ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ 5 ಮಂದಿ ಪೊಲೀಸರ ವಶಕ್ಕೆ

10:10 AM, Saturday, August 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

arrestedಮಂಗಳೂರು: ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು, 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಸರಗೊಡು ಮಂಜೇಶ್ವರದ ಕುಂಜತ್ತೂರಿನ ವಿಜೇಶ್ ಕುಮಾರ್(34), ಪುತ್ತೂರಿನ ನರಿಮೊಗರುವಿನ ನಿತಿನ್ (35), ಮಂಗಳೂರಿನ ಬಿಜೈ ರಸ್ತೆಯ ಸಂತೋಷ್ ಕುಮಾರ್ (36), ಮಂಗಳೂರು ಬೋಂದೆಲ್ನ ಸಂದೀಪ್ ಕುಮಾರ್ (34), ಮಂಗಳೂರಿನ ಬಿಕರ್ನಕಟ್ಟೆಯ ರಾಹುಲ್(26) ಎಂಬುವರನ್ನು ಪೊಲಿಸರು ಬಂಧಿಸಿದ್ದಾರೆ.

ಬಂಧಿತರಿಂದ 50 ಸಾವಿರ ರೂ. ಮೌಲ್ಯದ ಮಾದಕ ವಸ್ತುವಾದ ಕೋಕೆನ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಗೋವಾದಿಂದ ಈ ಮಾದಕ ವಸ್ತು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ ಒಟ್ಟು 19.57 ಲಕ್ಷ ಮೌಲ್ಯದ ಹೊಂಡಾ ಜಾಝ್, ಹುಂಡೈ ಐ20, ಮಾರುತಿ ಝೆನ್, 7 ಮೊಬೈಲ್ ಫೋನ್ ಹಾಗೂ 1,02,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಶಾಂತಾರಾಮ, ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಾರುತಿ ನಾಯಕ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಸಿಬ್ಬಂದಿ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English