ಗಾಂಜಾ ಸಾಗಾಟ ಮಾಡುತ್ತಿದ್ದವನ ಬಂಧನ: ಗಾಂಜಾ ಸಹಿತ ವಶಕ್ಕೆ

3:45 PM, Tuesday, November 29th, 2016
Share
1 Star2 Stars3 Stars4 Stars5 Stars
(No Ratings Yet)
Loading...

Ganjaಮಂಗಳೂರು: ಜಿಲ್ಲೆ ಹಾಗೂ ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದವನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಕಾಸರಗೋಡು ಕುಂಬಳೆಯ ಇಬ್ರಾಹಿಂ (38) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಬಳಿಯಿಂದ ಬೃಹತ್ ಪ್ರಮಾಣದಲ್ಲಿ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪಂಪ್ವೆಲ್ ವೃತ್ತದ ಬಳಿಯಿರುವ ಹೊಟೇಲ್ ಪದ್ಮಶ್ರೀ ಮುಂಭಾಗದಲ್ಲಿ ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪುತ್ತೂರು, ಸುಳ್ಯ ಕಡೆಗೆ ಮಾರಾಟ ಮಾಡಲು ತೆರಳುವ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ಗಾಂಜಾದ ಆಂದಾಜು ಮೌಲ್ಯ 2,01,510 ರೂ ಎಂದು ಅಂದಾಜಿಸಲಾಗಿದೆ.

ಆರೋಪಿಯು 2014ರಲ್ಲಿಯೂ ಇದೇ ರೀತಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಈತನ ವಿರುದ್ಧ ವಾರಂಟ್ ಹೊರಡಿಸಿತ್ತು. ಆರೋಪಿಯನ್ನು ಗ್ರಾಮಾಂತರ ಠಾಣೆಗೆ ಒಪ್ಪಿಸಲಾಗಿದೆ.

ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English