ಪುತ್ತೂರು: ನಗರದ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಇಂದು ಮಹಿಳೆವೋರ್ವಳ ಮೃತದೇಹ ಪತ್ತೆಯಾಗಿದೆ.
ಪುತ್ತೂರು ಮಹಾವೀರ ಆಸ್ಪತ್ರೆಯ ಬಳಿಯ ನಿವಾಸಿ ವಿಜಯಲಕ್ಷ್ಮಿ(55) ಮೃತಪಟ್ಟ ಮಹಿಳೆ. ಕೆರೆಯಲ್ಲಿ ತೇಲುತ್ತಿದ್ದ ವಿಜಯಲಕ್ಷ್ಮಿಯವರ ಮೃತದೇಹವನ್ನು ಮೇಲಕ್ಕೆತ್ತಿ ಸಂಬಂಧಿಕರಿಗೆ ಒಪ್ಪಿಸಲಾಗಿದೆ.
ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Click this button or press Ctrl+G to toggle between Kannada and English