ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡಲು ಜಿಲ್ಲಾಧಿಕಾರಿ ಶಿಫಾರಸ್ಸು

3:51 PM, Saturday, November 17th, 2018
Share
1 Star2 Stars3 Stars4 Stars5 Stars
(No Ratings Yet)
Loading...

mysuruಮೈಸೂರು: ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಸೂರು ಪಾರಂಪರಿಕ ಪ್ರದೇಶ ಅಭಿವೃದ್ಧಿ ಮತ್ತು ಸಂರಕ್ಷಣಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ಮೈಸೂರು ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಜನದಟ್ಟಣೆಯನ್ನು ನಿವಾರಿಸಲು ರಸ್ತೆಗಳನ್ನು ಅಗಲೀಕರಿಸುವ ಸಂಬಂಧ ಅಲ್ಲಿರುವ ಪಾರಂಪರಿಕ ಕಂಬಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚಿಸಲಾಯಿತು. ಸಮಿತಿ ಸದಸ್ಯರು ತುರ್ತಾಗಿ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಪಾರಂಪರಿಕ ಕಟ್ಟಡಗಳನ್ನು ಗುರುತಿಸಲು ಉಪ ಸಮಿತಿಗಳನ್ನು ರಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದೇ ಉಪ ಸಮಿತಿಗಳು ಈಗಾಗಲೇ ಗುರುತಿಸಿರುವ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಕುರಿತು ಅಧ್ಯಯನ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿ ನಿಲಯವನ್ನು ಪಾರಂಪರಿಕ ಶೈಲಿಯಲ್ಲಿ ಪುನರ್ ನಿರ್ಮಿಸುವ ಬಗ್ಗೆ ಸಮಿತಿ ಸದಸ್ಯರು ಸ್ಥಳ ಪರಿಶೀಲನೆ ಮಾಡಿ ಅಭಿಪ್ರಾಯ ನೀಡಲು ತಿಳಿಸಲಾಯಿತು. ಮೈಸೂರಿನ ಜಾನಪದ ವಸ್ತುಸಂಗ್ರಹಾಲಯ ಇರುವ ಜಯಲಕ್ಷ್ಮಿ ವಿಲಾಸ ಅರಮನೆಯ ಮೇಲಂತಸ್ತು ಶಿಥಿಲವಾಸ್ಥೆಯಲ್ಲಿರುವುದರಿಂದ ವಸ್ತುಸಂಗ್ರಹಾಲಯದ ಗೌರವ ನಿರ್ದೇಶಕರ ಕೋರಿಕೆಯಂತೆ ಅದನ್ನು ಸಂರಕ್ಷಣೆ ಮಾಡುವ ಬಗ್ಗೆ ಸಮಿತಿ ಸದಸ್ಯರು ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ ತಿಳಿಸಲಾಯಿತು.

ಸರಸ್ವತಿಪುರಂ ಈಜುಕೊಳದ ಹತ್ತಿರುವಿರುವ ದುರ್ಗಯ್ಯನ ಕೊಳ ಸ್ಥಳವನ್ನು ಮಹಾನಗರ ಪಾಲಿಕೆಯು ತಂತಿಬೇಲಿಯನ್ನು ಹಾಕಿ ಕಸ ಬೀಳದಂತೆ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು, ಬನ್ನೂರು ರಸ್ತೆಯಲ್ಲಿರುವ ಅಂದಾನಿ ಮಂಟಪ, ನಂಜನಗೂಡು ರಸ್ತೆಯಲ್ಲಿರುವ ಶೃಂಗಾರ ಕೊಳ ಸಂರಕ್ಷಣೆ ಮಾಡಿ, ನಿರ್ವಹಣೆ ಮಾಡಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English