ತುಳು ಸಾಹಿತ್ಯ ಅಕಾಡೆಮಿ: ಮೂವರು ಸಾಧಕರಿಗೆ ಪ್ರಶಸ್ತಿ

5:19 PM, Friday, March 23rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

tulu-academyಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮೂರು ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಡಾ. ಎನ್‌. ನಾರಾಯಣ ಶೆಟ್ಟಿ(ಯಕ್ಷಗಾನ), ಸೇಸಪ್ಪ ಪಂಬದ ಮಂಜನಾಡಿ(ಜಾನಪದ) ಹಾಗೂ ಹೆಚ್. ಶಕುಂತಳಾ ಭಟ್ (ಸಾಹಿತ್ಯ) ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ, 2017ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಯಲ್ಲಿ ಪ್ರಶಸ್ತಿಗಾಗಿ ಮೂರು ವಿಭಾಗಗಳಲ್ಲಿ ತಲಾ 1 ಪುಸ್ತಕವನ್ನು ಆಯ್ಕೆ ಮಾಡಲಾಗಿದೆ.

ಅಧ್ಯಯನ ವಿಭಾಗದಲ್ಲಿ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ `ತುಳುನಾಡಿನ ಜಾನಪದ ಪ್ರದರ್ಶನ ಕಲೆಗಳು’, ಕವನ ಸಂಕಲನ ವಿಭಾಗದಲ್ಲಿ ರೂಪಕಲಾ ಆಳ್ವ ಅವರ `ಪಡೆಪ್ಪಿರೆ’ ಹಾಗೂ ಕಥಾ ಸಂಕಲದಲ್ಲಿ ಶಿಮಂತೂರು ಚಂದ್ರಹಾಸ ಸುವರ್ಣ ಅವರ `ಗಗ್ಗರ’ ಕೃತಿಯನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ ಎಂದರು.

ಗೌರವ ಪ್ರಶಸ್ತಿಯು ತಲಾ 50 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ಪುಸ್ತಕ ಬಹುಮಾನಕ್ಕೆ ತಲಾ 25 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಗುವುದು. ಏ.7ರಂದು ತುಳುಭವನದ ಸಿರಿ ಚಾವಡಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English