- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸೌತ್​ ಕೊರಿಯಾ ಅಧ್ಯಕ್ಷರ ಜತೆ ಮೋದಿ ಚರ್ಚೆ..ಸ್ಮಾರ್ಟ್​ ಸಿಟಿಗೆ ನೆರವಿನ ಭರವಸೆ

narendra-modi [1]ನವದೆಹಲಿ: ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಸೌತ್ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ನೋಯ್ಡಾದಲ್ಲಿ ಹೊಸದಾಗಿ ಆರಂಭಗೊಳ್ಳುತ್ತಿರುವ ದೇಶದ ಅತಿದೊಡ್ಡ ಮೊಬೈಲ್ ಕಂಪನಿ ಉದ್ಘಾಟನೆ ಮಾಡಲು ಇಬ್ಬರು ನಾಯಕರು ಪ್ರಯಾಣ ಬೆಳೆಸಿದರು. ಇದಕ್ಕೂ ಮೊದಲು ಜೇ-ಇನ್ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಇದಕ್ಕೂ ಮೊದಲು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಈ ವೇಳೆ, ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ ಸ್ಮಾರ್ಟ್ ಸಿಟಿಗೆ ತಾವೂ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ತಿಳಿಸಿದರು.

ದೇಶದಲ್ಲಿ ನಿರ್ಮಾಣವಾಗುತ್ತಿರುವ 100 ಸ್ಮಾರ್ಟ್ ಸಿಟಿಗಳ ನಿರ್ಮಾಣಕ್ಕಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.

ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಾಗಿ ನಾಯಕರುಗಳು ನೊಯ್ಡಾದಲ್ಲಿ ಸ್ಯಾಮ್ ಸಂಗ್ ಘಟಕಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ 2020ರ ವೇಳೆಗೆ ಪ್ರತಿ ತಿಂಗಳು 10 ದಶಲಕ್ಷ ಮೊಬೈಲ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ.