ಅಕ್ರಮ ಮರಳು ದಾಸ್ತಾನು: ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ

10:36 AM, Friday, September 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

policeಮಂಗಳೂರು: ತಾಲೂಕಿನ ವಳಚ್ಚಿಲ್, ಅಡ್ಯಾರ್ ಮತ್ತು ಅರ್ಕುಳಗಳ ಖಾಸಗಿ ಸ್ಥಳದಲ್ಲಿ ಸಾಮಾನ್ಯ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಅಕ್ರಮ ಮರಳು ದಾಸ್ತಾನು ಅಡ್ಡೆಯನ್ನು ಪತ್ತೆ ಮಾಡಿ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಕರೆಸಿಕೊಂಡು 5 ಲಕ್ಷ ರೂ. ಮೌಲ್ಯದ ಸುಮಾರು 780 ಟನ್ ಮರಳನ್ನು ವಶಕ್ಕೆ ನೀಡಲಾಗಿದೆ.

ಪತ್ತೆಯಾದ ಅಕ್ರಮ ಮರಳನ್ನು ಯಾರು ಯಾವ ಕಾರಣಕ್ಕಾಗಿ ಕಳವು ಮಾಡಿ ದಾಸ್ತಾನು ಮಾಡಿದ್ದಾರೆ ಎಂಬ ಬಗ್ಗೆ ತಿಳಿದುಕೊಳ್ಳಲು ತನಿಖೆ ಕೈಗೊಳ್ಳಲಾಗಿದೆ. ಮಂಗಳೂರು ದಕ್ಷಿಣ ಉಪ-ವಿಭಾಗದ ಎಸಿಪಿ ಕೆ ರಾಮರಾವ್ ಅವರು, ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳ ಮತ್ತು ಮಂಗಳೂರು ಗ್ರಾಮಾಂತರ ಠಾಣೆಯ ಅಧಿಕಾರಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದಾಗ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English