ಲೋಕಸಭಾ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ..!

1:17 PM, Wednesday, July 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

congressಬೆಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಕೊಳ್ಳಲು ನಿರ್ಧರಿಸಿವೆ. 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಲಿದ್ದು, 8 ಸ್ಥಾನಗಳು ಜೆಡಿಎಸ್ ಪಾಲಿಗೆ ಸಿಗಲಿವೆ ಎನ್ನುವ ಎಕ್ಸ್ಕ್ಲ್ಯೂಸಿವ್ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರ ನಡೆಸುತ್ತಿರುವ ದೋಸ್ತಿ ಪಕ್ಷಗಳು ಮುಂಬರುವ ಲೋಕಸಭಾ ಚುಮಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿ ಬಿಜೆಪಿಯನ್ನು ಮಣಿಸಲು ನಿರ್ಧರಿಸಿವೆ. ಇದಕ್ಕೆ ಪೂರಕ ಎನ್ನುವಂತೆ ಸ್ಥಾನಗಳ ಹಂಚಿಕೆ ಕಾರ್ಯದ ಮೊದಲ ಸುತ್ತಿನ ಮಾತುಕತೆಯನ್ನು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆಸಿದ್ದು, ಒಪ್ಪಂದಕ್ಕೆ ಉಭಯ ಪಕ್ಷಗಳು ಸಮ್ಮತಿಸಿವೆ ಎನ್ನುವ ಮಾಹಿತಿ ಜೆಡಿಎಸ್ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಹಳೆ ಮೈಸೂರು ಭಾಗ ಸೇರಿದಂತೆ ಜೆಡಿಎಸ್ ಪ್ರಬಲವಾಗಿರುವ ಕಡೆಗಳಲ್ಲಿ ಆ ಪಕ್ಷಕ್ಕೆ ಸ್ಥಾನ ಬಿಟ್ಟುಕೊಡಲು ನಿರ್ಧರಿಸಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್ಗೆ 28 ಲೋಕಸಭಾ ಕ್ಷೇತ್ರಗಳಲ್ಲಿ 8 ಕ್ಷೇತ್ರ ಬಿಟ್ಟು ಕೊಟ್ಟು, 20 ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಕೇವಲ 2 ಲೋಕಸಭಾ ಸ್ಥಾನ ಹೊಂದಿರುವ ಜೆಡಿಎಸ್ಗೆ 8 ಕ್ಷೇತ್ರಗಳನ್ನು ಬಿಟ್ಟುಕೊಡುವ ನಿರ್ಧಾರಕ್ಕೆ ಪರೋಕ್ಷವಾಗಿಯೇ ಪಕ್ಷದ ರಾಜ್ಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಧಾರವಾಡ, ಬಾಗಲಕೋಟೆ ಹಾಗೂ ಬೀದರ್ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡಲು ಕಾಂಗ್ರೆಸ್ ಸಮ್ಮತಿ ನೀಡಿದೆ ಎನ್ನಲಾಗಿದೆ.

ಜೆಡಿಎಸ್ ಆಪ್ತ ಮೂಲಗಳ ಪ್ರಕಾರ ಹಾಸನದಲ್ಲಿ ದೇವೇಗೌಡರು ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಅವರು ಸ್ಪರ್ಧೆ ಮಾಡದೇ ಇದ್ದಲ್ಲಿ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಲಿದೆ. ಮಂಡ್ಯದಿಂದ ಅಂಬರೀಶ್ ಅವರನ್ನು ತಮ್ಮ ಪಕ್ಷಕ್ಕೆ ಕರೆ ತಂದು ಕಣಕ್ಕಿಳಿಸಬೇಕು, ಶಿವಮೊಗ್ಗದಿಂದ ಮಾಜಿ ಶಾಸಕ ಮಧು ಬಂಗಾರಪ್ಪ, ಧಾರವಾಡದಿಂದ ಮಹದಾಯಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕೋನರೆಡ್ಡಿ, ಬಾಗಲಕೋಟೆಯಿಂದ ಪಿಜೆಆರ್ ಸಿಂಧ್ಯಾ, ಬೀದರ್ನಿಂದ‌ ರೇವುನಾಯಕ್ ಬೆಳಮಗಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿಯನ್ನು ಹೆಸರೇಳಲಿಚ್ಚಿಸದ ಜೆಡಿಎಸ್ ನಾಯಕರೊಬ್ಬರು ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English