ಕೆಸಿಸಿ ಕಪ್ 2018 ಉದ್ಘಾಟನೆಗೆ ಸಿಎಂಗೆ ಸುದೀಪ್ ಆಹ್ವಾನ

12:06 PM, Tuesday, September 4th, 2018
Share
1 Star2 Stars3 Stars4 Stars5 Stars
(No Ratings Yet)
Loading...

sudeepಬೆಂಗಳೂರು: ಕೆಸಿಸಿ ಕಪ್ 2018 ಉದ್ಘಾಟನೆಗೆ ಆಗಮಿಸುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಆಹ್ವಾನ ನೀಡಿದ್ದಾರೆ.

ಕೆಸಿಸಿ ಎರಡನೇ ಲೀಗ್ ಇದೇ ತಿಂಗಳು 8 ಮತ್ತು 9 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ಪಂದ್ಯಗಳ ಉದ್ಘಾಟನೆ ನಡೆಯಲಿದೆ. ಈ ಸಮಾರಂಭಕ್ಕೆ ಆಗಮಿಸುವಂತೆ ಸಿಎಂಗೆ ಆಹ್ವಾನಿಸಲಾಗಿದೆ.

ಇನ್ನು ಮೊನ್ನೆಯಷ್ಟೆ ವಿಧಾನಸೌಧದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದ ಸುದೀಪ್, ಅವರಿಗೂ ಕೂಡ ಕೆಸಿಸಿ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English