- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪುನೀತ್ ರಾಜ್‍ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ..ಪ್ರಾಣಾಪಾಯದಿಂದ ಪಾರು..!

punith-rajkumar [1]ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪವರ್ ಸ್ಟಾರ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಗುರುವಾರ ರಾತ್ರಿ 9.30ರ ಸುಮಾರಿಗೆ ಆಂಧ್ರ ಪ್ರದೇಶದ ಅನಂತಪುರ ಸಮೀಪದಲ್ಲಿ ಕಾರಿನ ಟಯರ್ ಬ್ಲಾಸ್ಟ್ ಆಗಿ ಮೂರು ರಸ್ತೆಗಳ ತಿರುವು ಗೊತ್ತಾಗದೇ ಇರುವ ಕಾರಣ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನ ಹೆಡ್ ಲೈಟ್ ಬಳಿ ಬಂಪರ್ ಗೆ ಹಾನಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪುನೀತ್, ನನಗೆ ಏನೂ ಆಗಿಲ್ಲ. ಚೆನ್ನಾಗಿಯೇ ಇದ್ದೇನೆ. ಕಾರಿನ ಟಯರ್ ಸ್ಫೋಟಗೊಂಡಿದೆ ಅಷ್ಟೇ. ಯಾರಿಗೂ ಏನೂ ಆಗಿಲ್ಲ. ನನ್ನ ಬಗ್ಗೆ ಕಾಳಜಿ ತೋರಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.