ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮಾರಾಟ ಆರಂಭ

4:19 PM, Wednesday, December 13th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

mysore-silkಮಂಗಳೂರು: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮವು ನಗರದ ಲಾಲ್‌ಭಾಗ್ ಹಿಂದಿ ಪ್ರಚಾರ ಸಮಿತಿ ಹಾಲ್‌ನಲ್ಲಿ ಆಯೋಜಿಸಿರುವ ಆರು ದಿನಗಳ ಕರ್ನಾಟಕ ಪಾರಂಪರಿಕ ಉತ್ಪನ್ನವಾದ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಇಂದು ಚಾಲನೆ ಸಿಕ್ಕಿದೆ.

ಇಂದಿನಿಂದ ಡಿ.18ರವರೆಗೆ ನಡೆಯಲಿರುವ ಮಾರಾಟ ಮಳಿಗೆಯನ್ನು ಕಸಾಪ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಿದರು. ಈ ಸಂದರ್ಭ ಕೆಎಸ್‌ಐಸಿ ಮಾರುಕಟ್ಟೆ ಮ್ಯಾನೇಜರ್ ಭಾನುಪ್ರಕಾಶ್, ಗ್ರಾಹಕಿ ಮಣಿಪ್ರಭಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

ಈ ಪ್ರದರ್ಶನ-ಮಾರಾಟದಲ್ಲಿ 12 ಸಾವಿರ ರೂ.ನಿಂದ 1.25 ಲಕ್ಷ ರೂ. ವೌಲ್ಯದ ವಿವಿಧ ವಿನ್ಯಾಸದ ರೇಶ್ಮೆ ಸೀರೆಗಳು ಗ್ರಾಹಕರಿಗೆ ಲಭ್ಯವಿದೆ. ಈ ಮಳಿಗೆಯಲ್ಲಿ ಸುಮಾರು ಒಂದು ಕೋ.ರೂ. ವೌಲ್ಯದ ವಿವಿಧ ಬಗೆಯ ವಸ್ತ್ರಗಳು ಪ್ರದರ್ಶನ ಮತ್ತು ಮಾರಾಟಕ್ಕಿವೆ.

ಸಾಂಪ್ರದಾಯಿಕ ಮೈಸೂರು ಸಿಲ್ಕ್ ಸೀರೆಗಳಲ್ಲದೆ ನಾಜೂಕಾದ ವಿನ್ಯಾಸದ ಸಂಗ್ರಹಿತ ಕೇಪ್ ಡಿ ಚೈನ್ ಸೀರೆಗಳನ್ನು ಹಾಗೂ ಜಾರ್ಜೆಟ್ ಮತ್ತು ಸಾದಾ ಮುದ್ರಿತ ಸೀರೆಗಳನ್ನು ಟೈ ಸ್ಕಾರ್ಪ್ ಇತ್ಯಾದಿ ಉತ್ಪನ್ನಗಳನ್ನು ಪ್ರದರ್ಶಿತಗೊಳಿಸುತ್ತಿದೆ. ಇದಲ್ಲದೆ ನವನವೀನ ವಿವಾಹ ಸಂಗ್ರಹ ಸೀರೆಗಳನ್ನು ಪರಿಚಯಿಸಲಾಗಿದೆ. ಹಾಗೂ ಎಲ್ಲಾ ಉತ್ಪನ್ನಗಳ ಮೇಲೆ ಶೇ. 25 ವಿಶೇಷ ರಿಯಾಯಿತಿಯನ್ನು ನೀಡುತ್ತಿದೆ.

mysore-silk-2ಭಾರತದಲ್ಲಿ ದೊರೆಯುವ ರೇಷ್ಮೆ ವಸ್ತ್ರಗಳಿಗಿಂತ ಮೈಸೂರು ಸಿಲ್ಕ್ ವಿಬಿನ್ನವಾಗಿದೆ. ಇದು ಹಳೇ ಮೈಸೂರು ಪ್ರದೇಶದಲ್ಲಿ ದೊರೆಯುವ ಪ್ರಾಕೃತಿಕ ರೇಷ್ಮೆ ಗೂಡಿನಿಂದ ದೊರೆಯುವ ಅತ್ಯುತ್ತಮ ರೇಷ್ಮೆಯಿಂದ ತಯಾರಿಸಲ್ಪಟ್ಟಿದೆ. ಇದು ಬಟ್ಟೆಗಳಿಗೆ ವಿಶಿಷ್ಟವಾದ ಹೊಳಪು ಮತ್ತು ಭೌಗೋಳಿಕ ಸುವಾಸನೆಯನ್ನು ನೀಡಿದೆ.

ಮೈಸೂರು ಸಿಲ್ಕ್ ಸೀರೆಗಳ ಸಾಂಪ್ರದಾಯಿಕ ರೀತಿಯ ಉತ್ಪಾದನೆ ಬಟ್ಟೆಯಲ್ಲಿ ಅಳವಡಿಸಲಾಗಿರುವ ಹುರಿ ಮಾಡುವ ವಿಧಾನ, ಭಾರತದಲ್ಲಿ ದೊರೆಯುವ ಕ್ರೇಪ್ ಸಿಲ್ಕ್ ಬಟ್ಟೆಗಳಲ್ಲಿಯೇ ಅತ್ಯುತ್ತಮವಾಗಿರುವುದಲ್ಲದೇ ಬಟ್ಟೆಗೆ ವಿಶೇಷ ಮೆರಗನ್ನು ನೀಡಿದೆ. ಸೀರೆಗಳ ಜರಿಯು ಪರಿಶುದ್ದ ಚಿನ್ನ ಮತ್ತು ಬೆಳ್ಳಿಯಿಂದ ತಯಾರಿಸಲ್ಪಟ್ಟದ್ದು, ಅದುನಿಕತೆಯಿಂದ ಕೂಡಿದೆ. ಮೈಸೂರು ಸಿಲ್ಕ್ ಸೀರೆಗಳಿಗೆ ಜಿಯೋಗ್ರಫಿಕಲ್ ಇಂಡಿಕೇಶನ್ ನೊಂದಣಿಯನ್ನು ಪಡೆಯಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English