ಮಂಗಳೂರು ಜೈಲಿನೊಳಗೆ ಭೇಟಿಯ ನೆಪದಲ್ಲಿ ಗಾಂಜಾ ಪೂರೈಸುತ್ತಿದ್ದ ಯುವತಿ ಅಂದರ್

5:02 PM, Friday, October 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

jailಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಮತ್ತು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯನ್ನು ಭೇಟಿ ಮಾಡುವ ನೆಪದಲ್ಲಿ ಈಕೆ ಗಾಂಜಾ ಪೂರೈಕೆ ಮಾಡುತ್ತಿದ್ದಳು. ಮಂಗಳೂರು ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳನ್ನು ಭೇಟಿ ಮಾಡುವ ಸಮಯದಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುವಾದ ಗಾಂಜಾವನ್ನು ನೀಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಸ್ತಾಫ ಎಂಬಾತನಿಗೆ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆಕೆಯಿಂದ 20 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಯುವತಿಗೆ ಗಾಂಜಾವನ್ನು ನೀಡಿದ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಮತ್ತು ಬರ್ಕೆ ಪೊಲೀಸ್ ಠಾಣಾ ಪಿಎಸ್ಐ ಶೋಭಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English