ಹಿಂದುಗಳು ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುತ್ತಿದ್ದಾರೆ : ಸಿಪಿಐ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್

12:54 PM, Monday, October 28th, 2013
Share
1 Star2 Stars3 Stars4 Stars5 Stars
(4 rating, 6 votes)
Loading...

prakash-karat

ಮಂಗಳೂರು : ದೇಶದಲ್ಲಿ ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತರ ಆಳ್ವಿಕೆ ಎಂದಾಗಿದೆ. ಬಹುಸಂಖ್ಯಾತ ರಾಗಿರುವ ಕೋಮುವಾದಿ ಹಿಂದುಗಳು ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುತ್ತಿದ್ದಾರೆ. ಬಿಜೆಪಿ ಹಾಗೂ ಆರ್‍ಎಸ್‍ಎಸ್ ಸಂಘಟನೆಗಳು ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವಲ್ಲಿ ತೊಡಗಿರುವುದಾಗಿ ಸಿಪಿಐ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಆರೋಪಿಸಿದರು.

ನಗರದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಮುಸ್ಲಿಂ ಸಮುದಾಯದ ಹಕ್ಕೊತ್ತಾಯ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಆರ್‍ಎಸ್‍ಎಸ್‍ನಂ ತಹ ಕೋಮುವಾದಿ ಹಿಂದುತ್ವ ಸಂಘಟನೆಗಳು ಮುಸ್ಲಿಂ ಅಲ್ಪಸಂಖ್ಯಾ ತರಿಗೆ ಮೇಲೇಳಲು ಬಿಡುತ್ತಿಲ್ಲ. ಮುಸ್ಲಿಂ ರಿಗೆ ಯಾವುದೇ ರಂಗದಲ್ಲಿಯೂ ಸಮಾನತೆ ಸಿಗುತ್ತಿಲ್ಲ. ಭಾರತದಲ್ಲಿ ಯಾವುದೇ ಸಣ್ಣ ಅಥವಾ ದೊಡ್ಡ ನಗರಗಳಲ್ಲಿ ಮುಸ್ಲಿಂ ಸಮುದಾಯ ದವರು ವಾಸಿಸುವ ಪ್ರದೇಶಗಳ ಪರಿಸ್ಥಿತಿಯನ್ನು ಗಮನಿಸಿದರೆ ಅಂತಹ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯ ಗಳ ಕೊರತೆ ಎದ್ದು ಕಾಣುತ್ತಿರುತ್ತದೆ ಎಂದು ತಿಳಿಸಿದರು.

ಕೋಮುಹಿಂಸೆ, ನೈತಿಕ ಪೊಲೀಸ್ ಗಿರಿಯನ್ನು ತಡೆಗಟ್ಟುವ, ಮುಸ್ಲಿಂ ಸಮುದಾಯಕ್ಕೆ ಶಿಕ್ಷಣದಲ್ಲಿ ಆದ್ಯತೆ, ಸರಕಾರಿ ಉದ್ಯೋಗದಲ್ಲಿ ಮೀಸಲಾತಿ, ಜಾನುವಾರು ಸಾಗಾಟಗಾರರ ಮೇಲಿನ ದಾಳಿಯನ್ನು ತಡೆಗಟ್ಟುವ ಹಾಗೂ ವಕ್ಫ್ ಆಸ್ತಿ ಸಂರಕ್ಷಿಸುವ ನಿರ್ಣಯವನ್ನು ಸಮಾವೇಶದಲ್ಲಿ ಕೈಗೊಳ್ಳಲಾಯಿತು. ಸಮಾವೇಶದಲ್ಲಿ ಬಿ. ಮಾಧವ, ಸಾರಾ ಅಬೂಬಕ್ಕರ್, ಸುನೀಲ್ ಕುಮಾರ್ ಬಜಾಲ್, ಕೃಷ್ಣಪ್ಪ ಪೂಜಾರಿ, ಮುನೀರ್ ಕಾಟಿಪಳ್ಳ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English