ಪೊಲೀಸ್​ ಭದ್ರತೆಯಲ್ಲಿ ಹಬ್ಬಗಳ ಆಚರಣೆ ಮಾಡುವ ಪರಿಸ್ಥಿತಿ ಬದಲಾಗಲಿ: ಡಾ. ಟಿ.ಆರ್.ಸುರೇಶ್

10:14 AM, Friday, September 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

t-r-sureshಮಂಗಳೂರು: ಇಂದು ಎಲ್ಲಾ ಧರ್ಮಗಳ ಹಬ್ಬಗಳನ್ನು ಪೊಲೀಸ್ ಭದ್ರತೆಯಲ್ಲಿ ಮಾಡುವ ಪರಿಸ್ಥಿತಿ ಇದ್ದು, ಇದನ್ನು ಹೋಗಲಾಡಿಸಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ. ಟಿ.ಆರ್.ಸುರೇಶ್ ಕುಮಾರ್ ಹೇಳಿದ್ದಾರೆ.

ಮಂಗಳೂರಿನ ನೆಹರು ಮೈದಾನದಲ್ಲಿ ಹಿಂದು ಯುವ ಸೇನೆಯಿಂದ ನಡೆಯುತ್ತಿರುವ 26ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಹಬ್ಬಗಳ ಸಂದರ್ಭದಲ್ಲಿ ಎಲ್ಲರೂ ಹಬ್ಬಗಳ ಆಚರಣೆಯಲ್ಲಿ ತೊಡಗಿದ್ದರೆ, ಪೊಲೀಸರು ಭದ್ರತಾ ಕೆಲಸದಲ್ಲಿರುತ್ತಾರೆ. ಇಂದು ಎಲ್ಲಾ ಧರ್ಮಗಳ ಹಬ್ಬಗಳ ಆಚರಣೆಗಳು ಪೊಲೀಸ್ ಬಂದೋಬಸ್ತಿನಲ್ಲಿ ನಡೆಯುತ್ತಿವೆ. ಕಿಡಿಗೇಡಿಗಳು ತಮ್ಮ ವೈಯಕ್ತಿಕ ದ್ವೇಷವನ್ನು ಇಂತಹ ಸಂದರ್ಭದಲ್ಲಿ ತೀರಿಸಿ ಸಮಾಜದಲ್ಲಿ ಆತಂಕ ಸೃಷ್ಟಿಸುತ್ತಾರೆ. ಇದನ್ನು ಹೋಗಲಾಡಿಸುವ ಕೆಲಸ ಆಗಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಸಾಪ ದ.ಕ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನೆಹರು ಮೈದಾನದಲ್ಲಿ ಕಳೆದ 26 ವರ್ಷಗಳಿಂದ ಹಿಂದು ಯುವ ಸೇನೆಯಿಂದ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದ್ದು, ಈ ಬಾರಿಯ ಗಣೇಶೋತ್ಸವದ ಪ್ರಯುಕ್ತ ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಏಳು ದಿನಗಳ ಕಾಲ ನಡೆಯುವ ಕಾರ್ಯಕ್ರಮದ ಬಳಿಕ ಗಣೇಶ ಮೂರ್ತಿಯ ವಿಸರ್ಜನೆ ನಡೆಯಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English