ಮಂಗಳೂರು: ಕರೆಂಟ್ ಶಾಕ್ ಹೊಡೆದು ಎಸ್ಡಿಪಿಐ ಮುಖಂಡ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ದರ್ಬೆಯಲ್ಲಿ ನಡೆದಿದೆ.
ನಾಳೆ ಎಸ್ಡಿಪಿಐ ಪಕ್ಷದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಇದರ ಫ್ಲೆಕ್ಸ್ ಕಟ್ಟುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಪುತ್ತೂರು ನಗರದ ಎಸ್ಡಿಪಿಐ ಅಧ್ಯಕ್ಷ ಹಂಝ ಅಪ್ನಾನ್ ಮೃತಪಟ್ಟಿದ್ದಾರೆ.
ಪುತ್ತೂರಿನ ದರ್ಬೆ ಪೆಟ್ರೋಲ್ ಬಂಕ್ ಬಳಿ ಕಬ್ಬಿಣದ ಚೌಕಟ್ಟು ಹಾಕಿದ್ದ ಫ್ಲೆಕ್ಸನ್ನು ಕಟ್ಟುತ್ತಿರುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ತಗುಲಿ ದುರಂತ ಸಂಭವಿಸಿದೆ. ಶಾಕ್ ಹೊಡೆದ ಕಾರಣ ಫ್ಲೆಕ್ಸ್ ಕಟ್ಟುತ್ತಿದ್ದ ಹಂಝ ಅಫ್ನಾನ್ ಮೃತಪಟ್ಟಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English