ಹೋಂವರ್ಕ್ ಮಾಡದ್ದಕ್ಕೆ ಉಪನ್ಯಾಸಕನಿಂದ ಹಲ್ಲೆ ಆರೋಪ… ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

10:06 AM, Wednesday, September 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

mangloreಪುತ್ತೂರು: ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿಯೋರ್ವನ ಕೆನ್ನೆ ಮತ್ತು ತಲೆಗೆ ಕೈಯಿಂದ ಬಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ವಿದ್ಯಾರ್ಥಿ ಈಗ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷದ ಡಿಪ್ಲೋಮ ವಿದ್ಯಾರ್ಥಿ, ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಕೊಡಾಜೆ ನಿವಾಸಿ ಮಹಮ್ಮದ್ ಶರೀಫ್ ಅವರ ಪುತ್ರ ಮಹಮ್ಮದ್ ಮನ್ಸೂರ್ (18) ಹಲ್ಲೆಗೊಳಗಾದ ವಿದ್ಯಾರ್ಥಿ.

ಪ್ರಥಮ ಇಂಟರ್ನಲ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ ಪ್ರಶ್ನೆಗಳಿಗೆ 2 ಸಲ ಉತ್ತರ ಬರೆದುಕೊಂಡು ಬರುವಂತೆ ಕಾಲೇಜಿನ ಉಪನ್ಯಾಸಕ ಶಿವಪ್ರಸಾದ್ ಅವರು ವಾರದ ಹಿಂದೆ ವಿದ್ಯಾರ್ಥಿಗಳಿಗೆ ತಿಳಿಸಿದ್ದರು ಎನ್ನಲಾಗಿದೆ.

ಮಂಗಳವಾರ ಮೊದಲ ತರಗತಿ ಅವಧಿಯಲ್ಲಿ ಉಪನ್ಯಾಸಕ ಶಿವಪ್ರಸಾದ್ ಅವರು ತರಗತಿಗೆ ಬಂದು ಈ ಹೋಂ ವರ್ಕ್ ಬಗ್ಗೆ ವಿದ್ಯಾರ್ಥಿಗಳಲ್ಲಿ ವಿಚಾರಿಸಿದ್ದರು. ತಾನು ಹೋಂ ವರ್ಕ್ ಮಾಡಿರಲಿಲ್ಲ. ಈ ಕಾರಣಕ್ಕಾಗಿ ಅವರು ನನ್ನ ಕೆನ್ನೆ ಮತ್ತು ತಲೆಯ ಭಾಗಕ್ಕೆ 5 ಬಾರಿ ಕೈಯಿಂದ ಹಲ್ಲೆ ನಡೆಸಿದ್ದಾರೆ. ತರಗತಿ ಅವಧಿಯ ಬಳಿಕ ತಲೆಸುತ್ತಿದಂತಾಗಿ ತರಗತಿ ಹೊರಗಡೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ಬಂದಿದ್ದೆ. ಆಗ ನನ್ನನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಮಹಮ್ಮದ್ ಮನ್ಸೂರ್ ಆರೋಪಿಸಿದ್ದಾರೆ.

ಮಹಮ್ಮದ್ ಮನ್ಸೂರ್ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ತನ್ನ ಮೇಲೆ ಹಲ್ಲೆ ನಡೆಸಿರುವ ಉಪನ್ಯಾಸಕ ಶಿವಪ್ರಸಾದ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English