ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ ಆರಂಭ…

6:12 PM, Thursday, April 12th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

putturಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವು ಎ.10ರಂದು ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭಗೊಂಡಿದೆ ಬೆಳಿಗ್ಗೆ ಗಂಟೆ 9.53ಕ್ಕೆ ವೃಷಭ ಲಗ್ನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ ಮತ್ತು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು. ಸಂಪ್ರದಾಯದಂತೆ ಪಿ.ಜಿ.ಜಗನ್ನಿವಾಸ್ ರಾವ್ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಕುಂಟಾರು ರವೀಶ್ ತಂತ್ರಿಗಳು ಧಾರ್ಮಿಕ ವಿಧಾನ ನೆರವೇರಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್. ಭಟ್ ಮತ್ತು ವಸಂತ ಕೆದಿಲಾಯರವರು ಸಹಕಾರ ನೀಡಿದರು. ಹರೀಶ್ ಭಟ್ ಶ್ರೀ ದೇವರ ಉತ್ಸವ ಬಲಿ ಕಾರ್ಯಕ್ರಮ ನೆರವೇರಿಸಿದರು. ಸಂಜೆ ಗಂಟೆ 5ಕ್ಕೆ ಶ್ರೀ ದೇವರ ಉತ್ಸವ ಬಲಿ ಪ್ರಾರಂಭಗೊಂಡಿತು.

puttur-2ರಾಜ್ಯ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಯು.ಪಿ.ರಾಮಕೃಷ್ಣ, ಎನ್.ಕರುಣಾಕರ ರೈ, ಸಂಜೀವ ನಾಯಕ್ ಕಲ್ಲೇಗ, ನಯನಾ ರೈ, ರೋಹಿಣಿ ಆಚಾರ್ಯ, ಜಾನು ನಾಯ್ಕ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಎನ್. ಕೆ. ಜಗನ್ನಿವಾಸ ರಾವ್, ನಗರ ಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಉಪಾಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ಸದಸ್ಯ ರಾಜೇಶ್ ಬನ್ನೂರು, ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಮಾಜಿ ಸದಸ್ಯೆ ಡಾ. ಸುಧಾ ಎಸ್.ರಾವ್, ಸಂತೋಷ್ ಕುಮಾರ್.ಎ, ಕಾರ್‍ಯನಿರ್ವಹಣಾಧಿಕಾರಿ ಜಗದೀಶ್ ಎಸ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಬಲ್ನಾಡು ಉಳ್ಳಾಲ್ತಿ ದಂಡನಾಯಕ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಗೌಡ, ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ದೇವಳದ ಮಾಜಿ ಮೊಕ್ತೇಸರ ರಮೇಶ್ ಬಾಬು, ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ನಿವೃತ್ತ ಉಪವಲಯ ಅರಣ್ಯಾಧಿಕಾರಿ ಕೃಷ್ಣಪ್ಪ ಕೆ, ರತ್ನಾಕರ ನಾಕ್, ಕಿಟ್ಟಣ್ಣ ಗೌಡ, ಸೇರಿದಂತೆ ಸಾವಿರಾರು ಮಂದಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೇವಳದ ಎದುರು ಭಾಗದಲ್ಲಿ ಕರುಣಾವಾರಿಧಿ ಕಾರುಚಾಲಕರ ಸಂಘದ ವತಿಯಿಂದ ಪಾನಕ ವ್ಯವಸ್ಥೆ ಮಾಡಲಾಗಿತ್ತು.

Putturu Jatre

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English