ಮಂಗಳೂರಲ್ಲಿ ಗಾಂಜಾ ಮಾರಾಟಗಾರನಿಂದ 50 ಸಾವಿರ ಮೌಲ್ಯದ ವಸ್ತುಗಳು ವಶಕ್ಕೆ

5:15 PM, Friday, January 5th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ganjaಮಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಬಂದರ್ ಅನ್ಸಾರಿ ರೋಡ್‌ನ ಅಬ್ದುಲ್ ರಹೀಮಾನ್ ಯಾನೆ ಕಂಡಿ ರಹೀಂ (45) ಎಂದು ಗುರುತಿಸಲಾಗಿದೆ. ಆತನಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮಾರಾಟಕ್ಕೆ ಇಟ್ಟುಕೊಂಡಿದ್ದ ಒಟ್ಟು 1.170 ಕೆ.ಜಿ. ಗಾಂಜಾ, ಆ್ಯಕ್ಟೀವಾ ಸ್ಕೂಟರ್, 2 ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು 50 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈತ ನಗರದ ಕಂಕನಾಡಿ ಫಾದರ್ ಮುಲ್ಲರ್ಸ್‌ ಆಸ್ಪತ್ರೆಯ ಗೇಟಿನ ಬಳಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ 9 ಪ್ರಕರಣಗಳು ದಾಖಲಾಗಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English