ಜನವರಿ 5ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ‘ತುಳುನಾಡ್ದ ಜಾತ್ರೆ’

9:02 PM, Tuesday, December 31st, 2013
Share
1 Star2 Stars3 Stars4 Stars5 Stars
(No Ratings Yet)
Loading...

odiyoor Tulunadu Jatre

ಮಂಗಳೂರು : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಫೆಬ್ರವರಿ 7ರಿಂದ ನಡೆಯಲಿರುವ ‘ತುಳುನಾಡ್ದ ಜಾತ್ರೆ’ ಬಲೇ ತೇರ್ ಒಯಿಪುಗ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 5ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿದೆ.

ಜನವರಿ 5ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರಿನ ಜ್ಯೋತಿ ಸರ್ಕಲ್‌ನಿಂದ ‘ತುಳುನಾಡ್ದ ಜಾತ್ರೆ’ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆಯನ್ನು ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆಯ ಸಂಚಾಲಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಉದ್ಘಾಟಿಸಲಿದ್ದಾರೆ.

ನೆಹರೂ ಮೈದಾನದಲ್ಲಿ ಸಂಜೆ 3.30ಕ್ಕೆ ತುಳುನಾಡ ಜಾತ್ರೆ ಕಾರ್ಯಕ್ರಮವನ್ನು ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ವಿವಿಯ ವಿಶ್ರಾಂತ ಕುಲಪತಿ ಡಾ.ಚಿನ್ನಪ್ಪ ಗೌಡ ತುಳುವಿನ ಕುರಿತು ಮಾತನಾಡಲಿದ್ದಾರೆ. ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ ಶ್ರೀ ಮಾತಾನಂದಮಯಿ ಆಶೀರ್ವಚನ್ ನೀಡಲಿದ್ದಾರೆ.

ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಯು.ಟಿ.ಖಾದರ್, ಅಭಯಚಂದ್ರ ಜೈನ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ಜಯಪ್ರಕಾಶ್ ಹೆಗ್ಡೆ, ಕಾಸರಗೋಡು ಸಂಸದ ಕರುಣಾಕರನ್, ದುಬೈಯ ಖ್ಯಾತ ಉದ್ಯಮಿ, ಎನ್‌ಎಂಸಿಯ ಆಡಳಿತ ನಿರ್ದೇಶಕ ಡಾ.ಬಿ.ಆರ್.ಶೆಟ್ಟಿ, ಎಲ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ತುಳು-ಕನ್ನಡ ಸಾಹಿತಿ ಜಾನಕಿ ಬ್ರಹ್ಮಾವರ, ಮುಂಬೈ ಬಂಟರ ಸಂಘದ ಅಧ್ಯಕ್ಷ ಸಿ.ಎ.ಶಂಕರ್ ಶೆಟ್ಟಿ ಭಾಗವಹಿಸಲಿದ್ದಾರೆ.

ಶಾಸಕರಾದ ಜೆ.ಆರ್.ಲೋಬೋ, ಎಸ್.ಅಂಗಾರ, ವಸಂತ ಬಂಗೇರ, ಶಕುಂತಳಾ ಶೆಟ್ಟಿ, ಸುನಿಲ್ ಕುಮಾರ್, ಪ್ರಮೋದ್ ಮಧ್ವರಾಜ್, ಮೊಯಿದಿನ್ ಬಾವಾ, ಗೋಪಾಲ ಪೂಜಾರಿ, ಪ್ರತಾಪಚಂದ್ರ ಶೆಟ್ಟಿ, ಕ್ಯಾ.ಗಣೇಶ್ ಕಾರ್ಣಿಕ್, ಕೋಟ ಶ್ರೀನಿವಾಸ ಪೂಜಾರಿ, ಮೋನಪ್ಪ ಭಂಡಾರಿ, ಕೇರಳ ಶಾಸಕರಾದ ಪಿ.ಬಿ.ಅಬ್ದುಲ್ ರಝಾಕ್, ಎನ್.ಎ.ನೆಲ್ಲಿಕುನ್ನು ಭಾಗವಹಿಸಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English