ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಸ್ತಂಗತ

7:01 PM, Thursday, August 16th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Vajapeyi ನವದೆಹಲಿ: ಫೋಖ್ರಾನ್ ಅಣ್ವಸ್ತ್ರ ಪರೀಕ್ಷೆ ನಡೆಸಿ ಜಗತ್ತಿಗೆ ಭಾರತದ ಸಾಮರ್ಥ್ಯವನ್ನು ತೋರಿಸಿಕೊಟ್ಟ ಭಾರತೀಯ ರಾಜಕಾರಣದ ಅಜಾತಶತ್ರು, ಶ್ರೇಷ್ಠ ವಾಗ್ಮಿ, ದಾರ್ಶನಿಕ ಅಟಲ್ ಬಿಹಾರಿ ವಾಜಪೇಯಿ ಅವರು ವಿಧಿವಶರಾಗಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5.05 ಗಂಟೆಗೆ ಅವರು ವಿಧಿವಶರಾಗಿದ್ದಾರೆ ಎಂದು ಏಮ್ಸ್ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 93 ವರ್ಷದ ವಾಜಪೇಯಿ 2009ರಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದರು. ಬಳಿಕ ಅವರ ಒಂದೇ ಕಿಡ್ನಿ ಕಾರ್ಯನಿಹಿಸುತ್ತಿತ್ತು. ಕಳೆದ ಒಂಬತ್ತು ವಾರಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅಟಲ್ ಬಿಹಾರಿ ವಾಜಪೇಯಿ ಅವರು ಮಧ್ಯಪ್ರದೇಶದ ಗ್ವಾಲಿಯರ್ ನ ಶಿಂದೆ ಕಿ ಚವ್ವಾಣಿ ಎನ್ನುವ ಗ್ರಾಮದಲ್ಲಿ 1924ರಲ್ಲಿ ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ದಂಪತಿಗೆ ಜನಿಸಿದ್ದರು. ಕಾನ್ಪುರದ ಲಕ್ಷ್ಮೀಬಾಯಿ ಕಾಲೇಜಿನಲ್ಲಿ ರಾಜಕೀಯ ಶಾಸ್ತ್ರದಲ್ಲಿ ಮಾಸ್ಟರ್ ಡಿಗ್ರಿ ಪಡೆದ ಅಟಲ್ ಜೀ ಅವರು 1942ರಲ್ಲಿ ಕ್ವಿಟ್ ಇಂಡಿಯ ಚಳವಳಿಯ ಮೂಲಕ ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ನೇಹ ಸಂಪಾದಿಸಿದರು.

ಅಟಲ್ ಜೀ ಅವರು ವೀರ ಅರ್ಜುನ ಹಾಗೂ ಪಾಂಚಜನ್ಯ ಪತ್ರಿಕೆಗಳಿಗೆ ಪತ್ರಕರ್ತರಾಗಿ ಕವಿಯಾಗಿ ಸೇವೆ ಸಲ್ಲಿಸಿದ್ದರು.

ಅಟಲ್ ಜೀ ಅವರು ಪ್ರಧಾನಿಯಾಗಿದ್ದಾಗ ಫೋಖ್ರಾನ್ ಅಣ್ವಸ್ತ್ರ ಪರೀಕ್ಷೆ ನಡೆಸಿ ಜಗತ್ತಿಗೆ ಭಾರತದ ಸಾಮರ್ಥ್ಯವನ್ನು ತೋರಿಸಿದ್ದರು. ಇನ್ನು ತಮ್ಮ ಅವಧಿಯಲ್ಲೇ ಭಾರತೀಯ ಸೇನೆಗೆ ಹೆಚ್ಚಿನ ಅಧಿಕಾರವನ್ನು ನೀಡಿ ಗಡಿ ನುಸುಳುಕೋರರನ್ನು ಸದೆಬಡಿಸಿದ್ದರು. 1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತೆ ಮಾಡಿದ್ದರು.

ವಾಜಪೇಯಿ ನಡೆದು ಬಂದ ದಾರಿ:

1951 – ಭಾರತೀಯ ಜನ ಸಂಘ್ ಪಕ್ಷದ ಸಂಸ್ಥಾಪನೆ

1957 – ಎರಡನೇ ಲೋಕಸಭೆಗೆ ಚುನಾಯಿತರಾಗಿದ್ದು

1957-77 – ಸಂಸತ್ ನಲ್ಲಿ ಭಾರತೀಯ ಜನಸಂಘ್ ಪಕ್ಷದ ನಾಯಕನಾಗಿದ್ದು

1962 – ರಾಜ್ಯ ಸಭೆಯ ಸದಸ್ಯರಾಗಿದ್ದು

1966 – 67 – ಸರ್ಕಾರಿ ಖಾತ್ರಿ ಸಮಿತಿಯ ಛೇರ್ಮನ್

1967 – ನಾಲ್ಕನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು

1967-70 – ಸಾರ್ವಜನಿಕ ಖಾತೆ ಸಮಿತಿಗೆ ಛೇರ್ಮನ್

1968-73 – ಭಾರತೀಯ ಜನಸಂಘ್ ಪಕ್ಷದ ಅಧ್ಯಕ್ಷರಾಗಿ

1971 – ಐದನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

1977 – ಆರನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು

1977 – 79 – ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ

1977 – 80 – ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಾಗಿ

1980 – ಏಳನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

1980-86 – ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ

1980-84, 1986 ಹಾಗು 1993 – 96 – ಸಂಸತ್ ನಲ್ಲಿ ಬಿ ಜೆ ಪಿ ನಾಯಕ ರಾಗಿ

1986 – ರಾಜ್ಯಸಭಾ ಸದಸ್ಯರಾಗಿ

1988 – 90 – ಗೃಹ ಸಮಿತಿ ಸದಸ್ಯರಾಗಿ ಹಾಗು ವ್ಯಾಪಾರ ವ್ಯವಹಾರ ಸಲಹಾ ಸಮಿತಿಯ ಸದಸ್ಯರಾಗಿ

1991 – ಹತ್ತನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು

1991-93 – ಸಾರ್ವಜನಿಕ ಖಾತೆ ಸಮಿತಿಯ ಛೇರ್ಮನ್

1993-96 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್ ಹಾಗು ಲೋಕಸಭಾ ವಿಋಒಶ ಪಕ್ಷದ ನಾಯಕ

1996- ಹನ್ನೊಂದನೇ ಲೋಕಸಭೆಗೆ ಮರುಚುನಾಯಿತ

16 ಮೇ 1996 – 31 ಮೇ 1996 – ಭಾರತದ ಪ್ರಧಾನ ಮಂತ್ರಿಯಾಗಿ

1996-97 – ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ

1997-98 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್

1998 – ಹನ್ನೆರಡನೆ ಲೋಕಸಭೆಗೆ ಮರುಚುನಾಯಿತರಾಗಿದ್ದು

1998-99 – ಭಾರತದ ಪ್ರಧಾನ ಮಂತ್ರಿಗಳು, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ಹಾಗು ಹಂಚಿಕೆಯಾಗದೆ ಉಳಿಕೆಯಾದ ಖಾತೆಗಳ ಸಚಿವರು

1999 – ಹದಿಮೂರನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

13 ಅಕ್ಟೋಬರ್ 1999 ರಿಂದ 13 ಮೇ 2004 ರವರೆಗೆ – ಭಾರತದ ಪ್ರಧಾನ ಮಂತ್ರಿಗಳಾಗಿ

2004 – ಹದಿನಾಲ್ಕನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

2005 – ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ

ಪ್ರಶಸ್ತಿಗಳು:

1992 ರಲ್ಲಿ, ಪದ್ಮ ವಿಭೂಷಣ.

1994 ರಲ್ಲಿ, ಲೋಕಮಾನ್ಯ ತಿಲಕ್ ಪ್ರಶಸ್ತಿ.

1994 ರಲ್ಲಿ, ಉತ್ತಮ ರಾಜಕೀಯ ಪಟು ಗೌರವ.

1994 ರಲ್ಲಿ, ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ.

2015 ರಲ್ಲಿ ಭಾರತ ರತ್ನ ಪ್ರಶಸ್ತಿ.

2015 ರಲ್ಲಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿ

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English