ಮಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೇರಳ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಮಂಗಳೂರು ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದರು.
ಕೇರಳ ರಾಜ್ಯ ಮತ್ತು ಕರ್ನಾಟಕ ರಾಜ್ಯದ ಗಡಿ ಭಾಗ ದಕ್ಷಿಣ ಕನ್ಬಡ ಜಿಲ್ಲೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಭೆ ನಡೆಸಲಾಯಿತು.
ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೆ ಗೌಡ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಎಸ್ಪಿ ಸಿಮೋನ್ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಗಡಿ ಭಾಗಗಳಲ್ಲಿ ಮಾಡಬಹುದಾದ ತಪಾಸಣೆ ಮತ್ತು ಅಹಿತಕರ ಘಟನೆ ನಡೆಯದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಚರ್ಚಿಸಿದರು.
ಎರಡು ಜಿಲ್ಲೆಗಳ ರೈಲ್ವೆ ಪೊಲೀಸ್ ಅಧಿಕಾರಿಗಳು, ಗುಪ್ತಚರ ವಿಭಾಗದ ಅಧಿಕಾರಿಗಳು, ಆಂತರಿಕ ಭದ್ರತಾ ಅಧಿಕಾರಿಗಳು ಹಾಗೂ ಕೋಸ್ಟಲ್ ಸೆಕ್ಯುರಿಟಿ ಫೋರ್ಸ್ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಯಿತು. ಎರಡು ಜಿಲ್ಲೆಗಳ ಇತರ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಜೊತೆಗಿದ್ದರು.
Click this button or press Ctrl+G to toggle between Kannada and English