡೆಯಿತು. 201- ಮೂಡಬಿದ್ರೆ […]

ಮಿಥುನ್ ರೈ ಹೇಳಿಕೆ ಮೂರ್ಖತನದ ಪರಮಾವಧಿ : ಶಾಸಕ ಉಮಾನಾಥ್ ಕೋಟ್ಯಾನ್

Wednesday, April 24th, 2024
ಮಿಥುನ್ ರೈ ಹೇಳಿಕೆ ಮೂರ್ಖತನದ ಪರಮಾವಧಿ : ಶಾಸಕ ಉಮಾನಾಥ್ ಕೋಟ್ಯಾನ್

ಮೂಡಬಿದಿರೆ : ಕಾಂಗ್ರೆಸ್ ನಾಯಕ ಮಿಥುನ್ ರೈ ರವರು ಶಾಸಕ ಉಮಾನಾಥ ಕೋಟ್ಯಾನ್ ಕಾಂಗ್ರೆಸ್ ಜೊತೆ ಇದ್ದಾರೆ ಎನ್ನುವ ಹೇಳಿಕೆ ಮೂರ್ಖತನದ ಪರಮಾವಧಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದರು. ಜಾತಿಯ ವಿಷ ಬೀಜ ಬಿತ್ತುತ್ತಾ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿರುವ ಮಿಥುನ್ ರೈ ರವರ ಕುಟಿಲ ರಾಜಕಾರಣಕ್ಕೆ ಜನ ಮರುಳಾಗುವುದಿಲ್ಲ, ನಾನು ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತನಾಗಿದ್ದು ನಮ್ಮ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ರವರನ್ನು ಈ ಬಾರಿ ಮುಲ್ಕಿ […]

ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತೆ ; ಶಕ್ತಿನಗರ ಕಾಲ್ನಡಿಗೆ ರೋಡ್ ಶೋದಲ್ಲಿ ಕ್ಯಾ.ಬ್ರಿಜೇಶ್ ಚೌಟ

Wednesday, April 24th, 2024
ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತೆ ; ಶಕ್ತಿನಗರ ಕಾಲ್ನಡಿಗೆ ರೋಡ್ ಶೋದಲ್ಲಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ […]

ಪಂಪ್’ವೆಲ್’ನಿಂದ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ

Wednesday, April 24th, 2024
congress-road-show

ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು […]

ಲೋಕಸಭಾ ಚುನಾವಣೆ ; 24 ರಿಂದ ಪ್ರತಿಬಂಧಕಾಜ್ಞೆ ಜಾರಿ

Friday, April 19th, 2024
mullai-muhilan

ಮಂಗಳೂರು : ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ […]

ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

Thursday, April 18th, 2024
ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

ಮಂಗಳೂರು : ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿಯ ಉತ್ಸವ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಗುದ್ದಾಟ ನಡೆದ ಘಟನೆ ಗುರುವಾರ ಅಪರಾಹ್ನ ನಡೆದಿದೆ. ಸಾಯಿಬಾಬಾ ಮಂದಿರದ ಬಳಿ ಬಿಜೆಪಿ ಕಾರ್ಯಕರ್ತರು ಚುನಾವಣಾ ಪ್ರಚಾರ ಮಾಡುತ್ತಿದ್ದಾಗ ಕಾಂಗ್ರೆಸ್ಸಿಗರು ಪ್ರಚಾರ ನಡೆಸದಂತೆ ಸೂಚಿಸಿದರು ಎನ್ನಲಾಗಿದೆ. ಈ ಸಂದರ್ಭ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಹೊಯ್‌ಕೈ ನಡೆಯಿತು ಎನ್ನಲಾಗಿದೆ. ಅಷ್ಟರಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ್ತು ಕೆಪಿಸಿಸಿ ಪ್ರಧಾನ […]