ಮಂಗಳೂರು: ರಾಜ್ಯದಲ್ಲಿರುವ ಸಾಹಿತ್ಯ ಅಕಾಡೆಮಿಗಳಿಗೆ ತಲಾ 10 ಲಕ್ಷ ರೂ. ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹೇಳಿದ್ದಾರೆ.
ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಜಯಮಾಲಾ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ನನಗೆ ನೀಡಿರುವ ಎಲ್ಲ ಇಲಾಖೆಗಳಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಶಬರಿ ಮಲೆಗೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ದೇವರ ವಿಚಾರದಲ್ಲಿ ಯಾವುದೇ ಭೇದ ಮಾಡುವುದು ಸರಿಯಲ್ಲ. ಎಲ್ಲರಿಗೂ ದೇವರು ಒಬ್ಬನೇ.
ಈ ವಿಚಾರದಲ್ಲಿ ತಾರತಮ್ಯ ತಾರಬಾರದು. ಈ ವಿಚಾರದಲ್ಲಿ ಎಲ್ಲರನ್ನು ಸಮಾನವಾಗಿ ಕಾಣಬೇಕು ಎನ್ನುವುದು ನನ್ನ ನಿಲುವು ಎಂದು ಜಯಮಾಲಾ ಹೇಳಿದರು.
Click this button or press Ctrl+G to toggle between Kannada and English