ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು : ಐವನ್

8:44 PM, Monday, October 1st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Senior citizenಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮಂಗಳೂರಿನ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಆಚರಿಸಲಾಯಿತು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು. ಪ್ರತಿ ತಾಲೂಕಿನಲ್ಲೂ ರಿಕ್ರೇಷನ್ ಕ್ಲಬ್ ಸ್ಥಾಪನೆ ಮಾಡಬೇಕು. ಈ ಮೂಲಕ ಹಿರಿಯ ನಾಗರಿಕರಿಗೆ ಗೌರವ ನೀಡಬೇಕು ಎಂದು ಹೇಳಿದರು.

Senior citizenಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಅಲ್ಲದೇ ದುಬೈ ಯಲ್ಲಿ ನಡೆದ ಪವರ್ ಲಿಪ್ಟಿಂಗ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನ ಪದಕಗಳಿಸಿದ ಹೇಮಚಂದ್ರ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಸಕ ಡಿ. ವೇದವ್ಯಾಸ್ ಕಾಮತ್ ವಹಿಸಿದ್ದರು. ಈ ವೇಳೆ ಶಾಸಕ ಡಾ. ವೈ.ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Senior citizen

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English