ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

1:29 PM, Wednesday, April 25th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

accidentಉಪ್ಪಿನಂಗಡಿ: ಲಾರಿಯೊಂದು ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಪೆದಮಲೆ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಪಿಲಿಗೂಡಿನ ಮೂಡಬೈಲ್‌ನ ಅಶೋಕ್ ಪೂಜಾರಿ (29) ಮೃತ ಬೈಕ್ ಸವಾರ. ಇವರು ಉಪ್ಪಿನಂಗಡಿಯಿಂದ ಬೆಳ್ತಂಗಡಿ ಕಡೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಎದುರುಗಡೆಯಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಇದರಿಂದ ಗಂಭೀರ ಗಾಯಗೊಂಡ ಅಶೋಕ್ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English