ರೈತರ ಸಮಸ್ಯೆಗಳನ್ನು ಅವಲೋಕನ ಮಾಡಲು ಸೆ.25ರಂದು ಶಿವಮೊಗ್ಗದಲ್ಲಿ ಸಭೆ

4:06 PM, Thursday, August 22nd, 2013
Share
1 Star2 Stars3 Stars4 Stars5 Stars
(No Ratings Yet)
Loading...

Nagaraja shettyಮಂಗಳೂರು :  ರಾಜ್ಯದಲ್ಲಿ ನಿರಂತರವಾಗಿ  ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಕರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಕೃಷಿಗೆ ಮದ್ದು ಸಿಂಪಡಿಸಲು ಸಾಧ್ಯವಾಗದೇ ಇದ್ದು ಸುಮಾರು ೫೦% ರಷ್ಟು ಕೊಳೆರೋಗ ತಗುಲಿದ್ದು, ಬೆಳೆದ ಅಡಿಕೆಗಳು ಉದುರಿ ಹೊಗಿವೆ. ಕೃಷಿಕರ ಪರಿಸ್ಥಿತಿ ಚಿಂತಾಜನಕವಾಗಿದ್ದು ಕೋಟಿಗಟ್ಟಲೆ ನಷ್ಟ ಅನುಭವಿಸಿದ್ದಾರೆ. ರೈತರ ನಷ್ಟಕ್ಕೆ ಸರಕಾರದ ಸಹಕಾರ ಅಗತ್ಯವಾಗಿದೆ ಎಂದು ಬಿಜೆಪಿ ಚುನಾವಣೆ ಸಮಿತಿ ಅಧ್ಯಕ್ಷ ನಾಗರಾಜ್ ಶೆಟ್ಟಿ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಮಾಜಿ ಮುಖ್ಯ ಮಂತ್ರಿ ಸದಾನಂದ ಗೌಡ, ಈಶ್ವರಪ್ಪ, ಹಾಗೂ ಕ್ಯಾಂಪ್ಕೋ ಅಧಿಕಾರಿಗಳ ನೇತೃತ್ವದಲ್ಲಿ  ಸಮಿತಿ ರಚಿಸಲಾಗಿದ್ದು ಸೆ.25ರಂದು ಶಿವಮೊಗ್ಗದಲ್ಲಿ ರೈತರ ಸಮಸ್ಯೆಗಳನ್ನು ಅವಲೋಕನ ಮಾಡಲು ಹೋರಾಟ ಸಮಿತಿಯ ಸಭೆ ಕರೆಯಲಾಗಿದೆ ಎಂದರು.

ಗೋರಕ್ ಸಿಂಗ್ ವರದಿಯನ್ನು ಅನುಷ್ಟಾನ ಗೊಳಿಸಲು ಸರಕಾರಕ್ಕೆ ಮನವಿ ಮಾಡಲಾಗುವುದು  ಎಂದು ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಪದ್ಮನಾಭ ಕೊಟ್ಟಾರಿ ಮತ್ತು ಸಂಜೀವ ಮಟಂದೂರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English