- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಕ್ಷಿಣ ಕನ್ನಡದಲ್ಲಿ ಮಕ್ಕಳ ಅಪಹರಣದ ಯಾವುದೇ ಜಾಲವಿಲ್ಲ: ಡಾ. ಸಂಜೀವ ಎಂ. ಪಾಟೀಲ

Dcp-dr-sanjiv-m-patil [1]ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಕ್ಕಳ ಅಪಹರಣದ ಯಾವುದೇ ಜಾಲವಿಲ್ಲ ಎಂದು ಡಿಸಿಪಿ ಡಾ. ಸಂಜೀವ ಎಂ. ಪಾಟೀಲ ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಮಕ್ಕಳ ಜಾಲ ಸಕ್ರಿಯವಾಗಿದೆ, ಮಕ್ಕಳ ಅಪಹರಣವಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಿರುವ ಡಿಸಿಪಿ, ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸಂದೇಶಗಳು ರವಾನೆಯಾಗುತ್ತಿವೆ. ಈ ಬಗ್ಗೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಇಂತಹ ಆಧಾರ ರಹಿತ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಒಂದು ವೇಳೆ ಸಂಶಯಾಸ್ಪದ ವ್ಯಕ್ತಿ, ವಾಹನ ಹಾಗೂ ವಸ್ತುಗಳ ಬಗ್ಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಮಾಹಿತಿ ನೀಡಿದರು.

ಪ್ರಯಾಣಿಕರು ಸೂಚಿಸಿದ್ದ ಸ್ಥಳಕ್ಕೆ ಬರಲು ಒಪ್ಪದ ಚಾಲಕರ ಹಾಗೂ ರಿಕ್ಷಾದ ಬಗ್ಗೆ 100ಕ್ಕೆ ಕರೆ ಮಾಡಿ ಮಾಹಿತಿ ನೀಡಿ. ಈ ಬಗ್ಗೆ ಕ್ರಮಕೈಗೊಂಡು ದಂಡ ವಸೂಲಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಶಾಲಾ ಕಾಲೇಜಿನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದ್ದರೂ, ಜಿಲ್ಲೆಯ ಕೆಲವು ಶಾಲಾ-ಕಾಲೇಜುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡದಿರುವುದು ಕಾನೂನು ಬಾಹಿರ. ಈ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಿ ಎಲ್ಲ ಕಡೆಗಳಲ್ಲಿ ಅಳವಡಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರು ಮನವಿ ಮಾಡಿದರು.

ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಕೆ.ಎಂ.ಶಾಂತರಾಜು ಭರವಸೆ ನೀಡಿದರು.