ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

5:21 PM, Monday, July 16th, 2018
Share
1 Star2 Stars3 Stars4 Stars5 Stars
(No Ratings Yet)
Loading...

hinduಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಶನಿವಾರ ಮಹಾನಗರದ ಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ’ಹಜ್ ಹೌಸ್’ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು ಕೊಟ್ಟು ಅವನ ಉದಾತ್ತೀಕರಣ ಮಾಡುವ ನಿರ್ಣಯವನ್ನು ಸರ್ಕಾರವು ರದ್ದು ಪಡಿಸಬೇಕು ಹಾಗೂ ಇನ್ನಿತರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯಿತು.

ಈ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಶ್ರೀಕುಮಾರ ಇವರಿಗೆ ಮನವಿ ನೀಡಲಾಯಿತು.

ಮನವಿ ನೀಡುವ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಚಂದ್ರ ಮೊಗೇರ, ಶ್ರೀ. ರಮೇಶ್ ನಾಯಕ್, ಸೌ. ಲೀಲಾವತಿ, ಶ್ರೀ. ಖೀಮಾರಾಮ್ ಚೌಧರಿ, ಶ್ರೀ. ಉಪೇಂದ್ರ ಆಚಾರ್ಯ, ಶ್ರೀ.ಪ್ರಭಾಕರ್ ನಾಯ್ಕ್, ಧರ್ಮಪ್ರೇಮಿಗಳಾದ ಶ್ರೀ. ಮಧುಸೂಧನ್ ಅಯ್ಯರ್ ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English