ಮಂಗಳೂರು : ರಂಜಾನ್ ತಿಂಗಳ ಹಗಲಿನಲ್ಲಿ ತೊಟ್ಟು ನೀರೂ ಕುಡಿಯದೆ, ಕಠಿಣ ವೃತದ ಮೂಲಕ ಹಸಿವಿನ ಕಠಿಣತೆಯನ್ನು ಅರಿತು, ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ ಉದ್ದೇಶವಾಗಿದೆ.
ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ ಇಂದು ಈದ್-ಉಲ್-ಫಿತರ್ ಬಂದಿದೆ. ಶುಕ್ರವಾರ ಮುಂಜಾನೆಯಿಂದಲೇ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬದ ಸಂಭ್ರಮ ಆಚರಣೆಯಲ್ಲಿ ತೊಡಗಿಕೊಂಡರು. ಮಂಗಳೂರಿನ ವಿವಿಧ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿದರು.
ನಗರದ ಬಾವುಟಾ ಗಡ್ಡದಲ್ಲಿರುವ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ರಂಜಾನ್ ವಿಶೇಷ ಈದ್ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆಯ ಬಳಿಕ ಶುಭಾಶಯ ವಿನಿಮಯ ಮಾಡಿಕೊಂಡರು. ಸಚಿವ ಯು.ಟಿ ಖಾದರ್ , ಜೆಡಿಎಸ್ ಮುಖಂಡ ಆಶ್ರಫ್ , ಮಸೂದ್ ಸೇರಿದಂತೆ ಇನ್ನಿತರ ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದರು. ಪ್ರಾರ್ಥನೆಯ ಬಳಿಕ ಶುಭಾಶಯ ಕೋರಿದರು.
ನಿನ್ನೆ ಕೇರಳದ ಕ್ಯಾಲಿಕಟ್ ನಲ್ಲಿ ಚಂದ್ರ ದರ್ಶನವಾದ ಹಿನ್ನಲೆ ಇಂದು ರಂಜಾನ್ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕರಾವಳಿಯಲ್ಲಿ ಸಂಭ್ರಮದಿಂದ ರಂಜಾನ್ ಆಚರಿಲಾಗುತ್ತಿದೆ.
Click this button or press Ctrl+G to toggle between Kannada and English