ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ನಿಧನ,ಕಾರ್ಯಕ್ರಮ ರದ್ದು

12:01 PM, Saturday, October 7th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

siddaramiahಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರಿ ಚಿಕ್ಕಮ್ಮ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
90 ವರ್ಷ ವಯಸ್ಸಿನ ಚಿಕ್ಕಮ್ಮ ಅವರು ವಯೋ ಸಹಜ ಆನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇಂದು ದೇವೇಗೌಡನ ಹುಂಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದು, ಇಂದಿನ ತಮ್ಮ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English