- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಂಗ್ರೆಸ್ ಪಕ್ಷದ ಸಾಧನೆಯ ಬಗ್ಗೆ ಜನರಿಗೆ ತಿಳಿಸಿ: ಶಾಸಕ ಜೆ.ಆರ್.ಲೋಬೊ

JR lobo [1]ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು 43 ನೇ ಕುದ್ರೋಳಿ ವಾರ್ಡ್ ನ 94 ನೇ ಬೂತ್ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಸಾಧನೆಯ ಬಗ್ಗೆ ಜನರಿಗೆ ತಿಳುವಳಿಗೆ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಶಾಸಕ ಜೆ.ಆರ್.ಲೋಬೊ ಅವರು ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು.

ಕೆ ಎಸ್.ಎಂ. ಮಸೂದ್ ಅವರಿಗೆ ಶಾಸಕ ಜೆ.ಆರ್.ಲೋಬೊ ಅವರು ಕಾಂಗ್ರೆಸ್ ಸರ್ಕಾರದ ಸಾಧನೆಯ ಕುರಿತಾದ ಪುಸ್ತಕವನ್ನು ಹಸ್ತಾಂತರಿಸಿದರು. ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಸಹಿತ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.